ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ರಾಜ್ಯದ ಎಲ್ಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಯನ್ನು ಗೆಜೆಟೆಡ್ ಗ್ರೂಪ್ ಬಿ ದರ್ಜೆಗೆ ಉನ್ನತೀಕರಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾ ಆಡಳಿತ ಭವನದ ಎದುರು ಪ್ರತಿಭಟನಾ ಧರಣಿ ಆರಂಭಿಸಿತು.ಗ್ರೇಡ್-1 ಕಾರ್ಯದರ್ಶಿಗಳ ವೃಂದದ ಜೇಷ್ಠತಾ ಪಟ್ಟಿಯನ್ನು ತುರ್ತಾಗಿ ಪ್ರಕಟಣೆ ಮಾಡಿ ಪಿಡಿಒ ವೃಂದಕ್ಕೆ ಮುಂಬಡ್ತಿ ನೀಡುವ ಬಗ್ಗೆ ಆಯುಕ್ತರಿಗೆ ಸರ್ಕಾರದ ನಿರ್ದೇಶನವಿದ್ದರೂ ಮುಂಬಡ್ತಿ ನೀಡದೇ ನಿರಾಸಕ್ತಿ ವಹಿಸುತ್ತಿರುವುದು ಸಾವಿರಕ್ಕೂ ಅಧಿಕ ವಿವಿಧ ವೃಂದದ ನೌಕರರು ಮುಂಬಡ್ತಿಯಿಂದ ವಂಚಿತರಾಗಿದ್ದು, ಕಾಲಮಿತಿಯೊಳಗೆ ಮುಂಬಡ್ತಿಗೆ ಕ್ರಮ ವಹಿಸಬೇಕಾಗಿದೆ. ಕಾರ್ಯದರ್ಶಿ ಗ್ರೇಡ್-1 ವೃಂದದಿಂದ ಪಿಡಿಒ ವೃಂದಕ್ಕೆ ಈಗಿರುವ ಮುಂಬಡ್ತಿ ಅನುಪಾತವನ್ನು ಶೇ.35 ರಿಂದ 60ಕ್ಕೆ ಹೆಚ್ಚಿಸಬೇಕು. 7 ವರ್ಷ ಒಂದೇ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರನ್ನು ಜಿಲ್ಲೆಯ ಬೇರೆ ತಾಲೂಕಿಗೆ ವರ್ಗಾಯಿಸುವ ಕರಡು ಅಧಿಸೂಚನೆ ಹಿಂಪಡೆಯಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರುಸಲಾಗಿದೆ. ಗ್ರೇಡ್-2 ಕಾರ್ಯದರ್ಶಿ ಹುದ್ದೆಯಿಂದ ಗ್ರೇಡ್-1 ಕಾರ್ಯದರ್ಶಿಹುದ್ದೆಗೆ ಕಳೆದ 12 ರಿಂದ 14 ವರ್ಷಗಳ ಕಾಲ ಬಡ್ತಿ ಇಲ್ಲದೆ ಕಾರ್ಯ ನಿರ್ವಹಿಸುತ್ತಿದ್ದು, ಗ್ರೇಡ್-2 ಕಾರ್ಯದರ್ಶಿಗಳಿಗೆ ನೇರ ನೇಮಕಾತಿ ಕೋಟಾದಡಿ ಒಂದು ಬಾರಿ ಏಕಕಾಲದಲ್ಲಿ ಬಡ್ತಿ ನೀಡುವುದು. ಗ್ರೇಡ್-2 ಕಾರ್ಯದರ್ಶಿ ಹುದ್ದೆಯಿಂದ ಗ್ರೇಡ್-1 ಕಾರ್ಯದರ್ಶಿ ಹುದ್ದೆಗೆ ಬಡ್ತಿ ಶೇ.33 ರಷ್ಟಿದ್ದು ಅದನ್ನು ಶೇ.80ಕ್ಕೆ ಹೆಚ್ಚಿಸಬೇಕು. 5000 ಕ್ಕಿಂತ ಹೆಚ್ಚಿಗೆ ಇರುವ ಗ್ರಾಮ ಪಂಚಾಯತಿಗಳನ್ನು ಗ್ರೇಡ್-1 ಪಂಚಾಯತಿ ಅಂತಾ ಮೇಲ್ದರ್ಜೆಗೆ ಏರಿಸಬೇಕು ಎಂದು ಆಗ್ರಹಿಸಿದರು.ಕರವಸೂಲಿಗಾರ ಮತ್ತು ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ವೃಂದದಿಂದ ಕಾರ್ಯದರ್ಶಿಗ್ರೇಡ್ -2 ಮತ್ತು ಎಸ್.ಡಿ.ಎ.ಎ ಹುದ್ದೆಗಳಿಗೆ ಸರ್ಕಾರದಿಂದ ಸೇವೆ ಒಳಗಿನ ನೇರ ನೇಮಕಾತಿ ಎಂದು ಮಾಡುತ್ತಿದ್ದು, ನೇರ ನೇಮಕಾತಿ ಎಂಬ ಪದವನ್ನು ಕೈ ಬಿಟ್ಟು ಮುಂಬಡ್ತಿ ಎಂಬ ಪದವನ್ನು ಸೇರಿಸಿ ಸರ್ಕಾರದ ಆದೇಶ ಮಾಡುವುದು ಹಾಗೂ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ದ್ವಿತೀಯ ದರ್ಜೆಯ ಲೆಕ್ಕ ಸಹಾಯಕರ ಹುದ್ದೆಯನ್ನು ಭರ್ತಿ ಮಾಡಲು ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಇತರೆ ಇಲಾಖೆಯಲ್ಲಿರುವ ಸಮಾನಾಂತರ ಹುದ್ದೆಗಳಿಗೆ ನಿಯೋಜನೆ ಮೇಲೆ ಹೋಗಲು ಒಟ್ಟು ಮಂಜೂರಾದ ಹುದ್ದೆಗಳಲ್ಲಿ ಶೇ.25 ಹುದ್ದೆಗಳಿಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿದರು. ಬಸವರಾಜ ಮುನ್ನೊಳ್ಳಿ, ಹಣಮಂತ ಕರ್ಣಕೋಟೆ, ಗಂಗಾಧರ ಹನಮಸಾಗರ, ಸಿದ್ಧಾರ್ಥ ಗೋಠೆ, ಎಸ್.ಪಿ.ಹಿರೇಮಠ, ಮಹಾಂತೇಶ ನಾಲತವಾಡ, ಎಲ್.ಜಿ.ಶಾಂತಗಿರಿ, ಜಿ.ಎಸ್.ಅರಳಿಕಟ್ಟಿ, ರಾಮಚಂದ್ರ ಮೇತ್ರಿ ಸೇರಿದಂತೆ ಎಲ್ಲ ವೃಂದದ ನೌಕರರು ಇದ್ದರು.