ಸಾರಾಂಶ
ಕನ್ನಡಪ್ರಭ ವಾರ್ತೆ ಸಾಗರ ತಾಲೂಕಿನ ಇತಿಹಾಸ ಪ್ರಸಿದ್ಧ ಹಾಗೂ ಜೈನ ಧಾರ್ಮಿಕ ಕೇಂದ್ರ ಅತಿಶಯ ಶ್ರೀ ಸಿದ್ಧಗಿರಿ ಕ್ಷೇತ್ರ ವಡನ್‌ಬೈಲ್‌ನಲ್ಲಿ ಭಗವಾನ್ ೧೦೦೮ ಪಾರ್ಶನಾಥ ಸ್ವಾಮಿಯ ಪಂಚಕಲ್ಯಾಣ ಮಹೋತ್ಸವವು ಮಾ.೧ರಿಂದ ೬ರವರೆಗೆ ನಡೆಯಲಿದೆ. ಆರು ದಿನಗಳ ಕಾಲ ಮುನಿಶ್ರೀ ೧೦೮ ಪುಣ್ಯಸಾಗರರ ಸಾನ್ನಿಧ್ಯದಲ್ಲಿ ಹಾಗೂ ಸೋಂದಾ ಜೈನ ಮಠದ ಸ್ವಸ್ತಿಶ್ರೀ ಭಟ್ಟಾಕಲಂಕ ಭಟ್ಟಾಚರ್ಯವರ್ಯ ಸ್ವಾಮಿಗಳ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿವೆ.
ಮಾರ್ಚ್ ೧ರಂದು ಬೆಳಗ್ಗೆ ಶಾಂತಿಚಕ್ರ ಆರಾಧನೆ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಮಧ್ಯಾಹ್ನ ೩ ಗಂಟೆಗೆ ಧಾರ್ಮಿಕ ಕಾರ್ಯಕ್ರಮ ಆಯೋಜಿಸಿದೆ. ಕಾರ್ಕಳದ ಲಲಿತಾಕೀರ್ತಿ ಸ್ವಾಮಿಗಳು, ಕೊಲ್ಲಾಪುರದ ಲಕ್ಷ್ಮೀಸೇನಾ ಭಟ್ಟಾರಕ ಸ್ವಾಮಿಗಳು ಹಾಗೂ ಆನಂದಪುರ ಮುರುಘಾ ಮಠದ ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮಿಗಳು ಭಾಗವಹಿಸಲಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಶಾಸಕರಾದ ಸಂಜಯ್ ಪಾಟೀಲ್ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ರಾತ್ರಿ ೭ಕ್ಕೆ ಪರಿಣಿತಿ ಕಲಾಕೇಂದ್ರ ಹಾಗೂ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.ಮಾರ್ಚ್ ೨ರಂದು ಬೆಳಗ್ಗೆ ಧಾರ್ಮಿಕ ಪೂಜಾ ಕಾರ್ಯಗಳು ನಡೆಯಲಿದೆ. ಮಧ್ಯಾಹ್ನ ೩ಗಂಟೆಗೆ ನಡೆಯುವ ಧಾರ್ಮಿಕ ಸಭೆಯಲ್ಲಿ ಅರಿಹಂತಗಿರಿ ಮಠದ ಧವಲಕೀರ್ತಿ ಭಟ್ಟಾರಕ ಸ್ವಾಮಿಗಳು, ಕಂಬದಹಳ್ಳಿಯ ಭಾನುಕೀರ್ತಿ ಭಟ್ಟಾರಕ ಸ್ವಾಮಿಗಳು ಆಗಮಿಸಲಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ಕಾರ್ಯಕ್ರಮ ಉದ್ಘಾಟಿಸುವರು. ಶಿವಮೊಗ್ಗ ಶಾಸಕ ಚನ್ನಬಸಪ್ಪ, ಮಾಜಿ ಸಚಿವ ಹೆಚ್.ಹಾಲಪ್ಪ ಭಾಗವಹಿಸಲಿದ್ದು ಹಿರಿಯ ಸಾಹಿತಿ ಗಜಾನನ ಶರ್ಮ ಉಪನ್ಯಾಸ ನೀಡಲಿದ್ದಾರೆ.
