ಸಾರಾಂಶ
ಪ್ರಾಥಮಿಕ ಸಹಕಾರ ಕೃಷಿ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ಹಿಂದಿನ ಅಧ್ಯಕ್ಷ ಎನ್.ಮುರುಳಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಾಗಶೆಟ್ಟಿ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ನಿರ್ಮಲಾ ಘೋಷಿಸಿದರು.
ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್(ಪಿಎಲ್‌ಡಿ)ನ ನೂತನ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ನಾಗಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು.ಬ್ಯಾಂಕ್‌ನ ಹಿಂದಿನ ಅಧ್ಯಕ್ಷ ಎನ್.ಮುರುಳಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಾಗಶೆಟ್ಟಿ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ನಿರ್ಮಲಾ ಘೋಷಿಸಿದರು.
ಪಿಎಲ್‌ಡಿ ಬ್ಯಾಂಕ್‌ನ ನೂತನ ಅಧ್ಯಕ್ಷ ನಾಗಶೆಟ್ಟಿ ಅವರನ್ನು ಎಲ್ಲಾ ನಿರ್ದೇಶಕರು, ಬೆಂಬಲಿಗರು ಅಭಿನಂಧಿಸಿದರು. ಅಧ್ಯಕ್ಷ ನಾಗಶೆಟ್ಟಿ ಮಾತನಾಡಿ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಆಶೀರ್ವಾದ ಹಾಗೂ ಎಲ್ಲಾ ನಿರ್ದೇಶಕರ ಸಹಕಾರದಿಂದ ಪಿಎಲ್‌ಡಿ ಬ್ಯಾಂಕ್‌ನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಬ್ಯಾಂಕ್‌ನಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ರೈತರಿಗೆ ಒದಗಿಸಿಕೊಡಲಾಗುವುದು ಎಂದರು.ಈ ವೇಳೆ ಬ್ಯಾಂಕ್‌ನ ಉಪಾಧ್ಯಕ್ಷ ಎಂ.ಚನ್ನಯ್ಯ, ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕರಾದ ಎಂ.ಸಿ.ಯಶವಂತ್‌ಕುಮಾರ್, ಸಿ.ಪ್ರಕಾಶ್, ಸೋಮಶೇಖರ್, ಎನ್.ಮುರುಳಿ, ಶಿವಣ್ಣ, ರತ್ನಮ್ಮ, ಗೌರಮ್ಮ, ನಾಗೇಗೌಡ, ದಯಾನಂದ್, ಬಾಬು, ಮುಖಂಡರಾದ ಜೆಡಿಎಸ್ ತಾಲೂಕು ಅಧ್ಯಕ್ಷ ಮಲ್ಲೇಶ್, ಜಿಪಂ ಮಾಜಿ ಸದಸ್ಯ ಎಚ್.ಮಂಜುನಾಥ್, ಗ್ರಾಪಂ ಮಾಜಿ ಅಧ್ಯಕ್ಷ ಕರೀಗೌಡ, ಗ್ರಾಪಂ ಮಾಜಿ ಸದಸ್ಯ ಬಕೋಡಿ, ವಿದ್ಯಾಮಣಿ ನಾಗಶೆಟ್ಟಿ, ಕಾರ್‍ಯದರ್ಶಿ ಸಂಪತ್‌ಕುಮಾರ್, ನಿವೃತ್ತ ಕಾರ್‍ಯದರ್ಶಿ ಹುಚ್ಚೇಗೌಡ, ಸಿಬ್ಬಂದಿ ರಚನ, ಪುನೀತ್, ಅರ್ಚನ ಸೇರಿದಂತೆ ಹಲವರು ಇದ್ದರು.