ಕೋಟ ರಾ.ಹೆ.ಯಲ್ಲಿ ಪಂಚವರ್ಣದ ೨೧೪ನೇ ವಾರದ ಹಸಿರುಜೀವ ಅಭಿಯಾನ

| Published : Jul 01 2024, 01:45 AM IST

ಕೋಟ ರಾ.ಹೆ.ಯಲ್ಲಿ ಪಂಚವರ್ಣದ ೨೧೪ನೇ ವಾರದ ಹಸಿರುಜೀವ ಅಭಿಯಾನ
Share this Article
  • FB
  • TW
  • Linkdin
  • Email

ಸಾರಾಂಶ

೨೧೪ನೇ ವಾರದ ಪರಿಸರಸ್ನೇಹಿ ಹಸಿರುಜೀವ ಅಭಿಯಾನದ ಅಂಗವಾಗಿ ಗೀತಾನಂದ ಫೌಂಡೇಶನ್ ಮಣೂರು, ಸುವರ್ಣ ಎಂಟರ್‌ಪ್ರೈಸಸ್ ಬ್ರಹ್ಮಾವರ ಕೊಡ ಮಾಡಿದ ಗಿಡಗಳ ನೆಡುವ ಕಾರ್ಯಕ್ರಮ ಕೋಟದ ರಾಷ್ಟ್ರೀಯ ಹೆದ್ದಾರಿ ವಿವಿಧ ಭಾಗಗಳಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಕೋಟ

ಇಲ್ಲಿನ ಕೋಟ ಪಂಚವರ್ಣ ಯುವಕ ಮಂಡಲ, ಪಂಚವರ್ಣ ಮಹಿಳಾ ಮಂಡಲಗಳ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಸಮುದ್ಯತಾ ಗ್ರೂಪ್ಸ್ ಕೋಟ ಸಹಯೋಗದೊಂದಿಗೆ ೨೧೪ನೇ ವಾರದ ಪರಿಸರಸ್ನೇಹಿ ಹಸಿರುಜೀವ ಅಭಿಯಾನದ ಅಂಗವಾಗಿ ಗೀತಾನಂದ ಫೌಂಡೇಶನ್ ಮಣೂರು, ಸುವರ್ಣ ಎಂಟರ್‌ಪ್ರೈಸಸ್ ಬ್ರಹ್ಮಾವರ ಕೊಡ ಮಾಡಿದ ಗಿಡಗಳ ನೆಡುವ ಕಾರ್ಯಕ್ರಮ ಕೋಟದ ರಾಷ್ಟ್ರೀಯ ಹೆದ್ದಾರಿ ವಿವಿಧ ಭಾಗಗಳಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಮಣೂರು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಸತೀಶ್ ಎಚ್. ಕುಂದರ್ ಚಾಲನೆ ನೀಡಿದರು. ಕೋಟದ ಜನತಾ ಫಿಶ್‌ಮಿಲ್ ವ್ಯವಸ್ಥಾಪಕ ಶ್ರೀನಿವಾಸ ಕುಂದರ್, ಕೋಟ ಪಂಚಾಯಿತಿ ಉಪಾಧ್ಯಕ್ಷ ಪಾಂಡು ಪೂಜಾರಿ, ಗೀತಾನಂದ ಫೌಂಡೇಶನ್ ಸಮಾಜಕಾರ್ಯ ವಿಭಾಗದ ರವಿಕಿರಣ್ ಕೋಟ, ಮಣೂರು ಚಿತ್ತಾರಿ ಟ್ರಸ್ಟ್ ಮುಖ್ಯಸ್ಥ ಗೋಪಾಲ್ ಪೈ, ಪರಿಸರವಾದಿ ಕೋ.ಗಿ.ನಾ, ಉದ್ಯಮಿಗಳಾದ ನಾಗರಾಜ್ ಅಮೀನ್, ಮಾಧವ ಪೈ, ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ, ಸಂಚಾಲಕಿ ಸುಜಾತಾ ಬಾಯರಿ, ಮಣೂರು ಫ್ರೆಂಡ್ಸ್ ಮಾಜಿ ಅಧ್ಯಕ್ಷ ದಿನೇಶ್ ಆಚಾರ್, ಪಂಚವರ್ಣದ ಸಂಚಾಲಕ ಅಮೃತ್ ಜೋಗಿ, ಸಂಘಟನಾ ಕಾರ್ಯದರ್ಶಿ ಗಿರೀಶ್ ಆಚಾರ್, ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.