ಪೌರಕಾರ್ಮಿಕರು ಸರ್ಕಾರಿ ಸೌಲಭ್ಯ ಸಮರ್ಪಕವಾಗಿ ಬಳಸಲಿಪೌರ ಕಾರ್ಮಿಕರಿಗೆ ವರ್ಷಕ್ಕೆ ಮೂರು ಬಾರಿ ಉಚಿತ ಆರೋಗ್ಯ ತಪಾಸಣೆ, 2 ಬಾರಿ ಸಮವಸ್ತ್ರ, ೨೧ ದಿನಕ್ಕೆ ವಿಶೇಷ ಭತ್ಯೆ ಹಾಗೂ ಸುರಕ್ಷತಾ ಸಾಮಗ್ರಿಗಳನ್ನು ಸರ್ಕಾರ ನೀಡುತ್ತಿದೆ. ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸುವುದು ಮುಖ್ಯವಾಗಿದೆ ಎಂದು ಹಿರಿಯ ಆರೋಗ್ಯ ನಿರೀಕ್ಷಕ ರವಿಪ್ರಕಾಶ್ ಹೇಳಿದ್ದಾರೆ.