ನುಗ್ಗೇಹಳ್ಳಿ ಹೋಬಳಿ ಕೇಂದ್ರದಲ್ಲಿ ಸಂತಾಪಎಲ್ ಭೈರಪ್ಪನವರ ನಿಧನಕ್ಕೆ ಹೋಬಳಿ ಕೇಂದ್ರದಲ್ಲಿ ವಿವಿಧ ಸಂಘ ಸಂಸ್ಥೆಗಳು, ಗ್ರಾಮಸ್ಥರು ಗುರುವಾರ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು. ಸಾಹಿತಿ ಎಸ್ ಎಲ್ ಭೈರಪ್ಪನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಜಗನ್ನಾಥ್ ಮಾತನಾಡಿ, ಎಸ್ ಎಲ್ ಭೈರಪ್ಪನವರು ನಮ್ಮ ತಂದೆಯವರಾದ ದಿವಂಗತ ಶ್ರೀನಿವಾಸ್ ಅಯ್ಯಂಗಾರ್ ಅವರ ಶಿಷ್ಯರಾಗಿದ್ದರು. ನಮ್ಮ ತಂದೆಯವರು ಬದುಕಿದ್ದ ಸಂದರ್ಭದಲ್ಲಿ ಅನೇಕ ಬಾರಿ ಅವರನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸುತ್ತಿದ್ದರು. ಬಹಳ ಸರಳವಾದ ವ್ಯಕ್ತಿತ್ವ ಅವರದ್ದು. ಸಾಹಿತ್ಯ ಲೋಕದಲ್ಲಿ ತನ್ನದೇ ಆದ ಛಾಪು ಮಾಡಿಸಿದ್ದರು ಎಂದು ನೆನೆದರು.