ತಾಳೆಬೆಳೆ ರೈತರು ಹೆಚ್ಚಾಗಿ ಬೆಳೆಯಬೇಕು: ತೋಟಗಾರಿಕೆ ಇಲಾಖೆಯ ಕೆ.ಎಂ.ರೇಖಾ

| Published : Jul 01 2025, 12:47 AM IST

ತಾಳೆಬೆಳೆ ರೈತರು ಹೆಚ್ಚಾಗಿ ಬೆಳೆಯಬೇಕು: ತೋಟಗಾರಿಕೆ ಇಲಾಖೆಯ ಕೆ.ಎಂ.ರೇಖಾ
Share this Article
  • FB
  • TW
  • Linkdin
  • Email

ಸಾರಾಂಶ

ಸುಮಾರು 1 ಲಕ್ಷ ಕೋಟಿ ಮೌಲ್ಯದ ಖಾದ್ಯ ತೈಲವನ್ನು ಹೊರ ದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಖಾದ್ಯ ತೈಲದ ಆಮದು ವೆಚ್ಚ ತಗ್ಗಿಸುವ ನಿಟ್ಟಿನಲ್ಲಿ ತೈಲ ಬೆಳೆಗಳ ಉತ್ಪಾದನೆಗೆ ಹೆಚ್ಚು ಆದ್ಯತೆ ನೀಡಲು ಕೇಂದ್ರ ಸರ್ಕಾರ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ಪ್ರಾರಂಭಿಸಿದೆ.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಹೆಚ್ಚಿನ ಆದಾಯ ತಂದುಕೊಡುವ ತಾಳೆ ಬೆಳೆಯನ್ನು ರೈತರು ಹೆಚ್ಚಾಗಿ ಬೆಳೆಯಬೇಕು ಎಂದು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಎಂ.ರೇಖಾ ಸಲಹೆ ನೀಡಿದರು.

ಸಮೀಪದ ಬಿದರಹಳ್ಳಿಯಲ್ಲಿ ತಾಳೆ ಬೆಳೆ ಅಭಿವೃದ್ಧಿ ಯೋಜನೆಯಡಿ ರೈತ ಬಿ.ಸಿ.ಯೋಗೇಶ್ ಜಮೀನಿನಲ್ಲಿ ತೋಟಗಾರಿಕೆ ಇಲಾಖೆಯಿಂದ ಹಮ್ಮಿಕೊಂಡಿದ್ದ ಮೆಗಾ ತಾಳೆ ಕೃಷಿ ಪ್ರೋತ್ಸಾಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಭಾರತದಲ್ಲಿ ಖಾದ್ಯ ತೈಲದ ವಾರ್ಷಿಕ ಬೇಡಿಕೆಯನ್ನು ಸ್ಥಳೀಯ ಉತ್ಪಾದನೆಯಿಂದ ಪೂರೈಸಲು ಸಾಧ್ಯವಾಗುತ್ತಿಲ್ಲ. ಸುಮಾರು 1 ಲಕ್ಷ ಕೋಟಿ ಮೌಲ್ಯದ ಖಾದ್ಯ ತೈಲವನ್ನು ಹೊರ ದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಖಾದ್ಯ ತೈಲದ ಆಮದು ವೆಚ್ಚ ತಗ್ಗಿಸುವ ನಿಟ್ಟಿನಲ್ಲಿ ತೈಲ ಬೆಳೆಗಳ ಉತ್ಪಾದನೆಗೆ ಹೆಚ್ಚು ಆದ್ಯತೆ ನೀಡಲು ಕೇಂದ್ರ ಸರ್ಕಾರ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ಪ್ರಾರಂಭಿಸಿದೆ ಎಂದರು.

ರೈತ ಬಿ.ಸಿ.ಯೋಗೇಶ್ ಮಾತನಾಡಿ, ಎರಡು ತೆಂಗು ಬೆಳೆಗೆ ಒಂದು ತಾಳೆ ಬೆಳೆ ಸಮನಾಗಿದೆ. ತಾಳೆ ಬೆಳೆ ಹೆಚ್ಚು ಲಾಭಾಂಶ ನೀಡುತ್ತಿದ್ದು, ರೈತರು ತಾಳೆ ಬೆಳೆಯಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಈ ವೇಳೆ ತೋಟಗಾರಿಕೆ ಇಲಾಖೆ ಅಧಿಕಾರಿ ಅಧಿಕಾರಿ ಶಿವಪ್ರಸಾದ್, ಗ್ರಾಪಂ ಅಧ್ಯಕ್ಷ ಗೋವಿಂದೇಗೌಡ, ಮಾಜಿ ಉಪಾಧ್ಯಕ್ಷ ಬಿ.ಎಚ್.ವೆಂಕಟೇಶ್, ಸೊಸೈಟಿ ಅಧ್ಯಕ್ಷ ಬಿ.ಎಚ್.ಶಂಕರೇಗೌಡ ಮಾಜಿ ಅಧ್ಯಕ್ಷ ಬಿ.ಎಚ್.ನಾಗರಾಜು, ಮಾಜಿ ನಿರ್ದೇಶಕ ಬಿ.ಎಸ್.ರವೀಂದ್ರ, ಸರ್ಕಾರಿ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಬಿ.ಜಿ.ಹನುಮಕುಮಾರ್, ಗ್ರಾಮದ ಮುಖಂಡರಾದ ಬಿ.ಸಿ. ಹನುಮೇಗೌಡ, ರಮೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.