ಸಾರಾಂಶ
ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ ಹಾಗೂ ಶಕ್ತಿ ಯೋಜನೆಗಳು ಸೇರಿದಂತೆ ಗ್ಯಾರಂಟಿ ಯೋಜನೆಗಳನ್ನು ಅರ್ಹರಾದ ಎಲ್ಲ ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಶಾಸಕ ಶಾಸಕ ಕೋನರಡ್ಡಿ ಹೇಳಿದರು.
ನವಲಗುಂದ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಸರ್ಕಾರ ಬಡವರ ಮತ್ತು ಜನಸಾಮಾನ್ಯರ ಏಳ್ಗೆಗಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಎನ್.ಎಚ್. ಕೋನರಡ್ಡಿ ಸೂಚನೆ ನೀಡಿದರು.
ಪಟ್ಟಣದ ತಾಪಂ ಸಭಾಭವನದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರುಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ ಹಾಗೂ ಶಕ್ತಿ ಯೋಜನೆಗಳು ಸೇರಿದಂತೆ ಗ್ಯಾರಂಟಿ ಯೋಜನೆಗಳನ್ನು ಅರ್ಹರಾದ ಎಲ್ಲ ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಿ. ಗ್ಯಾರಂಟಿ ಯೋಜನೆಗಳು ಬಡ ಫಲಾನುಭವಿಗಳಿಗೆ ಯೋಜನೆ ಲಾಭ ತಲುಪುತ್ತಿರುವ ಬಗ್ಗೆ ಪ್ರತಿ ತಿಂಗಳು ಪ್ರಗತಿ ಪರಿಶೀಲನೆ ಸಭೆ ನಡೆಸಬೇಕು. ಕುಂದು ಕೊರತೆಗಳು ಕಂಡು ಬಂದರೆ ನಮ್ಮನ್ನು ಕೂಡ ಸಂಪರ್ಕಿಸುವಂತೆ ತಿಳಿಸಿದರು.
ಈ ವೇಳೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವರ್ಧಮಾನಗೌಡ ಹಿರೇಗೌಡ, ತಹಸೀಲ್ದಾರ್ ಸುಧೀರ ಸಾಹುಕಾರ , ತಾಪಂ ಇಒ ಭಾಗ್ಯಶ್ರೀ ಜಹಗೀರದಾರ, ಸಿಡಿಪಿಒ ಗಾಯತ್ರಿ ಪಾಟೀಲ, ಗ್ಯಾರಂಟಿ ಸಮಿತಿ ಸದಸ್ಯರಾದ ಚಂದ್ರಣ್ಣ ಅಣ್ಣಿಗೇರಿ, ಈರಣ್ಣ ಶಿಡಗಂಟಿ, ಕಲ್ಮೇಶ ತಲವಾಯಿ, ಆನಂದ ಜಕ್ಕನಗೌಡರ, ದಿಲೀಪ ನದಾಫ್ ಸೇರಿದಂತೆ ಹಲವರಿದ್ದರು.