ಸಾರಾಂಶ
ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆಯಲ್ಲಿ ಕೃಷ್ಣಮೂರ್ತಿ ಅಭಿಮತಕನ್ನಡಪ್ರಭ ವಾರ್ತೆ ಹಿರಿಯೂರು
ಸಾರ್ವಜನಿಕರಿಗೆ ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿ ನೀಡಿ ಅವುಗಳನ್ನು ಅತೀ ಹೆಚ್ಚು ಪ್ರಚಾರ ಮಾಡಬೇಕೆಂದು ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಅಧ್ಯಕ್ಷ ಕೃಷ್ಣಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರದ ಪಂಚಗ್ಯಾರಂಟಿ ಯೋಜನೆಗಳು ಜನಪ್ರಿಯವಾಗಿದ್ದು, ಅವುತೀರಾ ಬಡವರ ಶಕ್ತಿಯಾಗಿವೆ. ತಾಲೂಕಿನಲ್ಲಿ ಗೃಹ ಜ್ಯೋತಿ ಯೋಜನೆಯ ಸುಮಾರು 65.248 ಫಲಾನುಭವಿಗಳು , ಗೃಹ ಲಕ್ಷ್ಮಿ ಯೋಜನೆಯ ಸುಮಾರು 66,281 ಫಲಾನುಭವಿಗಳು, ಅನ್ನಭಾಗ್ಯ ಯೋಜನೆಯ 80,178 ಪಡಿತರ ಚೀಟಿದಾರರು, ಸಾರಿಗೆ ಇಲಾಖೆಯ ವತಿಯಿಂದ ಮಹಿಳೆಯರಿಗೆ ಶಕ್ತಿ ಯೋಜನೆ ವ್ಯವಸ್ಥೆ ಮೂಲಕ ತಾಲೂಕಿನ ಲಕ್ಷಾಂತರ ಅರ್ಹ ಫಲಾನುಭವಿಗಳು ಈ ಯೋಜನೆಗಳ ಸದುಪಯೋಗ ಪಡೆಯುತ್ತಿದ್ದಾರೆ. ಸಾಮಾಜಿಕವಾಗಿ, ಆರ್ಥಿಕವಾಗಿ ಕುಟುಂಬದ ಬಲವರ್ಧನೆಗೆ ಪಂಚ ಗ್ಯಾರಂಟಿ ಯೋಜನೆಗಳು ಸಹಕಾರಿ ಆಗಲಿವೆ ಎಂದು ಹೇಳಿದರು.ಗ್ಯಾರಂಟಿ ಸಮಿತಿ ಸದಸ್ಯ ಮಹೇಶ್ ಮಾತನಾಡಿ, ಪ್ರತಿ ಗ್ರಾಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಪ್ರಚುರಪಡಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಸರ್ಕಾರದ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪುತ್ತಿದ್ದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಇನ್ನಷ್ಟು ಜನಸ್ನೇಹಿ ಯೋಜನೆಗಳಾಗಲು ಗ್ಯಾರಂಟಿ ಯೋಜನೆಯ ಎಲ್ಲಾ ಸದಸ್ಯರು ಹಾಗೂ ಅಧಿಕಾರಿಗಳು ಶ್ರಮಿಸಬೇಕು. ತಾಲೂಕಿನ ಪ್ರತಿ ಗ್ರಾಮಗಳಲ್ಲಿ ಯೋಜನೆಗಳ ನಾಮ ಫಲಕ ಪ್ರಚುರಪಡಿಸಲು ಸಮಿತಿ ಎಲ್ಲಾ ಸದಸ್ಯರು ಸಲಹೆ ನೀಡಿದ್ದಾರೆ ಎಂದರು. ಈ ವೇಳೆ ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ಶಿವಣ್ಣ, ಉಪಾಧ್ಯಕ್ಷ ಖಾದಿ ರಮೇಶ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಕುಮಾರ್, ಸಿಡಿಪಿಒ ರಾಘವೇಂದ್ರ, ಸಾರಿಗೆ ಇಲಾಖೆ ಮೇಲ್ವಿಚಾರಕಿ ನೇತ್ರಾವತಿ, ಆಹಾರ ಇಲಾಖೆ ಶಿರಸ್ತೇದಾರ್ ಲಿಂಗರಾಜು, ಪಂಚ ಗ್ಯಾರಂಟಿ ಯೋಜನೆಯ ಜಿಲ್ಲಾ ಸದಸ್ಯೆ ಇಂದಿರಾ, ತಾಲೂಕು ಸಮಿತಿ ಸದಸ್ಯರಾದ ಮಹಾಂತೇಶ್, ಗಿಡ್ಡೋಬನಹಳ್ಳಿ ಆಶೋಕ್, ತಿಪ್ಪಮ್ಮ ನಾಗರಾಜ್, ರವಿ, ಹನುಮಂತರಾಯ, ತಿಪ್ಪನಾಯಕ, ಮಂಜುನಾಥ ನಾಯಕ, ಅಬ್ದುಲ್ ರೆಹಮಾನ್,ನಾಗರಾಜ್, ಈರಣ್ಣ, ಭಾಷ.ಉಮಾಪತಿ ಮುಂತಾದವರು ಹಾಜರಿದ್ದರು.