ಉತ್ತಮ ಆರೋಗ್ಯವೇ ವಿದ್ಯಾರ್ಥಿಗಳ ನಿಜವಾದ ಸಂಪತ್ತುಉತ್ತಮ ಆರೋಗ್ಯವೇ ವಿದ್ಯಾರ್ಥಿಗಳ ನಿಜವಾದ ಸಂಪತ್ತು. ವಿದ್ಯಾರ್ಥಿಗಳು ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಂಡು ಉತ್ತಮ ಆರೋಗ್ಯ ಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ತಾಲೂಕು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಂಕರ್ ಹೇಳಿದ್ದಾರೆ. ತಾಲೂಕು ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಪ್ರದೀಪ್ ಮಾತನಾಡಿ, ವಯೋಸಹಜ ಆಕರ್ಷಣೆಯಿಂದ ಯುವಜನತೆ ದುಶ್ಚಟಗಳಿಗೆ ಬಲಿಯಾಗದೆ, ತಮ್ಮ ಶಕ್ತಿ ಮತ್ತು ಸಾಮರ್ಥ್ಯವನ್ನು ಸಮಾಜದ ಅಭಿವೃದ್ಧಿಗೆ ಸಮರ್ಪಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.