ಸಾರಾಂಶ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ನೀಡಿದ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ಬಡವರಿಗೆ ನೆರವಾಗಿದ್ದಾರೆ.
ಹುಬ್ಬಳ್ಳಿ:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವ ವರೆಗೂ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತೇವೆ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.ಇಲ್ಲಿನ ಆಡಳಿತ ಸೌಧ (ಮಿನಿ ವಿಧಾನಸೌಧ)ದಲ್ಲಿ ಸೋಮವಾರ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಾನಂದ ಭೂಮಣ್ಣವರ ಅವರ ಹುಬ್ಬಳ್ಳಿ ಗ್ರಾಮೀಣ ತಾಲೂಕಿನ ಕಚೇರಿ ಉದ್ಘಾಟಿಸಿ ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ನೀಡಿದ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ಬಡವರಿಗೆ ನೆರವಾಗಿದ್ದಾರೆ. ಇಂತಹ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ತಾಲೂಕಿಗೊಂದು ಗ್ಯಾರಂಟಿ ಸಮಿತಿ ರಚಿಸಿ ಸಮಿತಿ ಅಧ್ಯಕ್ಷರಿಗೆ ಕಚೇರಿ ಪ್ರಾರಂಭಿಸಿ ಬಡವರಿಗೆ ಯೋಜನೆಗಳನ್ನು ತಲುಪಿಸಲು ಅಧ್ಯಕ್ಷರು ಹಾಗೂ ಸದಸ್ಯರು ಶ್ರಮಿಸುವಂತೆ ಸೂಚಿಸಿದರು.ಈ ವೇಳೆ ತಹಸೀಲ್ದಾರ್ ಕಲ್ಲನಗೌಡ ಪಾಟೀಲ, ತಾಪಂ ಇಒ ಯಶವಂತಕುಮಾರ, ಗ್ರಾಮೀಣ ಉಪತಹಸೀಲ್ದಾರ್ ಪ್ರಕಾಶ ಹೆಬ್ಬಳ್ಳಿ, ಧಾರವಾಡ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಅನಿಲಕುಮಾರ ಪಾಟೀಲ, ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ಆರ್.ಎಚ್. ಕೋನರಡ್ಡಿ, ಕೆಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಾಪುಗೌಡ ಪಾಟೀಲ, ನವಲಗುಂದ ಗ್ಯಾರಂಟಿ ಸಮಿತಿ ಅಧ್ಯಕ್ಷ ವರ್ದಮಾನಗೌಡ ಹಿರೇಗೌಡ್ರ, ಕಿಮ್ಸ್ ನಾಮನಿರ್ದೇಶಿತ ಸದಸ್ಯ ಎಂ.ಎಸ್. ರೋಣದ, ಸುರೇಶ ಗೋಕಾಕ, ಜಿಪಂ ಮಾಜಿ ಅಧ್ಯಕ್ಷೆ ಸಾವಿತ್ರಿ ಭಗವತಿ ಸೇರಿದಂತೆ ಹಲವರಿದ್ದರು.