ತರೀಕೆರೆಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ
ಕನ್ನಡಪ್ರಭ ವಾರ್ತೆ, ತರೀಕೆರೆಪಂಚ ಗ್ಯಾರಂಟಿ ಯೋಜನೆಯಿಂದ ಬಡವರಿಗೆ ಅನುಕೂಲ ಮತ್ತು ಉಚಿತ ಸಾರಿಗೆ ಸೌಲಭ್ಯ ಕಲ್ಪಿಸಿರುವುದರಿಂದ ಮಹಿಳೆಯರಿಗೆ ಉದ್ಯೋಗಾವಕಾಶ ಹೆಚ್ಚಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.ಗುರುವಾರ ಜಿಪಂ, ತರೀಕೆರೆ ತಾಪಂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ವಿವಿಧ ಇಲಾಖೆ, ನಿಗಮಗಳು ಹಾಗೂ ಶ್ರೀ ಜಿ.ಎಚ್.ಶ್ರೀನಿವಾಸ್ ಜನಹಿತ ಸೇವಾ ಟ್ರಸ್ಸ್ ಸಹಯೋಗದಲ್ಲಿ ಪಟ್ಟಣದ ಬಯಲು ರಂಗ ಮಂದಿರ ಆವರಣದಲ್ಲಿ ನಡೆದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ನೂತನ ಅಧ್ಯಕ್ಷ, ಸದಸ್ಯರ ಪದಗ್ರಹಣ, ಸಾಮೂಹಿಕ ಸೀಮಂತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ತರೀಕೆರೆ ಕ್ಷೇತ್ರದಲ್ಲಿ ಕಂದಾಯ ಉಪ ಗ್ರಾಮಗಳ ರಚನೆಗೆ ಆದ್ಯತೆ ನೀಡಲಾಗಿದೆ. ಅರ್ಹರಿಗೆ ವಿತರಿಸಲು 2870 ಹಕ್ಕುಪತ್ರ ಸಿದ್ದಪಡಿಸಲಾಗಿದೆ. ಪಟ್ಟಣದ ಹೊರ ವಲಯದ ಹೊಸೂರು ಬಳಿ ಕೆಎಸ್‌ಆರ್‌ಟಿಸಿ ಬಸ್ ಡಿಪೋ, ಪಟ್ಟಣದ ಹೃದಯ ಭಾಗ ದಲ್ಲಿ ಪುರಸಭೆ ಹೊಸ ಕಟ್ಟಡ ನಿರ್ಮಿಸಲು ಟೆಂಡರ್ ಕರೆದಿದ್ದು, ಸಧ್ಯದಲ್ಲೇ ಕಾಮಗಾರಿಗೆ ಚಾಲನೆ ಸಿಗಲಿದೆ. ಪ್ರಗತಿ ಹಂತದಲ್ಲಿರುವ ಮುಖ್ಯ ರಸ್ತೆ ಕಾಮಗಾರಿ ತ್ವರಿತವಾಗಿ ಮುಗಿಸಲು ಸೂಚನೆ ನೀಡಲಾಗಿದೆ ಎಂದರು.ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಮತ್ತು ಅಭಿವೃದ್ಧಿ ಕಾರ್ಯ ಸಮಾನವಾಗಿ ಕೈಗೊಳ್ಳಲಾಗುತ್ತಿದೆ. ಈವರೆಗೆ ಪಂಚ ಗ್ಯಾರಂಟಿ ಯೋಜನೆಗೆ ಜಿಲ್ಲೆಯಲ್ಲಿ ₹ 2,200 ಕೋಟಿ ಬಿಡುಗಡೆಯಾಗಿದೆ. ₹10 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಿದೆ
ಎಂದು ಹೇಳಿದರು.ಜಿ.ಎಚ್.ಶ್ರೀನಿವಾಸ ಜನಹಿತ ಸೇವಾ ಟ್ರಸ್ಟ್ ಅಧ್ಯಕ್ಷೆ ವಾಣಿ ಶ್ರೀನಿವಾಸ್ ಮಾತನಾಡಿ, ಕಳೆದ 13 ವರ್ಷಗಳಿಂದ ಸತತ ವಾಗಿ ಸಾಮೂಹಿಕ ಸೀಮಂತ ನಡೆಸಲಾಗುತ್ತಿದೆ. ಗರ್ಭೀಣಿಯರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ತಿಳಿಸಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಯು.ಫಾರೂಕ್ ಮಾತನಾಡಿ ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಪಂಚ ಗ್ಯಾರಂಟಿ ಯೋಜನೆ ಯಶಸ್ವಿಯಾಗಿ ಅನುಷ್ಟಾನಗೊಳಿಸಿ ಎಲ್ಲೆಡೆ ಪ್ರಶಂಸೆ ಪಡೆದಿದೆ ಎಂದು ಹೇಳಿದರು.ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಟಾನ ಉಸ್ತುವಾರಿ ಪ್ರಾಧಿಕಾರ ಉಪಾಧ್ಯಕ್ಷ ಸಮೀವುಲ್ಲಾ ಷರೀಫ್ ಮಾತನಾಡಿ ಚಿಕ್ಕಮಗಳೂರಿನಲ್ಲಿ ಫೆ.23 ರಂದು ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ ನಡೆಯಲಿದೆ. ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ವಸಂತ್‌ಕುಮಾರ್, ನೂತನ ತಾಲೂಕು ಅಧ್ಯಕ್ಷೆ ಹೇಮಲತಾ, ಅಜ್ಜಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಯಾನಂದ್, ಜಿ.ಎಚ್.ಶ್ರೀನಿವಾಸ್ ಜನಹಿತ ಸೇವಾ ಟ್ರಸ್ಟ್ ಅಧ್ಯಕ್ಷೆ ವಾಣಿ ಶ್ರೀನಿವಾಸ್,ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ, ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಟಿ.ಎನ್.ಜಗದೀಶ್, ತಾಪಂ ಇಒ ಡಾ.ಆರ್.ದೇವೇಂದ್ರಪ್ಪ, ಸಿಡಿಪಿಒ ಎನ್.ಚರಣ್‌ರಾಜ್ ಮತ್ತಿತರರಿದ್ದರು.-12ಕೆಟಿಆರ್.ಕೆ.8ಃ
ತರೀಕೆರೆಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ಉದ್ಘಾಟಿಸಿದರು. ಪುರಸಭೆ ಅಧ್ಯಕ್ಷ ವಸಂತಕುಮಾರ್, ಜಿ.ಎಚ್.ಶ್ರೀನಿವಾಸ್ ಜನಹಿತ ಸೇವಾ ಟ್ರಸ್ಟ್ ಅಧ್ಯಕ್ಷೆ ವಾಣಿ ಶ್ರೀನಿವಾಸ್, ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ. ನೂತನ ತಾಲೂಕು ಅಧ್ಯಕ್ಷೆ ಹೇಮಲತಾ, ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ ಮತ್ತಿತರರು ಇದ್ದರು.