ಸಾರಾಂಶ
ಚಿಕ್ಕೋಡಿ ಪಟ್ಟಣದಲ್ಲಿ ಗುರುವಾರ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಕಿಡಿಗೇಡಿಗಳು ಪ್ಯಾಲಿಸ್ತೀನ್ ಧ್ವಜ ಬೀಸುತ್ತಾ ಕುಣಿದಾಡಿದ ಘಟನೆ ನಡೆದಿದೆ.
ಚಿಕ್ಕೋಡಿ: ಪಟ್ಟಣದಲ್ಲಿ ಗುರುವಾರ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಕಿಡಿಗೇಡಿಗಳು ಪ್ಯಾಲಿಸ್ತೀನ್ ಧ್ವಜ ಬೀಸುತ್ತಾ ಕುಣಿದಾಡಿದ ಘಟನೆ ನಡೆದಿದೆ.
ಗಣೇಶ ವಿಸರ್ಜನೆ ಹಿನ್ನೆಲೆ ಮಂಗಳವಾರ ನಡೆಯಬೇಕಿದ್ದ ಈದ್ ಮಿಲಾದ್ ಮೆರವಣಿಗೆಯನ್ನು ಗುರುವಾರ ಹಮ್ಮಿಕೊಳ್ಳಲಾಗಿತ್ತು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದ ಈದ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಯುವಕನೋರ್ವ 6 ಅಡಿ ಎತ್ತರದ ಪ್ಯಾಲೆಸ್ತೀನ್ ಧ್ವಜ ಬೀಸುತ್ತ ಹೆಜ್ಜೆ ಹಾಕುತ್ತಿರುವುದು, ಉಳಿದ ಯುವಕರು ಇದಕ್ಕೆ ಸಾಥ್ ನೀಡಿ ಕುಣಿದಾಡಿದ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಕೆಲಸ ಸಮಯದ ಬಳಿಕ ಮಾಹಿತಿ ತಿಳಿದ ಪೊಲೀಸರು ಯುವಕರಿಂದ ಧ್ಚಜ ವಶಕ್ಕೆ ಪಡೆದಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.