ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ಪಲ್ಲಕಿ ಉತ್ಸವ, ಮಹಾರಥೋತ್ಸವ

| Published : Feb 21 2025, 11:46 PM IST

ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ಪಲ್ಲಕಿ ಉತ್ಸವ, ಮಹಾರಥೋತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಸಿದ್ಧ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ಪಲ್ಲಕ್ಕಿ ಉತ್ಸವ, ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಕಳತ್ತೂರು ಕರುಣಾಕರ ತಂತ್ರಿ ಹಾಗೂ ಅರ್ಚಕ ಶಶಾಂಕ್ ಮುಚ್ಚಿಂತಾಯ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ಕವಾಟೋದ್ಘಾಟನೆ, ತುಲಾಭಾರ ಸೇವೆ ಮಧ್ಯಾಹ್ನ ಮಹಾಸಂಪರ್ಪಣೆ, ರಾತ್ರಿ ಶ್ರೀ ದೇವರ ಪಲ್ಲಕ್ಕಿ ಉತ್ಸವ, ಪೇಟೆ ಸವಾರಿ, ಕಟ್ಟೆ ಪೂಜೆ, ಮಹಾ ರಥೋತ್ಸವ, ಅವಭೃತ, ಧ್ವಜಾವರೋಹಣ ನಡೆಯಿತು.

ಕನ್ನಡಪ್ರಭ ವಾರ್ತೆ ಮೂಲ್ಕಿ

ಈ ಸಂದರ್ಭ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು, ಉದ್ಯಮಿ ರಾಮಮೂರ್ತಿ ರಾವ್, ಭುವನಾಭಿರಾಮ ಉಡುಪ, ಉದ್ಯಮಿ ಪೃಥ್ವಿರಾಜ ಆಚಾರ್ಯ ಕಿನ್ನಿಗೋಳಿ, ಕ್ಷೇತ್ರದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವ ರಾವ್, ವಿಷ್ಣು ಮೂರ್ತಿ ಆಚಾರ್ಯ, ವಿಪ್ರಸಂಪದದ ಅಧ್ಯಕ್ಷ ಸುಧಾಕರ್ ರಾವ್, ದೇವಪ್ರಸಾದ್ ಪುನರೂರು, ಪಟೇಲ್ ವಿಶ್ವನಾಥ ರಾವ್ ಮತ್ತಿತರರು ಉಪಸ್ಥಿತರಿದ್ದರು. ಫೆ.22ರಂದು ಕ್ಷೇತ್ರಕ್ಕೆ ಸಂಬಂಧಪಟ್ಟ ಕುಜಿಂಗಿರಿ ಶ್ರೀ ರಕ್ತೇಶ್ವರಿ ಹಾಗೂ ಪರಿವಾರದೈವಗಳ ನೇಮೋತ್ಸವ ನಡೆಯಲಿದೆ.