ಸಾರಾಂಶ
ಎಂಎಸ್ ಪಿ ಕಾನೂನು ಜಾರಿಗೆ ಒತ್ತಾಯಿಸಿ ಪಂಜಾಬ್- ಹರಿಯಾಣದ ಕನೂರಿ ಬಾರ್ಡರ್ ನಲ್ಲಿ ಕಳೆದ 34 ದಿನಗಳಿಂದ ನಿರಂತರ ಉಪವಾಸ ಸತ್ಯಾಗ್ರಹ
ಕನ್ನಡಪ್ರಭ ವಾರ್ತೆ ಮೈಸೂರು
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಗಾಗಿ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯೇತರ ರಾಷ್ಟ್ರೀಯ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲರ ದೆಹಲಿ ಗಡಿಯಲ್ಲಿ ಉಪವಾಸ ಸತ್ಯಾಗ್ರಹ ಹೋರಾಟ ಬೆಂಬಲಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದವರು ಮಂಗಳವಾರ ಸಂಜೆ ಪಂಜಿನ ಮೆರವಣಿಗೆ ಪ್ರತಿಭಟನೆ ಹಮ್ಮಿಕೊಂಡಿದ್ದರು.ನಗರ ಗನ್ ಹೌಸ್ ವೃತ್ತದಲ್ಲಿ ಜಮಾಯಿಸಿದ್ದ ರೈತರು ಪಂಜು ಹಿಡಿದು ಬಸವೇಶ್ವರ ವೃತ್ತ, ಸಂಸ್ಕೃತ ಪಾಠಶಾಲೆ ಮೂಲಕ ಕಾಡಾ ಕಚೇರಿ ವೃತ್ತದವರೆಗೆ ಮೆರವಣಿಗೆ ಹಮ್ಮಿಕೊಂಡಿದ್ದರು.
ಎಂಎಸ್ ಪಿ ಕಾನೂನು ಜಾರಿಗೆ ಒತ್ತಾಯಿಸಿ ಪಂಜಾಬ್- ಹರಿಯಾಣದ ಕನೂರಿ ಬಾರ್ಡರ್ ನಲ್ಲಿ ಕಳೆದ 34 ದಿನಗಳಿಂದ ನಿರಂತರ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲರ ಹೋರಾಟವನ್ನು ದೇಶದ ರೈತರು ಬೆಂಬಲಿಸುತ್ತಿದ್ದೇವೆ ಎಂದು ಅವರು ತಿಳಿಸಿದರು.ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಪದಾಧಿಕಾರಿಗಳಾದ ಕಿರಗಸೂರು ಶಂಕರ್, ಮಾರ್ಬಳ್ಳಿ ನೀಲಕಂಠಪ, ಪರಶಿವಮೂರ್ತಿ, ಲಕ್ಷ್ಮೀಪುರ ವೆಂಕಟೇಶ್, ಕುರುಬೂರು ಸಿದ್ದೇಶ್, ವಾಜಮಂಗಲ ಮಾದೇವು, ಕಮಲಮ್ಮ, ವರಕೂಡು ನಾಗೇಶ್, ಹಂಪಾಪರ ರಾಜೇಶ್, ಧನಗಳ್ಳಿ ಕೆಂಡಗಣ್ಣಸ್ವಾಮಿ, ಕುರುಬೂರು ಪ್ರದೀಪ್, ಕೆ.ಜಿ. ಗುರುಸ್ವಾಮಿ, ಕೂಡನಹಳ್ಳಿ ಪ್ರಕಾಶ್, ಬನ್ನಳ್ಳಿಹುಂಡಿ ರಾಜೇಂದ್ರ, ವಾಜಮಂಗಲ ನಾಗೇಂದ್ರ, ಮಹೇಶ್, ಕೋಟೆ ಸುನಿಲ್ ಮೊದಲಾದವರು ಇದ್ದರು.