ಪ್ರಧಾನಿ ನರೇಂದ್ರ ಮೋದಿ ಅವರು ಅಂಬೇಡ್ಕರ್ ಅವರ ಜೀವನಕ್ಕೆ ಸಂಬಂಧಿಸಿದ ಐದು ಪ್ರಮುಖ ಸ್ಥಳಗಳನ್ನು ಪಂಚತೀರ್ಥ 'ಗಳಾಗಿ ಅಭಿವೃದ್ಧಿ ಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ, ತುಮಕೂರುಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ಅವರನ್ನು ಗೌರವಿಸುವಂತಹ ಹಲವು ಕಾರ್ಯಕ್ರಮಗಳನ್ನು ಬಿಜೆಪಿ ಆಯೋಜಿಸಿದೆ. ಹಲವು ವರ್ಷಗಳ ಹಿಂದೆಯೇ ಅಭಿವೃದ್ಧಿಶೀಲ ರಾಷ್ಟ್ರಕ್ಕೆ ಅಂಬೇಡ್ಕರ್ ಅಡಿಪಾಯ ಹಾಕಿದವರು. ಇದೇ ರೀತಿ ಪ್ರಧಾನಿ ನರೇಂದ್ರ ಮೋದಿ ಅವರು ಅಂಬೇಡ್ಕರ್ ಅವರ ಜೀವನಕ್ಕೆ ಸಂಬಂಧಿಸಿದ ಐದು ಪ್ರಮುಖ ಸ್ಥಳಗಳನ್ನು ಪಂಚತೀರ್ಥ''''''''ಗಳಾಗಿ ಅಭಿವೃದ್ಧಿ ಪಡಿಸಿದ್ದಾರೆ. ಇದು ಮೋದಿ ಅವರು ಅಂಬೇಡ್ಕರ್ ಅವರಿಗೆ ಕೊಟ್ಟ ಗೌರವ ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಹೇಳಿದರು.ಮಂಗಳವಾರ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿಯ ಎಸ್.ಸಿ. ಮೋರ್ಚಾದಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ಸಂವಿಧಾನಶಿಲ್ಪಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವ ಹಾಗೂ ನಂತರದ ದಿನಗಳಲ್ಲಿ ಅನೇಕ ಮಹನೀಯರು ದೇಶಕ್ಕೆ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಅವರಲ್ಲಿ ಹೆಚ್ಚಿನವರಿಗೆ ರಾಜಕೀಯ ಸ್ಥಾನಮಾನ ದೊರಕಿಲ್ಲ, ಅವರಲ್ಲಿ ಡಾ. ಅಂಬೇಡ್ಕರ್ ಆವರೂ ಒಬ್ಬರು. ಜಾತಿ-ಜನಾಂಗದ ವ್ಯತ್ಯಾಸ ಮೀರಿ ಶಿಕ್ಷಣದ ಉನ್ನತ ಸ್ಥಾನ ಪಡೆಯಲು ಸಾಧ್ಯ ಎಂದು ತೋರಿಸಿಕೊಟ್ಟು ಶಿಕ್ಷಣದ ಮಹತ್ವ ಸಾರಿದ್ದಾರೆ ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಹೇಳಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯನ್ನು ಜಿಲ್ಲೆಯಾದ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಅಂಬೇಡ್ಕರ್ ಅವರು ಸಂವಿಧಾನ ಶಿಲ್ಪಿ ಆಗಿದ್ದ ಜೊತೆಯಲ್ಲೇ ಸಾಮಾಜಿಕ ಸಾಮರಸ್ಯದ ಪ್ರವರ್ತಕರಾಗಿದ್ದರು. ಸೌಲಭ್ಯ ವಂಚಿತ ಜನರ ಕಲ್ಯಾಣಕ್ಕಾಗಿ ಇಡೀ ಜೀವನವನ್ನು ಅಂಬೇಡ್ಕರ್ ಅವರು ಸಮರ್ಪಿಸಿಕೊಂಡಿದ್ದರು. ಅವರಿಗೆ ಗೌರವ ಸಲ್ಲಿಸಲು ಇಡೀ ರಾಷ್ಟ್ರ ಋಣಿಯಾಗಿದೆ ಎಂದು ಹೇಳಿದರು.ಜಿಲ್ಲಾ ಬಿಜೆಪಿ ಹಿರಿಯ ಉಪಾಧ್ಯಕ್ಷ ವೈ.ಎಚ್. ಹುಚ್ಚಯ್ಯ, ರಾಜ್ಯ ಬಿಜೆಪಿ ಕಾರ್ಯದರ್ಶಿ ಅಂಬಿಕಾ ಹುಲಿನಾಯ್ಕರ್, ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್, ರಾಜ್ಯ ಬಿಜೆಪಿ ಕಾರ್ಯದರ್ಶಿ ವಿನಯ್ ಬಿದರೆ, ಜಿಲ್ಲಾ ಉಪಾಧ್ಯಕ್ಷ ಸಾಗರನಹಳ್ಳಿ ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿ ಗಂಗರಾಜು, ನಗರ ಅಧ್ಯಕ್ಷ ಟಿ.ಕೆ.ಧನುಷ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನವಚೇತನ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಿತ್ರಮ್ಮ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಸಿದ್ದರಾಮಣ್ಣ, ಮುಖಂಡರಾದ ಅಂಜನಮೂರ್ತಿ, ಹನುಮಂತರಾಯಪ್ಪ, ಟಿ.ಹೆಚ್.ಹನುಮಂತರಾಜು, ಜ್ಯೋತಿ ತಿಪ್ಪೇಸ್ವಾಮಿ, ಗಂಗಾಧರ್, ಸತ್ಯಮಂಗಲ ಜಗದೀಶ್, ಮಂಜುನಾಥ್, ಮಾರುತೇಶ್, ಮಧುವನಿತಾ, ಎಸ್.ಸಿ. ಘಟಕ ನಗರ ಅಧ್ಯಕ್ಷ ನಾಗರಾಜು, ವಿರೂಪಾಕ್ಷಪ್ಪ, ಪ್ರತಾಪ್, ಮಂಜುಳಾ, ರೇಖಾ, ಅರುಣ್, ಪ್ರೀತಂ ಜೈನ್, ಗಣೇಶ್‌ಪ್ರಸಾದ್, ಬಂಬೂ ಮೋಹನ್, ಆಟೋ ಯಡಿಯೂರಪ್ಪ, ವೆಂಕಟೇಶಾಚಾರ್, ಗಂಗೇಶ್, ಕಿರ್ಲೋಸ್ಕರ್ ಕುಮಾರ್, ಸಿದ್ಧೇಶ್, ಗಿರೀಶ್, ಮೊದಲಾದವರು ಭಾಗವಹಿಸಿದ್ದರು. ಅಂಬೇಡ್ಕರ ಜಯಂತಿ ಅಂಗವಾಗಿ ಬಿಜೆಪಿ ಮುಖಂಡರು ನಗರದ ಜೆಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬ್ರೆಡ್, ಹಣ್ಣು ಹಂಚಿದರು.