ನಗರದ ಪಾಂಡೇಶ್ವರ ರೈಲ್ವೆ ಲೆವೆಲ್ ಕ್ರಾಸಿಂಗ್ನಲ್ಲಿ ಪ್ರತಿದಿನ ಉಂಟಾಗುತ್ತಿರುವ ತೀವ್ರ ಸಂಚಾರ ದಟ್ಟಣೆಯಿಂದ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ, ವಿವಿಧ ಸಂಘಟನೆಗಳ ಮನವಿಯ ಮೇರೆಗೆ ವಿಧಾನ ಪರಿಷತ್ ಸದಸ್ಯ ಪಿ.ವಿ.ಮೋಹನ್ ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದರು.
ಮಂಗಳೂರು: ನಗರದ ಪಾಂಡೇಶ್ವರ ರೈಲ್ವೆ ಲೆವೆಲ್ ಕ್ರಾಸಿಂಗ್ನಲ್ಲಿ ಪ್ರತಿದಿನ ಉಂಟಾಗುತ್ತಿರುವ ತೀವ್ರ ಸಂಚಾರ ದಟ್ಟಣೆಯಿಂದ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ, ವಿವಿಧ ಸಂಘಟನೆಗಳ ಮನವಿಯ ಮೇರೆಗೆ ವಿಧಾನ ಪರಿಷತ್ ಸದಸ್ಯ ಪಿ.ವಿ.ಮೋಹನ್ ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದರು.ಸಾರ್ವಜನಿಕರು ಅಲ್ಲಿನ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್ ಸದಸ್ಯರ ಗಮನ ಸೆಳೆದರು. ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ದಕ್ಷಿಣ ರೈಲ್ವೆ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ನಡುವೆ ಕೆಲವು ಮಹತ್ವದ ಕ್ರಮಗಳ ಕುರಿತು ಚರ್ಚೆ ಮತ್ತು ಯೋಜನಾ ಪ್ರಕ್ರಿಯೆ ನಡೆದಿದೆ. ಪಾಲಿಕೆ ವ್ಯಾಪ್ತಿಯಲ್ಲಿ ನಾಲ್ಕು ಪಥಗಳಿರುವ ರಸ್ತೆ, ರೈಲ್ವೆಲೆವೆಲ್ ಕ್ರಾಸಿಂಗ್ ವ್ಯಾಪ್ತಿಯಲ್ಲಿ ಕೇವಲ ಎರಡು ಪಥಗಳಿಗೆ ಸೀಮಿತವಾಗಿರುವುದರಿಂದ ವಾಹನಗಳ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರೈಲ್ವೆ ಗೇಟ್ ವ್ಯಾಪ್ತಿಯಲ್ಲಿ ರಸ್ತೆಯನ್ನು ನಾಲ್ಕು ಪಥಗಳಿಗೆ ವಿಸ್ತರಿಸಲು ರೈಲ್ವೆ ಇಲಾಖೆ ಒಪ್ಪಿಗೆ ನೀಡಿದ್ದು, ಗೇಟ್ನ ಎರಡೂ ಬದಿಗಳಲ್ಲಿ ತಲಾ 200 ಮೀಟರ್ ಉದ್ದದ ರಸ್ತೆ ಅಗಲೀಕರಣಕ್ಕೆ ಮಹಾನಗರ ಪಾಲಿಕೆ ಸಿದ್ಧತೆ ನಡೆಸಿದೆ ಎಂದರು.
ರೈಲ್ವೆ ಮೇಲ್ಸೇತುವೆ ಅಗತ್ಯ:ಈ ಪ್ರದೇಶದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಶಾಶ್ವತ ಪರಿಹಾರವಾಗಿದೆ. ಈ ನಿಟ್ಟಿನಲ್ಲಿ ರೈಲ್ವೆ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸಂಬಂಧಪಟ್ಟ ರಾಜ್ಯ ಮತ್ತು ಕೇಂದ್ರ ಸರಕಾರಿ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಯೋಜನೆಯನ್ನು ತ್ವರಿತಗೊಳಿಸಬೇಕಾಗಿದೆ. ಜನತೆಯ ಬೇಡಿಕೆ ಬಗ್ಗೆ ರೈಲ್ವೆ ಇಲಾಖೆಯ ಮೈಸೂರು ವಿಭಾಗದ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ, ತಕ್ಷಣ ಕೈಗೊಳ್ಳಬಹುದಾದ ತಾತ್ಕಾಲಿಕ ಪರಿಹಾರ ಕ್ರಮಗಳ ಕುರಿತು ಚರ್ಚಿಸಿ ಕ್ರಮ ವಹಿಸುವುದಾಗಿ ಪಿ.ವಿ.ಮೋಹನ್ ಭರವಸೆ ನೀಡಿದರು.
ಪ್ರಮುಖರಾದ ಸೀತಾರಾಮ್, ಉಮಾನಾಥ್, ಮೊಹಮ್ಮದ್ ನವಾಜ್, ಡೆನ್ನಿಸ್ ಡಿಸಿಲ್ವಾ, ಟಿ.ಕೆ.ಸುಧೀರ್, ರಮಾನಂದ ಪೂಜಾರಿ, ಆಸೀಫ್ ಬೆಂಗರೆ, ನವಾಜ್ ಜೆಪ್ಪು, ನೆಲ್ಸನ್ ಮೊಂತೆರೊ, ಶಾಲಿನಿ ಪ್ರಕಾಶ್, ಮಾಧವ ಶೆಟ್ಟಿ, ಉದಯ ಬೋಳಾರ್, ಸಲೀಂ, ಶರೀಫ್, ಅಬ್ದುಲ್ ಶಫೀಕ್ ಮತ್ತಿತರರು ಇದ್ದರು.