ಪಾಕ್‌ಗೆ ಜೈಕಾರ ಸಿದ್ದರಾಮಯ್ಯ ಸರ್ಕಾರದ ಸಾಧನೆ: ಕೋಟ ಟೀಕೆ

| Published : Mar 03 2024, 01:31 AM IST

ಸಾರಾಂಶ

ಉಗ್ರವಾದಿಗಳ ಜೊತೆ ಕಾಂಗ್ರೆಸ್ ಪಕ್ಷಕ್ಕೆ ಸಂಪರ್ಕವಿರುವುದಕ್ಕೆ ಇತ್ತೀಚಿಗೆ ರಾಜ್ಯದಲ್ಲಿ ನಡೆಯುತ್ತಿರುವ ಅನೇಕ ಘಟನೆಗಳು ಸಾಕ್ಷಿಯಾಗಿವೆ ಎಂದು ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಆರೋಪ ಮಾಡಿದರು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ವಿಧಾನಸೌಧದ ಒಳಗೆ ಪಾಕಿಸ್ತಾನಕ್ಕೆ ಜೈಕಾರ ಕೂಗಿರುವ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಇದು ಸಿದ್ದರಾಮಯ್ಯ ಅವರ ಎಂಟು ತಿಂಗಳ ಸಾಧನೆಯಾಗಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಬಿ.ಸಿ. ರೋಡಿನಲ್ಲಿ ಶನಿವಾರ ನಡೆದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಅಂಬೇಡ್ಕರ್ ಹೆಸರಿನಲ್ಲಿ ಕಾಂಗ್ರೆಸ್ ಇಂದು ಕೆಟ್ಟ ಕೆಲಸಕ್ಕೆ ಇಳಿದಿರುವುದು ದುರಂತ ಎಂದ ಅವರು, ಸುಳ್ಳಿನ ಸರಮಾಲೆಯನ್ನು ಸೃಷ್ಟಿ ಮಾಡಿರುವ ಸಿದ್ದರಾಮಯ್ಯ ಸರಕಾರ, ಪಾಕಿಸ್ತಾನದ ಪರವಾದ ಘೋಷಣೆಯನ್ನು ಇಲ್ಲ ಎಂದು ಹೇಳಲು ಹೊರಟಿದೆ ಎಂದು ಟೀಕಿಸಿದರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ, ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ ದೇಶದ್ರೋಹಿಗಳಿಗೆ ಶಿಕ್ಷೆ ನೀಡದ ಫಲವಾಗಿ ಮುಂದುವರಿದ ಭಾಗವಾಗಿ ಬಾಂಬ್ ಸ್ಫೋಟಕ್ಕೆ ಮುಂದಾಗಿರುವ ಘಟನೆ ನಡೆದಿದೆ ಎಂದರು. ಉಗ್ರವಾದಿಗಳ ಜೊತೆ ಕಾಂಗ್ರೆಸ್ ಪಕ್ಷಕ್ಕೆ ಸಂಪರ್ಕವಿರುವುದಕ್ಕೆ ಇತ್ತೀಚಿಗೆ ರಾಜ್ಯದಲ್ಲಿ ನಡೆಯುತ್ತಿರುವ ಅನೇಕ ಘಟನೆಗಳು ಸಾಕ್ಷಿಯಾಗಿವೆ ಎಂದು ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಆರೋಪ ಮಾಡಿದರು. ಮಾಜಿ ರಾಜ್ಯ ವಕ್ತಾರ ವಿಕಾಸ್ ಪುತ್ತೂರು, ದೇವಪ್ಪ ಪೂಜಾರಿ, ಸುಲೋಚನಾ ಜಿ.ಕೆ. ಭಟ್, ದೇವದಾಸ್ ಶೆಟ್ಟಿ, ಡೊಂಬಯ್ಯ ಅರಳ, ವಜ್ರನಾಥ್ ಕಲ್ಲಡ್ಕ, ಕಮಲಾಕ್ಷಿ ಕೆ. ಪೂಜಾರಿ, ಲಖಿತಾ ಆರ್. ಶೆಟ್ಟಿ, ರಾಮ್ ದಾಸ್ ಬಂಟ್ವಾಳ, ಚೆನ್ನಪ್ಪ ಕೋಟ್ಯಾನ್, ತುಂಗಪ್ಪ ಬಂಗೇರ, ದಿನೇಶ್ ಅಮ್ಟೂರು, ರವೀಶ್ ಶೆಟ್ಟಿ ಕಾರ್ಕಳ, ಪುರುಷೋತ್ತಮ ಶೆಟ್ಟಿ, ಪುರುಷೋತ್ತಮ ಸಾಲಿಯಾನ್, ಜನಾರ್ದನ ಬೊಂಡಾಲ, ಆನಂದ ಶಂಭೂರು, ಕಿಶೋರ್ ಪಲ್ಲಿಪಾಡಿ, ಮೋನಪ್ಪ ದೇವಸ್ಯ, ಶುಭಕರ ಶೆಟ್ಟಿ, ಚಿದಾನಂದ ರೈ ಕಕ್ಯ, ಸಂತೋಷ್ ರಾಯಿಬೆಟ್ಟು, ಕೇಶವ ದೈಪಲ, ರಮನಾಥ ರಾಯಿ, ಕಾರ್ತಿಕ್ ಬಲ್ಲಾಳ್, ರೋನಾಲ್ಡ್ ಡಿಸೋಜ, ವಸಂತ ಕಕ್ಯಪದವು, ದಿನೇಶ್ ಶೆಟ್ಟಿ ದಂಬೆದಾರ್, ಗಣೇಶ್ ರೈ ಮಾಣಿ, ವಿಜಯ್ ರೈ, ಮೋಹನ್ ಪಿ.ಎಸ್. ಸದಾನಂದ ನಾವೂರ, ಹರೀಶ್ ರೈ ಪೆರಾಜೆ, ಗೋವಿಂದ ಪ್ರಭು, ಹರಿಪ್ರಸಾದ್ ಮತ್ತಿತರ ಪ್ರಮುಖರು ಇದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ ಗೆ ಪ್ರತಿಭಟನಾಕಾರರು ಬೆಂಕಿ ನೀಡಿದರು.