ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರು ಮಂಗಳೂರು ಜಿಲ್ಲಾ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ
ಜಿಬಿಎ ಅಡಿಯಲ್ಲಿ ಬರುವ ಐದು ಮಹಾನಗರ ಪಾಲಿಕೆಗಳಿಗೆ ಚುನಾವಣೆ ಮುಗಿಯುವವರೆಗೂ ನಗರದಲ್ಲಿ ಪ್ರಸ್ತಾವಿತ ಮತದಾರರ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಮುಂದೂಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತರು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ
ಇತ್ತೀಚೆಗೆ ಡ್ರಾಪ್ ಕೊಡುವ ನೆಪದಲ್ಲಿ ವಿಜಯನಗರ ಜಿಲ್ಲೆಯ ಗುತ್ತಿಗೆದಾರರೊಬ್ಬರನ್ನು ಕಾರಿಗೆ ಹತ್ತಿಸಿಕೊಂಡು ಬಳಿಕ ಜೀವ ಬೆದರಿಕೆ ಹಾಕಿ ಹಣ ಸುಲಿಗೆ ಮಾಡಿದ್ದ ನಾಲ್ವರು ದರೋಡೆಕೋರರನ್ನು ಪೀಣ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅವೈಜ್ಞಾನಿಕ ರಸ್ತೆಗಳ ನಿರ್ಮಾಣ ಆಗಿರುವುದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ. ಆಗ ಕಳಪೆಯಾಗಿ ರಸ್ತೆಗಳ ನಿರ್ಮಾಣ ಮಾಡಿರುವುದರಿಂದ ಈಗ ಗುಂಡಿಗಳು ಬಿದ್ದಿವೆ ಎಂದು ಶಾಸಕ ಪ್ರದೀಪ್ ಈಶ್ವರ್ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ತಾವೆಷ್ಟು ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದೀರಿ. ಎಷ್ಟು ದಂಡ ಕಟ್ಟಬೇಕಿದೆ. ಇವೆಲ್ಲ ಮಾಹಿತಿ ಟ್ರಿನಿಟಿ ವೃತ್ತದಲ್ಲಿ ನಿಮ್ಮ ವಾಹನ ನಿಂತ ಕೂಡಲೇ ಆ ವೃತ್ತದ ಪರದ ಮೇಲೆ ಸಾರ್ವಜನಿಕವಾಗಿ ಪ್ರದರ್ಶನಗೊಳ್ಳಲಿದೆ!!!
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸಲಿರುವ ನಮ್ಮ ಮೆಟ್ರೋ ನೀಲಿ ಮಾರ್ಗವನ್ನು (58 ಕಿಮೀ) ಮೂರು ಹಂತಗಳಲ್ಲಿ ತೆರೆಯಲು ಬೆಂಗಳೂರು ಮೆಟ್ರೋ ರೈಲು ನಿಗಮವು ಮುಂದಾಗಿದ್ದು, ಸಂಪೂರ್ಣ ಮಾರ್ಗ 2027ಕ್ಕೆ ಮುಗಿಯಲಿದೆ.
ಉತ್ತರ ಪ್ರದೇಶದ ಬರೇಲಿಯಲ್ಲಿ ಆರಂಭವಾದ ‘ಐ ಲವ್ ಮೊಹಮ್ಮದ್’ ಭಿತ್ತಿಪತ್ರ ವಿವಾದವು ಉತ್ತರಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರಾಖಂಡ, ತೆಲಂಗಾಣ ಬಳಿಕ ಇದೀಗ ರಾಜ್ಯಕ್ಕೂ ಕಾಲಿಟ್ಟಿದೆ.
ಪದ್ಮಭೂಷಣ, ಸರಸ್ವತಿ ಸಮ್ಮಾನ್ ಪುರಸ್ಕೃತ ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪ (94) ವಯೋಸಹಜ ಅನಾರೋಗ್ಯದಿಂದ ಬುಧವಾರ ಬೆಂಗಳೂರಲ್ಲಿ ನಿಧನರಾದರು.