ಸೆ.22 ರಿಂದ ಶುರುವಾಗಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಗೆ ಸರ್ವರ್ ಸಮಸ್ಯೆ, ಆ್ಯಪ್‌ನಲ್ಲಿನ ಲೋಪದೋಷ, ಗಣತಿದಾರರ ನಿರ್ಲಕ್ಷ್ಯದಿಂದ ಹಿನ್ನಡೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸಭೆ ನಡೆಸಿ ಅಧಿಕಾರಿಗಳಿಗೆ ಚುರುಕು ಮುಟ್ಟಿಸಲಿದ್ದಾರೆ.