ಸಾರಾಂಶ
ಪಂಚ ವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ಉದ್ಯಮಿ ಡಾ. ವಿಜಯ ಸಂಕೇಶ್ವರ ಅವರನ್ನು ಆರಿಸಲಾಗಿದೆ. ನವೆಂಬರ್‌ನಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಸದ್ಭಾವನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗುತ್ತದೆ.
ಕನ್ನಡಪ್ರಭ ವಾರ್ತೆ ಕೋಟ
ಇಲ್ಲಿನ ಪಂಚವರ್ಣ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ನೇತ್ರತ್ವದಲ್ಲಿ ಪ್ರತಿವರ್ಷ ನವೆಂಬರ್‌ನಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ - ಸದ್ಭಾವನಾ ಕಾರ್ಯಕ್ರಮದಲ್ಲಿ ನೀಡಲಾಗುವ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿ ಉದ್ಯಮಿ, ಪದ್ಮಶ್ರೀ ಪುರಸ್ಕೃತ ಡಾ.ವಿಜಯ ಸಂಕೇಶ್ವರ ಅವರನ್ನು ಆರಿಸಲಾಗಿದೆ.ವಿಶೇಷ ಆಹ್ವಾನಿತರಾಗಿ ಚಿತ್ರನಟ ದೊಡ್ಡಣ್ಣ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಿಶೇಷ ಪುರಸ್ಕಾರವನ್ನು ಪರಿಸರಸ್ನೇಹಿ ಸಂಘಟನೆ ಸ್ವಚ್ಛ ಬ್ರಿಗೇಡ್ ಕಾರ್ಕಳ ತಂಡಕ್ಕೆ ನೀಡಲಾಗುತ್ತಿದೆ.
ಅಲ್ಲದೇ ಪ್ರತಿಭಾ ಪುರಸ್ಕಾರ, ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ, ವಿದ್ಯಾರ್ಥಿಗಳಿಗೆ ಸಹಾಯಧನ, ಅಂಗನವಾಡಿಗೆ ಸಮವಸ್ತ್ರ, ಕನ್ನಡ ಮಾಧ್ಯಮ ಸರ್ಕಾರಿ ಶಾಲೆಗಳಿಗೆ ದತ್ತಿನಿಧಿ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಈ ವೇದಿಕೆಯಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಅಜಿತ್ ಆಚಾರ್ ಹಾಗೂ ಸ್ಥಾಪಾಕಾಧ್ಯಕ್ಷ ಶೇವಧಿ ತಿಳಿಸಿದ್ದಾರೆ.