ಸಾರಾಂಶ
ಕದಂಬರ ನೆಲವಾದ ಬನವಾಸಿಯಲ್ಲಿ ಪಂಪ ಭವನ ನಿರ್ಮಾಣ ಮಾಡಲಾಗುವುದು. ಪಂಪವನ ಅಭಿವೃದ್ಧಿಗೆ ಸರ್ಕಾರ ಈಗಾಗಲೇ ₹೫೦ ಲಕ್ಷ ಮಂಜೂರು ಮಾಡಿದ್ದು, ಬನವಾಸಿ ಅಭಿವೃದ್ಧಿಗೆ ಸರ್ಕಾರ ಬದ್ಧವಿದೆ ಎಂದು ಕನ್ನಡ ಸಂಸ್ಕೃತಿ ಹಾಗೂ ಹಿಂದುಳಿದ ವರ್ಗದ ಸಚಿವ ಶಿವರಾಜ ತಂಗಡಗಿ ಹೇಳಿದರು.
ಕನ್ನಡಪ್ರಭ ವಾರ್ತೆ ಶಿರಸಿ
ಕದಂಬರ ನೆಲವಾದ ಬನವಾಸಿಯಲ್ಲಿ ಪಂಪ ಭವನ ನಿರ್ಮಾಣ ಮಾಡಲಾಗುವುದು. ಪಂಪವನ ಅಭಿವೃದ್ಧಿಗೆ ಸರ್ಕಾರ ಈಗಾಗಲೇ ₹೫೦ ಲಕ್ಷ ಮಂಜೂರು ಮಾಡಿದ್ದು, ಬನವಾಸಿ ಅಭಿವೃದ್ಧಿಗೆ ಸರ್ಕಾರ ಬದ್ಧವಿದೆ ಎಂದು ಕನ್ನಡ ಸಂಸ್ಕೃತಿ ಹಾಗೂ ಹಿಂದುಳಿದ ವರ್ಗದ ಸಚಿವ ಶಿವರಾಜ ತಂಗಡಗಿ ಹೇಳಿದರು.ತಾಲೂಕಿನ ಬನವಾಸಿ ಮಯೂರ ವರ್ಮ ವೇದಿಕೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕದಂಬೋತ್ಸವ ಹಾಗೂ ಹಂಪಿ ಕನ್ನಡ ವಿವಿ ವಿಶ್ರಾಂತ ಕುಲಪತಿ ಡಾ। ಬಿ.ಎ.ವಿವೇಕ ರೈ ಅವರಿಗೆ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ, ಪಂಪ ಭವನ ನಿರ್ಮಾಣಕ್ಕಾಗಿ ಜಿಲ್ಲಾಡಳಿತ ಸ್ಥಳ ಗುರುತಿಸಿ, ಪ್ರಸ್ತಾವನೆ ಸಲ್ಲಿಸಲಿ ಎಂದರು.ಪಂಪ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವಿವೇಕ್ ರೈ ಅವರು, ಕನ್ನಡದ ನೆಲದಲ್ಲಿ ಪಂಪ ಪ್ರಶಸ್ತಿ ಪಡೆದಿರುವುದಕ್ಕೆ ಬದುಕಿನಲ್ಲಿ ಧನ್ಯತೆ ಪಡೆದಿದ್ದೇನೆ. ಬನವಾಸಿಯು ಬಹುಸಂಸ್ಕೃತಿಯ ಹಾಗೂ ಬಹುಧರ್ಮದ ಪವಿತ್ರ ತಾಣವಾಗಿದೆ. ಬನವಾಸಿಯಲ್ಲಿ ಪಂಪ ತಿಳಿಸಿದಂತೆ ಮಾವು, ಮಲ್ಲಿಗೆಯ ಕಂಪು ಹರಡುವಂತೆ ಇಲ್ಲಿ ಆ ಗಿಡಗಳನ್ನು ನೆಡುವಂತಾಗಬೇಕು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಅಧ್ಯಕ್ಷತೆ ವಹಿಸಿದ್ದ ಶಾಸಕ ಶಿವರಾಮ ಹೆಬ್ಬಾರ, ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಮಾತನಾಡಿದರು. ಎಂಸಿಎ ಅಧ್ಯಕ್ಷ ಹಾಗೂ ಕಾರವಾರ ಕ್ಷೇತ್ರ ಶಾಸಕ ಸತೀಶ ಸೈಲ್, ವಿಪ ಸದಸ್ಯ ಶಾಂತಾರಾಮ ಸಿದ್ದಿ ಪಾಲ್ಗೊಂಡಿದ್ದರು.