ವೆಸ್ಟ್‌ಇಂಡೀಸ್ ವಿರುದ್ಧ ಅ.2ರಿಂದ ತವರಿನಲ್ಲಿ ನಡೆಯಲಿರುವ 2 ಪಂದ್ಯಗಳ ಟೆಸ್ಟ್ ಸರಣಿಗೆ ಗುರುವಾರ ಭಾರತ ತಂಡ ಪ್ರಕಟಗೊಂಡಿತು.
ರಾಜ್ಯದ ಗಡಿಜಿಲ್ಲೆ ಕಾಸರಗೋಡಿನಲ್ಲಿ ಕನ್ನಡ ನಾಮಫಲಕ ಅಳವಡಿಸುವಂತೆ ಕೇಂದ್ರ ಅಲ್ಪಸಂಖ್ಯಾತರ ಇಲಾಖೆಯು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಸಕಾರತ್ಮಕವಾಗಿ ಸ್ಪಂದಿಸಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ತಿಳಿಸಿದ್ದಾರೆ
ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಅವಕಾಶ ಮಾಡಿಕೊಡಲು ನೀತಿ ರೂಪಿಸಲು ಒಂದು ತಿಂಗಳು ಕಾಲಾವಕಾಶ ನೀಡಿದರೂ ಕ್ರಮ ಕೈಗೊಳ್ಳದ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಬೈಕ್ ಟ್ಯಾಕ್ಸಿಗೆ ವಿಧಿಸಿರುವ ನಿರ್ಬಂಧಕ್ಕೆ ತಡೆ ನೀಡುವ ಬಗ್ಗೆ ಪರಿಶೀಲಿಸುತ್ತಿರುವುದಾಗಿ ಮೌಖಿಕವಾಗಿ ತಿಳಿಸಿದೆ.
ನ್ಯಾಯಾಲಯದ ಆದೇಶದಲ್ಲಿ ತಿಳಿಸಿರುವ ಯಾವುದೇ ಸೌಲಭ್ಯಗಳನ್ನೂ ಜೈಲಧಿಕಾರಿಗಳು ಕಲ್ಪಿಸಿಲ್ಲ. 25 ಅಡಿ ಉದ್ದ ಮತ್ತು 3 ಅಡಿ ಅಗಲದ ಪ್ಯಾಸೇಜ್‌ನಲ್ಲಿ ವಾಕಿಂಗ್ ಮಾಡಲು ಅನುಮತಿಸಿದ್ದಾರೆ. ಈ ಜಾಗದಲ್ಲಿ ಸೂರ್ಯನ ಕಿರಣ ಸಹ ಬೀಳುವುದಿಲ್ಲ
ಬೆಂಗಳೂರು : ರಾಜ್ಯದಲ್ಲಿ ಕಳೆದ ಸೋಮವಾರದಿಂದ ಆರಂಭವಾಗಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಮುಂದುವರಿಸಲು ಹೈ ಕೋರ್ಟ್ ಗುರುವಾರ ತಡೆಯಾಜ್ಞೆ ನೀಡಲು ನಿರಾಕರಿಸಿ ಹಸಿರು ನಿಶಾನೆ ತೋರಿದೆ.
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಬುರುಡೆ ಟೀಂ ತಾನು ಸುಪ್ರೀಂಕೋರ್ಟ್‌ನಲ್ಲಿ ಛೀಮಾರಿ ಹಾಕಿಸಿಕೊಂಡಿದ್ದ ವಿಚಾರವನ್ನು ಮುಚ್ಚಿಟ್ಟು ಸರ್ಕಾರವನ್ನು ಏಮಾರಿಸಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅಡಿ ಮನೆಗಳನ್ನು ಗುರುತಿಸಿ ಪಟ್ಟಿ (ಯುಎಚ್ಐಡಿ) ಮಾಡುವ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಬೆಸ್ಕಾಂ ಮೀಟರ್ ರೀಡರ್‌ಗಳು ಹಾಗೂ ಬೆಸ್ಕಾಂ ಎಡವಟ್ಟಿನಿಂದ ವಿದ್ಯುತ್ ಬಿಲ್ ಶಾಕ್‌ಗೆ ತುತ್ತಾಗಿದ್ದ ‘ಗೃಹಜ್ಯೋತಿ’ ಫಲಾನುಭವಿಗಳು ಇದೀಗ ನಿರಾಳರಾಗಿದ್ದಾರೆ.