ಕನ್ನಡಪ್ರಭ ವಾರ್ತೆ ಪಾಂಡವಪುರ
ಪುರಸಭೆ ಮಾಜಿ ಸದಸ್ಯನೊಬ್ಬ ಮುಖ್ಯಾಧಿಕಾರಿ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿ ಗುರುವಾರ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದರು.ಪಟ್ಟಣದ 5ನೇ ವಾರ್ಡ್ ಪುರಸಭೆ ಮಾಜಿ ಸದಸ್ಯ ಪಾರ್ಥಸಾರಥಿ ಪುರಸಭೆಗೆ ಸೇರಿದ ವಾಣಿಜ್ಯ ಮಳಿಗೆ ಹರಾಜು ಪ್ರಕ್ರಿಯೆಗೆ ವೇಳೆ ಹಲ್ಲೆ ನಡೆಸಿರುವುದಾಗಿ ಮುಖ್ಯಾಧಿಕಾರಿ ಸತೀಶ್‌ಕುಮಾರ್ ಟೌನ್ ಪೊಲೀಸ್ ಠಾಣೆಗೆ ಬುಧವಾರ ಸಂಜೆ ದೂರ ನೀಡಿದ್ದಾರೆ.
ಪಟ್ಟಣದ ದೊಡ್ಡಿಬೀದಿಯಲ್ಲಿ ಪುರಸಭೆಗೆ ಸೇರಿದ ಮೂರು ವಾಣಿಜ್ಯ ಮಳಿಗೆಗಳಿದ್ದು, ಈ ಮಳಿಗೆಗಳನ್ನು ಹರಾಜು ಮೂಲಕ ಪಡೆದಿದ್ದ ಶ್ರೀಕಂಠೇಗೌಡ ಗುತ್ತಿಗೆ ಅವಧಿ ಮುಗಿದ ಹಿನ್ನೆಲೆಯಲ್ಲಿ ಡೀಸಿ ಆದೇಶದಂತೆ ಮಳಿಗೆಗಳ ಮರು ಹರಾಜು ಪ್ರಕ್ರಿಯೆ ನಡೆದು ಮೂರು ಮಳಿಗೆಗಳನ್ನು ಬೇರೆಯವರು ಪಡೆದುಕೊಂಡಿದ್ದರು.ಈ ವಿಚಾರವಾಗಿ ಬುಧವಾರ ಸಂಜೆ ಪುರಸಭೆ ಕಚೇರಿಗೆ ಆಗಮಿಸಿದ್ದ ಮಾಜಿ ಸದಸ್ಯ ಪಾರ್ಥಸಾರಥಿ ಮಳಿಗೆಗೆಳನ್ನು ಮೂಲ ಬಿಡ್ಡು ದಾರರಿಗೆ ನೀಡಬೇಕು. ಬೇರೆಯವರಿಗೆ ವರ್ಗಾಯಿಸದಂತೆ ಮುಖ್ಯಾಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಈ ವಿಚಾರವಾಗಿ ಮುಖ್ಯಾಧಿಕಾರಿ ಮತ್ತು ಪುರಸಭೆ ಮಾಜಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದೆ.
ಪುರಸಭೆ ಮುಖ್ಯಾಧಿಕಾರಿ ಸತೀಶ್‌ಕುಮಾರ್ ಮಾಧ್ಯಮದವರೊಂದಿಗೆ ಮಾತನಾಡಿ, ಪುರಸಭೆ ಮಾಜಿ ಸದಸ್ಯ ಪಾರ್ಥಸಾರಥಿ ಮಳಿಗೆಗಳ ಹರಾಜು ಪ್ರಕ್ರಿಯೆ ವಿಚಾರವಾಗಿ ಚಲುವರಾಜುನೊಂದಿಗೆ ಕಚೇರಿ ಬಂದು ಮಳಿಗೆಗಳ ಮರು ಗರಾಜು ಪ್ರಕ್ರಿಯೆಗೆ ತಡೆ ನೀಡಿ ಮೂಲ ಬಿಡ್ಡುದಾರರಿಗೆ ನೀಡಬೇಕು ಎಂದು ಒತ್ತಾಯಿಸಿದರು.
ಆದರೆ, ಮೂಲ ಬಿಡ್ಡುದಾರ ಶ್ರೀಕಂಠೇಗೌಡರನ್ನು ಈ ಬಗ್ಗೆ ಸಂಪರ್ಕಿಸಿದಾಗ ಮಳಿಗೆಗಳನ್ನು ನೀಡುವಂತೆ ನಾವು ಯಾವುದೇ ಅರ್ಜಿ ಸಲ್ಲಿಸಿಲ್ಲ. ನಮಗೆ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ. ಪಾರ್ಥಸಾರಥಿ ಅವರು ಮೂರನೇ ವ್ಯಕ್ತಿಯಾದ ಚಲುವರಾಜು ನನ್ನು ಕರೆದುಕೊಂಡು ಬಂದು ಅವರಿಗೆ ಮಳಿಗೆ ನೀಡಬೇಕು ಎಂದು ತಾಕೀತು ಮಾಡಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವಿವರಿಸಿದರು.
ಈ ಹಿಂದೆ ಪಾರ್ಥಸಾರ ಅವರುದಿ ಪುರಸಭೆ ಆಡಳಿತ ಮಂಡಳಿ ಅಸ್ತಿತ್ವದಲ್ಲಿದ್ದಾಗಲೂ ಎರಡು ಬಾರಿ ನನ್ನ ಮೇಲೆ ಹಲ್ಲೆ ಯತ್ನ ನಡೆಸಿದ್ದರು. ಈಗ ನನ್ನ ಮೇಲೆ ಹಲ್ಲೆ ನಡೆಸಿ ಅವ್ಯಾಚ್ಯ ಶಬ್ಧಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪೊಲೀಸರು ಕ್ರಮ ಕೈಗೊಳ್ಳದಿದ್ದರೆ ಕಚೇರಿ ಕೆಲಸ ಕಾರ್ಯ ಸ್ಥಗಿತಗೊಳಿಸಲಾಗವುದು. ಜೊತೆಗೆ ಇಡೀ ಪ್ರಕರಣದ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ರಕ್ಷಣೆ ಕೋರಲಾಗಿದೆ ಎಂದರು.ಪುರಸಭೆ ಎಂಜಿನಿಯರ್ ಯಶಸ್ವಿನಿ ಮಾತನಾಡಿ, ಮಹಿಳಾ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಸಾರ್ವಜನಿಕರು, ಮಹಿಳೆಯರು ಇದ್ದರೂ ಮಾಜಿ ಸದಸ್ಯರು ಅತ್ಯಂತ ಕೀಳು ಮಟ್ಟದ ಭಾಷೆ ಬಳಸಿ ಮುಖ್ಯಾಧಿಕಾರಿಯನ್ನು ನಿಂದಿಸಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಪುರಸಭೆ ಅಧಿಕಾರಿಗಳಾದ ಮಂಜುಳಾ, ನಾಗೇಶ್, ಲಕ್ಷ್ಮೀನಾರಾಯಣ, ಮಹೇಶ್, ವನೀತಾ, ಕೃಷ್ಣ, ಪುಷ್ಪ, ಮೇಘನಾ, ಮಣಿಪ್ರಸಾದ್, ನರಸಿಂಹ ಸೇರಿದಂತೆಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.