ರೇಣುಕಾಚಾರ್ಯ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್ಗಣೇಶೋತ್ಸವದ ವೇಳೆ ಡಿಜೆ ಬಳಕೆ ನಿಷೇಧಿಸಿದ್ದ ದಾವಣಗೆರೆ ಜಿಲ್ಲಾಡಳಿತದ ವಿರುದ್ಧ ಸುದ್ದಿಗೋಷ್ಠಿ ನಡೆಸಿ, ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ ಸಂಬಂಧ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚಿಸಿರುವ ಹೈಕೋರ್ಟ್, ಹಬ್ಬಗಳನ್ನು ರಾಜಕೀಯ ಉದ್ದೇಶಗಳಿಗಾಗಿ ಬಳಸಿಕೊಳ್ಳಲಾಗುತ್ತಿದೆ, ಸರ್ಕಾರ ಸಹ ಇದನ್ನೇ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದೆ.