ಹೈನೋದ್ಯಮದಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ವಿಸ್ತರಣಾಧಿಕಾರಿ ಭಾನುಪ್ರಕಾಶ್ತಾಲೂಕಿನ ಉಕ್ಕುಂದ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗ್ರಾಮದ ಸಂಘವು ಇದುವರೆಗೂ ಯಾವುದೇ ಅವ್ಯವಹಾರಕ್ಕೆ ದಾರಿ ಮಾಡಿಕೊಡದೆ ಒಗ್ಗಟ್ಟಿನಿಂದ ಗುಣಮಟ್ಟದ ಹಾಲನ್ನು ಸಂಘಕ್ಕೆ ಸರಬರಾಜು ಮಾಡಿ ಲಾಭದಲ್ಲಿ ಸಂಘವನ್ನು ನಡೆಸಲಾಗುತ್ತಿದೆ. ಇದೇ ರೀತಿ ಮುಂದೆಯೂ ಗುಣಮಟ್ಟದ ಹಾಲು ಸರಬರಾಜಿಗೆ ಎಲ್ಲರೂ ಆದ್ಯತೆಯನ್ನು ನೀಡಬೇಕು ಎಂದರು.