ಮಾರ್ಚ್ ೩ರಂದು ಮಧ್ಯಾಹ್ನ ೩ ಗಂಟೆಗೆ ನಡೆಯುವ ಧಾರ್ಮಿಕ ಸಭೆಯದಲ್ಲಿ ಮೂಡುಬಿದರೆ ಮಠದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ, ವರೂರಿನ ಧರ್ಮಸೇನ ಭಟ್ಟಾರಕ ಸ್ವಾಮಿಜಿ, ಶ್ರವಣಬೆಳಗೊಳದ ಆಗಮಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಭಾಗವಹಿಸಲಿದ್ದಾರೆ. ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಿ.ಸುರೇಂದ್ರಕುಮಾರ್ ಉದ್ಘಾಟಿಸಲಿದ್ದಾರೆ.ಮಾರ್ಚ್ ೪ರಂದು ಬೆಳಗ್ಗೆ ಧಾರ್ಮಿಕ ಪೂಜಾ ಕಾರ್ಯಗಳೊಂದಿಗೆ ರಾಜ್ಯಾಭಿಷೇಕ, ದೀಕ್ಷಾಕಲ್ಯಾಣ ಕಾರ್ಯಕ್ರಮಗಳು ನಡೆಯಲಿವೆ. ಮಧ್ಯಾಹ್ನ ೩ ಗಂಟೆಗೆ ನಡೆಯುವ ಧರ್ಮಸಭೆಯನ್ನು ಸಿಗಂದೂರು ಕ್ಷೇತ್ರದ ಧರ್ಮದರ್ಶಿ ಡಾ.ರಾಮಪ್ಪ ಉದ್ಘಾಟಿಸಲಿದ್ದಾರೆ. ಹೊಂಬುಜದ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮಿಗಳು, ನರಸಿಂಹರಾಜಪುರದ ಲಕ್ಷ್ಮೀಸೇನ ಭಟ್ಟಾರಕ ಸ್ವಾಮಿಗಳು ಭಾಗವಹಿಸಲಿದ್ದಾರೆ.
ಮಾರ್ಚ್ ೫ರಂದು ಮಧ್ಯಾಹ್ನ ೩ ಗಂಟೆಗೆ ನಡೆಯುವ ಧಾರ್ಮಿಕ ಸಭೆಯನ್ನು ಸಿಗಂದೂರು ಕ್ಷೇತ್ರದ ಪ್ರಧಾನ ಅರ್ಚಕ ಶೇಷಗಿರಿ ಭಟ್ ಉದ್ಘಾಟಿಸಲಿದ್ದಾರೆ. ಕನಕಗಿರಿ ಮಠದ ಭುನಕೀರ್ತಿ ಭಟ್ಟಾರಕ ಸ್ವಾಮಿಗಳು, ಲಕ್ಕವಳ್ಳಿಯ ವೃಷಭಸೇನ ಭಟ್ಟಾರಕ ಸ್ವಾಮಿಗಳು ಭಾಗವಹಿಸಲಿದ್ದಾರೆ.ಮಾರ್ಚ್ ೬ರಂದು ಬೆಳಗ್ಗೆ ಮೋಕ್ಷಕಲ್ಯಾಣ ಮತ್ತು ಪಾರ್ಶ್ವನಾಥ ಸ್ವಾಮಿಗೆ ೧೦೦೮ ಕಳಶಗಳಿಂದ ಅಭಿಷೇಕ ನಡೆಯಲಿದೆ. ಮಧ್ಯಾಹ್ನ ೩ ಗಂಟೆಗೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ನಾಂದಣಿ ಮಠದ ಜಿನಸೇನ ಭಟ್ಟಾರಕ ಸ್ವಾಮಿಗಳು, ಆರತಿಪುರದ ಸಿದ್ಧಾಂತಕೀರ್ತಿ ಭಟ್ಟಾರಕ ಸ್ವಾಮಿಗಳು, ಯೋಜನೆ ಮತ್ತು ಸಾಂಖಿಕ ಸಚಿವರಾದ ಡಿ.ಸುಧಾಕರ್ ಭಾಗವಹಿಸಲಿದ್ದಾರೆ.
- - - -೨೮ಕೆ.ಎಸ್.ಎ.ಜಿ.೧: