ಸಾರಾಂಶ
ಕನ್ನಡಪ್ರಭ ವಾರ್ತೆ ಪಾಂಡವಪುರ
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗ ಗ್ರಾಮ ಆಡಳಿತ ಅಧಿಕಾರಿಗಳು ಕೈಗೆ ಕಪ್ಪುಪಟ್ಟಿ ಧರಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದರು.ಸಂಘದ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಕರ್ತವ್ಯಕ್ಕೆ ಹಾಜರಾಗದೆ ಟೆಂಡ್ ಹಾಕಿಕೊಂಡು ಕೈಗೆ ಕಪ್ಪುಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿ ಘೋಷಣೆ ಕೂಗಿದರು.
ಗ್ರಾಮದ ಆಡಳಿತಾಧಿಕಾರಿಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಿಕೊಡಬೇಕು, ಸುಸಜ್ಜಿತ ಕಚೇರಿ, ಟೇಬಲ್, ಕುರ್ಚಿ, ಅಲ್ಮೆರಾ, ಗುಣಮಟ್ಟ ಫೋನ್, ಯುಜಿಸಿ ಸಿಮ್, ಡೇಟಾ, ಗೂಗಲ್ ಕ್ರೋಮ್ ಬುಕ್, ಲ್ಯಾಪ್‌ಟಾಪ್, ಪ್ರಿಂಟರ್, ಸ್ಕ್ಯಾನರ್, ಗ್ರಾಮ ಆಡಳಿತ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ವೇತನ ಶ್ರೇಣಿ ನಿಗಧಿಪಡಿಸಬೇಕು ಎಂದು ಆಗ್ರಹಿಸಿದರು.ಗ್ರಾಮ ಆಡಳಿತ ಅಧಿಕಾರಿಗಳ ಜೇಷ್ಠತೆಯನ್ನು ರಾಜ್ಯ ಮಟ್ಟದ ಜೇಷ್ಠತೆಯನ್ನಾಗಿ ಪರಿಗಣಿಸಬೇಕು ಸೇರಿದಂತೆ ಹಲವು ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ರವಿಬಡಿಗೇರ್, ಪ್ರಧಾನ ಕಾರ್‍ಯದರ್ಶಿ ಸಂಜೀವ್‌ರಾಥೋಡ್, ಉಪಾಧ್ಯಕ್ಷೆ ಜ್ಯೋತಿ, ಜಿಲ್ಲಾ ಪ್ರತಿನಿಧಿ ದಿನೇಶ್ ಸೇರಿದಂತೆ ಹಲವರು ಭಾಗವಹಿಸಿದದ್ದರು.ನಾಳೆ ಜನತಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ಮಂಡ್ಯಸ್ವಾಭಿಮಾನಿ-ಸ್ವಾವಲಂಬಿ ನವಕರ್ನಾಟಕ ನಿರ್ಮಾಣಕ್ಕಾಗಿ ಜನತಾ ಪ್ರಣಾಳಿಕೆಯ ಬಿಡುಗಡೆ ಕಾರ್ಯಕ್ರಮ ಫೆ.೧೪ರಂದು ಬೆಳಗ್ಗೆ ೧೧ ಗಂಟೆಗೆ ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಬಹುಜನ ಸಮಾಜ ಪಾರ್ಟಿಯ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತಿಳಿಸಿದರು.
ರಾಜ್ಯವನ್ನಾಳಿದ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಪಕ್ಷಗಳು ಇಲ್ಲಿಯವರೆಗೆ ಯಾವುದೇ ಸಮಸ್ಯೆಗಳನ್ನು ಬಗೆಹರಿಸಲು ವಿಫಲವಾಗಿದ್ದು, ವಿವಿಧ ಪಕ್ಷಗಳು ತಂದ ನೀತಿಗಳು ಬಹುಸಂಖ್ಯಾತ ಜನಗಳ ಹಿತಕ್ಕೆ ವಿರುದ್ಧವಾಗಿರುವುದು ವೈಫಲ್ಯತೆಗೆ ಕಾರಣವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಆದ್ದರಿಂದ ರೈತ, ದಲಿತ, ಕನ್ನಡ ಭಾಷಾ, ಕಾರ್ಮಿಕ, ಮಹಿಳಾ ಮತ್ತು ವಿದ್ಯಾರ್ಥಿ, ಯುವಜನ, ಚಳುವಳಿಗಳು ರೂಪಿಸಿರುವ ಪ್ರಾದೇಶಿಕ ರಾಜಕೀಯ ಪಕ್ಷದ ಮುನ್ನೋಟವುಳ್ಳ ಪ್ರಣಾಳಿಕೆಯನ್ನು ಹೊರತರಲಾಗುತ್ತಿದ್ದು. ಸದರಿ ಪ್ರಣಾಳಿಕೆ ಜನರ ಮುಂದಿಟ್ಟು, ಜನತಾ ಅಭಿಪ್ರಾಯವನ್ನು ಸಂಗ್ರಹಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಸಭೆಯಲ್ಲಿ ಮಾಜಿ ಸಚಿವರಾದ ಸಿ.ಎ.ಇಬ್ರಾಹಿಂ, ಬಿ.ಟಿ.ಲಲಿತಾ ನಾಯಕ್, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ರಾಷ್ಟ್ರೀಯ ಸಂಯೋಜಕ ಎಂ.ಗೋಪಿನಾಥ್, ಎಐಬಿಎಸ್‌ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ, ಎಐಬಿಎಸ್‌ಪಿ ರಾಜ್ಯ ಸಂಯೋಜಕ ಎಚ್.ಡಿ.ಬಸವರಾಜ್, ಆರ್‌ಪಿಐ(ಬಿ) ರಾಷ್ಟ್ರೀಯ ಅಧ್ಯಕ್ಷ ಎನ್.ಮೂರ್ತಿ, ಆರ್‌ಪಿಐ ರಾಜ್ಯಾಧ್ಯಕ್ಷ ಮೋಹನ್‌ರಾಜ್, ಕನ್ನಡ ಹೋರಾಟಗಾರ ಶಿವರಾಮ್ ಸೇರಿದಂತೆ ಹಲವು ಸಂಘಟನೆಗಳ ಹೋರಾಟಗಾರರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.ಜಿಲ್ಲಾ ಉಪಾಧ್ಯಕ್ಷ ಆನಂದ್.ಬಿ, ಮದ್ದೂರು ತಾಲೂಕು ಅಧ್ಯಕ್ಷ ಮುತ್ತುರಾಜ್ ಗೋಷ್ಠಿಯಲ್ಲಿದ್ದರು.