ಸಾರಾಂಶ
ರಟ್ಟೀಹಳ್ಳಿ: ಆ. 17ರಂದು ನಡೆಯುವ ಪಟ್ಟಣ ಪಂಚಾಯಿತಿ ಚುನಾವಣೆಗೆ ಕಾಂಗ್ರೆಸ್ ಪರ ಪಟ್ಟಣದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು, 15ಕ್ಕೆ 15 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ವಿಜಯಶಾಲಿಯಾಗುವರು ಎಂದು ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಮ್‍ಪೀರ ಖಾದ್ರಿ ವಿಶ್ವಾಸ ವ್ಯಕ್ತಪಡಿಸಿದರು.ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚಿಸಿ ಮಾತನಾಡಿ, ತಾಲೂಕಿನ ಶಾಸಕ ಯು.ಬಿ. ಬಣಕಾರ ಹಾಗೂ ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ ಅವರ ನೇತೃತ್ವದಲ್ಲಿ ತಾಲೂಕಿನಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಜನರ ಮನೆಮಾತಾಗಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ಪಂಚ ಗ್ಯಾರಂಟಿಗಳು ಜನಪ್ರಿಯವಾಗಿದ್ದು, ಬಡವರ ಆಶಾಕಿರಣವಾಗಿದೆ ಎಂದರು.ರಾಜ್ಯದಲ್ಲಿ ಬಿಜೆಪಿಯವರು ಭಂಡತನ ಹಾಗೂ ಸುಳ್ಳುಗಳ ಮೂಲಕ ಜನರ ದಾರಿ ತಪ್ಪಿಸುವಂತಾಗಿದ್ದು, ರಾಜ್ಯದ ಜನ ಗಮನಿಸುತ್ತಿದ್ದು, ಬಿಜೆಪಿಯ ಬಿ ಟೀಮ್‌ಗಳಾದ ಆಮ್ ಆದ್ಮಿ ಹಾಗೂ ಪಕ್ಷೇತರ ಅಭ್ಯರ್ಥಿಗಳಿಂದ ಪಟ್ಟಣದ ಅಭಿವೃದ್ಧಿಯಾಗಲು ಸಾಧ್ಯವಿಲ್ಲ. ಮತದಾರರ ಬಳಿ ಹೋಗಿ ಮತ ಕೇಳುವ ಯಾವ ನೈತಿಕತೆ ಇಲ್ಲ ಎಂದರು.ಕಾಂಗ್ರೆಸ್ ನೇತೃತ್ವದಲ್ಲಿ ಪಟ್ಟಣದಲ್ಲಿ ಮೂಲ ಸೌಲಭ್ಯಗಳಾದ ರಸ್ತೆ ಅಭಿವೃದ್ದಿ ನೀರು, ಕರೆಂಟ್, ಗುಣಮಟ್ಟದ ಕಾಲುವೆ ನಿರ್ಮಾಣ, ಬಡವರಿಗೆ ಮನೆ ನಿರ್ಮಾಣ ಇನ್ನೂ ಅನೇಕ ಅಭಿವೃದ್ದಿ ಕಾರ್ಯಗಳು ನಮ್ಮಿಂದಲೇ ಸಾಧ್ಯ ಹೊರತು ಬಿಜೆಪಿಯಿಂದ ನಯಾಪೈಸೆ ಕೆಲಸವಾಗುವುದಿಲ್ಲ ಎಂದು ಟೀಕಿಸಿದರು.ರವೀಂದ್ರ ಮುದಿಯಪ್ಪನವರ, ವೀರನಗೌಡ ಪ್ಯಾಟಿಗೌಡ್ರ, ಪಿ.ಡಿ. ಬಸನಗೌಡ್ರ, ವಾಸಣ್ಣ ದ್ಯಾವಕ್ಕಳವರ, ಅಬ್ಬಾಸ ಗೋಡಿಹಾಳ, ಬಾಬುಸಾಬ್ ಜಡದಿ, ಪ್ರಕಾಶ ಬನ್ನಿಕೋಡ, ನಿಂಗಪ್ಪ ಕಡೂರ, ರಮೇಶ ಕಟ್ಟೇಕಾರ, ಪರಮೇಶಪ್ಪ ಕಟ್ಟೆಕಾರ, ನಾಸೀರಸಾಬ ಸೈಕಲ್ಗಾರ ಮುಂತಾದವರು ಇದ್ದರು.
ಧರ್ಮಸ್ಥಳ ಸಂರಕ್ಷಣಾ ಸಮಿತಿಯಿಂದ ಪ್ರತಿಭಟನೆ ಇಂದುಹಾವೇರಿ: ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಬಗ್ಗೆ ಅಪಪ್ರಚಾರ, ತೇಜೋವಧೆ ಮಾಡುತ್ತಿರುವುದನ್ನು ವಿರೋಧಿಸಿ ಧರ್ಮಸ್ಥಳ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ವತಿಯಿಂದ ಆ. 12ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹೆಸರಿಗೆ ಕಳಂಕ ತರುವ ಮತ್ತು ಅಸಂಖ್ಯಾತ ಭಕ್ತರಲ್ಲಿ ಕ್ಷೇತ್ರದ ಮೇಲಿರುವ ಶ್ರದ್ಧೆಯನ್ನು ಹಾಳು ಮಾಡುವ ದುರುದ್ದೇಶದಿಂದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಯಾವುದೇ ಸಾಕ್ಷಾಧಾರಗಳಿಲ್ಲದೇ ನಿರಂತರವಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಅಪಪ್ರಚಾರ ಮಾಡುತ್ತಿರುವುದು ಖಂಡನೀಯ. ಇದನ್ನು ವಿರೋಧಿಸಿ ಮತ್ತು ಅಪಪ್ರಚಾರ ಮಾಡುತ್ತಿರುವ ತಂಡದ ಸದಸ್ಯರ ಉದ್ದೇಶ ಮತ್ತು ಹಣಕಾಸಿನ ಮೂಲದ ಬಗ್ಗೆಯೂ ಎನ್‌ಐಎ ತನಿಖೆಗೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಧರ್ಮಸ್ಥಳ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.