ಸಾರಾಂಶ
- ಭಾರೀ ಪ್ರತಿಭಟನೆ । ಶ್ರೀ ಸಾಲುಮರದಮ್ಮ ದೇವಸ್ಥಾನದಿಂದ ಮಹಾತ್ಮಾಗಾಂಧಿ ವೃತ್ತದವರೆಗೆ
ಕನ್ನಡಪ್ರಭ ವಾರ್ತೆ, ತರೀಕೆರೆತರೀಕೆರೆ ಬ್ಲಾಕ್ ಕಾಂಗ್ರೆಸ್, ಅಹಿಂದ ಸಂಘಟನೆ, ಸಿದ್ದರಾಮಯ್ಯ ಅಭಿಮಾನಿಗಳು ಮತ್ತು ತರೀಕೆರೆ ಕುರುಬರ ಸಂಘ ಸಹಯೋಗದಲ್ಲಿ ಸೋಮವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಹೊರಡಿಸಿದ ಪ್ರಾಸಿಕ್ಯೂಷನ್ ಆದೇಶದ ವಿರುದ್ಧ ಶ್ರೀ ಸಾಲುಮರದಮ್ಮ ದೇವಸ್ಥಾನದಿಂದ ಮಹಾತ್ಮಾಗಾಂಧಿ ವೃತ್ತದವರೆಗೆ ಪಂಜಿನ ಮೆರವಣಿಗೆ- ಭಾರಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆ ನಂತರ ಮಹಾತ್ಮಾಗಾಂಧಿ ವೃತ್ತದ ಬಳಿ ನಡೆದ ಸಭೆಯಲ್ಲಿ ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ ದುರುದ್ದೇಶ ಮತ್ತು ದ್ದೇಷದಿಂದ ಈ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದು ಖಂಡನೀಯ. ಈಗಾಗಲೇ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ , ಮಾಜಿ ಸಚಿವ ಜನಾರ್ಧನ ರೆಡ್ಡಿ ಮತ್ತಿತರರ ವಿರುದ್ಧ ಪ್ರಕರಣಗಳು ಇದ್ದರೂ ಅವರ ಮೇಲೆ ಪ್ರಾಸಿಕ್ಯೂಷನ ನೀಡದೆ ಸಿದ್ದರಾಮಯ್ಯ ಮೇಲೆ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದರು.ನಗರ ಕಾಂಗ್ರೆಸ್ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ ಮಾತನಾಡಿ ದಕ್ಷಿಣ ಭಾರತದಲ್ಲಿ ಬಿಜೆಪಿ ನೆಲೆ ಕಳೆದುಕೊಳ್ಳುತ್ತಿದೆ. 2ನೇ ಬಾರಿ ಮುಖ್ಯಮಂತ್ರಿ ಯಾದ ಸಿದ್ದರಾಮಯ್ಯ ಜನಪ್ರಿಯತೆ ಸಹಿಸದೆ ಷಡ್ಯಂತ್ರ ಮಾಡುತ್ತಿದೆ ಇದು ಖಂಡನೀಯ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಯು.ಫಾರೂಕ್, ತರೀಕೆರೆ ಕುರುಬ ಸಮಾಜದ ಅಧ್ಯಕ್ಷ ಡಿ.ವಿ.ಪದ್ಮರಾಜು, ಅಹಿಂದ ಮುಖಂಡ ಮುರುಗೇಶಪ್ಪ, ಅಜ್ಜಂಪುರ ನಟರಾಜ್, ತಣಿಗೇಬೈಲು ರಮೇಶ್, ಪುರಸಭೆ ಸದಸ್ಯ ಟಿ.ಜಿ.ಲೋಕೇಶ್, ತಾಲೂಕು ಮಾದಿಗ ಸಮಾಜದ ಅಧ್ಯಕ್ಷ ಅಣ್ಣಯ್ಯ, ವಕೀಲ ದಿನೇಶ್, ತಾಪಂ ಮಾಜಿ ಅಧ್ಯಕ್ಷ ರವಿ ಮಾತನಾಡಿದರು.ಪುರಸಭಾ ಮಾಜಿ ಅಧ್ಯಕ್ಷ ಟಿ.ಎಸ್.ಧರ್ಮರಾಜ್, ಬೈಟು ರಮೇಶ್, ಆರ್.ಬಸವರಾಜ್, ಹೇಮಲತ ರೇವಣ್ಣ, ಪರ್ವಿನ್ ತಾಜ್, ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯಲಕ್ಷ್ಮಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಸಮೀವುಲ್ಲಾ ಷರೀಫ್, ಮುಖಂಡರಾದ ರವಿ ಕಿಶೋರ್, ಅನ್ಬು, ಜಗದೀಶ್, ಪುರಸಭೆ ನಾಮಿನಿ ಸದಸ್ಯರಾದ ಟಿ.ಡಿ.ಮಂಜುನಾಥ್, ಟಿ.ಜಿ.ಮಂಜುನಾಥ್, ಅಬ್ಬಾಸ್, ತಾಲೂಕು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಮಹಮದ್ ಇರ್ಷಾದ್, ಎಸ್.ಸಿ.ಸೆಲ್ ಅಧ್ಯಕ್ಷ ಗೌರೀಶ್, ಬಿ.ಬಿ.ರವಿಕುಮಾರ್, ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕದ ಅಧ್ಯಕ್ಷರು, ಅಹಿಂದ ಮುಖಂಡರು ಹಾಗೂ ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
19ಕೆಟಿಆರ್.ಕೆ.18ಃತರೀಕೆರೆಯಲ್ಲಿ ಬ್ಲಾಕ್ ಕಾಂಗ್ರೆಸ್, ಅಹಿಂದ ಸಂಘಟನೆ, ಸಿದ್ದರಾಮಯ್ಯ ಅಭಿಮಾನಿಗಳು ಮತ್ತು ತರೀಕೆರೆ ಕುರುಬರ ಸಂಘದ ಸಹಯೋಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿದ ಪ್ರಾಸಿಕ್ಯೂಷನ್ ಆದೇಶ ಕಂಡಿಸಿ ಪಂಜಿನ ಮೆರವಣಿಗೆ ನಡೆಯಿತು. ಶಾಸಕ ಜಿ.ಎಚ್.ಶ್ರೀನಿವಾಸ್ ಮತ್ತಿತರರು ಇದ್ದರು.