ಕಾಗದ ಕಾರ್ಖಾನೆಯಿಂದ ರೋಟರಿ ಶಾಲೆಗೆ ₹19 ಲಕ್ಷದ ಕೊಠಡಿ ಕೊಡುಗೆ

| Published : Jul 01 2025, 12:47 AM IST

ಕಾಗದ ಕಾರ್ಖಾನೆಯಿಂದ ರೋಟರಿ ಶಾಲೆಗೆ ₹19 ಲಕ್ಷದ ಕೊಠಡಿ ಕೊಡುಗೆ
Share this Article
  • FB
  • TW
  • Linkdin
  • Email

ಸಾರಾಂಶ

ಶಿಕ್ಷಣ ಕ್ಷೇತ್ರದ ಬಲವರ್ಧನೆಗೆ ನಾವು ನೀವೆಲ್ಲ ಸೇರಿ ಕೆಲಸ ಮಾಡಬೇಕು.

ದಾಂಡೇಲಿ: ಶೈಕ್ಷಣಿಕ ಕ್ಷೇತ್ರ ಸದೃಢವಾಗಿ ಬೆಳೆದರೆ ಮಾತ್ರ ದೇಶದ ಪ್ರಗತಿ ಸಾಧ್ಯ. ಈ ನಿಟ್ಟಿನಲ್ಲಿ ಶಿಕ್ಷಣ ಕ್ಷೇತ್ರದ ಬಲವರ್ಧನೆಗೆ ನಾವು ನೀವೆಲ್ಲ ಸೇರಿ ಕೆಲಸ ಮಾಡಬೇಕು. ಶಿಕ್ಷಣವಂತ ಸಮಾಜ ನಿರ್ಮಾನದಿಂದ ಮಾತ್ರ ರಾಷ್ಟ್ರ ಅಭಿವೃದ್ಧಿ ಸಾಧ್ಯ ಎಂದು ವೆಸ್ಟ್ ಕೊಸ್ಟ್ ಕಾಗದ ಕಾರ್ಖಾನೆಯ ಕಾರ್ಯ ನಿರ್ವಾಹಕ ನಿರ್ದೇಶಕ ರಾಜೇಂದ್ರ ಜೈನ ಹೆಳಿದರು.ಅವರು ನಗರದ ರೋಟರಿ ಆಂಗ್ಲ ಮಾಧ್ಯಮ ಶಾಲೆಗೆ ವೆಸ್ಟ್ ಕೊಸ್ಟ್ ಕಾಗದ ಕಾರ್ಖಾನೆಯ ಸಿಎಸ್‌ಆರ್ ಯೋಜನೆಯಡಿ ಸುಮಾರು ₹೧೯.೫೦ ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಕೊಠಡಿ ಉದ್ಘಾಟಿಸಿ ಮಾತನಾಡುತ್ತಿದ್ದರು.

ರೋಟರಿ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸೇವೆ ಶ್ಲಾಘನೀಯವಾಗಿದೆ. ಇತರ ಖಾಸಗಿ ಶಿಕ್ಷಣ ಸಂಸ್ಥೆಗಳಿಗಿಂತ ಕಡಿಮೆ ಪ್ರಮಾಣದಲ್ಲಿ ಶುಲ್ಕವನ್ನು ಪಡೆದು ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಎಲ್ಲರ ಗಮನ ಸೆಳೆದಿದೆ. ಸಾಮಾಜಿಕ ಬದ್ಧತೆ ಮತ್ತು ಶೈಕ್ಷಣಿಕ ಕಾಳಜಿಯನ್ನು ಹೊಂದಿ ರೋಟರಿ ಶಿಕ್ಷಣ ಸಂಸ್ಥೆ ನೀಡುತ್ತಿರುವ ಸೇವೆಗೆ ಕಾಗದ ಕಾರ್ಖಾನೆಯು ಸದಾ ಸಹಕಾರ ನೀಡುತ್ತದೆ ಎಂದರು.

ರೋಟರಿ ಕ್ಲಬ್ ಮತ್ತು ರೊಟರಿ ಶಿಕ್ಷಣ ಸಂಸ್ಥೆಗಳ ನಿಸ್ವಾರ್ಥ ಸೇವೆ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಸಹಕಾರಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರೋಟರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಮೋಹನ ಪಾಟೀಲ ವೆಸ್ಟ್ ಕೊಸ್ಟ್ ಕಾಗದ ಕಾರ್ಖಾನೆಯು ರೋಟರಿ ಶಿಕ್ಷಣ ಸಂಸ್ಥೆಗೆ ನೀಡುತ್ತಿರುವ ನೆರವು ಶ್ಲಾಘನೀಯವಾಗಿದೆ. ಪ್ರತಿ ಹಂತದಲ್ಲಿ ಕಾಗದ ಕಾರ್ಖಾನೆ ನಮ್ಮ ಶಿಕ್ಷಣ ಸಂಸ್ಥೆಗೆ ನೆರವು ನೀಡುವ ಮೂಲಕ ಸಂಸ್ಥೆಯ ಬೆಳವಣಿಗೆಗೆ ಕೊಡುಗೆ ನೀಡುತ್ತಿದೆ ಎಂದರು.

ರೋಟರಿ ಕ್ಲಬ್‌ನ ಅಧ್ಯಕ್ಷ ರಾಹುಲ್‌ ಬಾವಾಜಿ, ಪ್ರಧಾನ ಕಾರ್ಯದರ್ಶಿ ಆಶಿತೋಷಕುಮಾರ ರಾಯ, ಖಜಾಂಚಿ ಮಿಥುನ ನಾಯಕ ಉಪಸ್ಥಿತರಿದ್ದರು.

ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಕೊಠಡಿಯನ್ನು ನಿರ್ಮಿಸಿಕೊಟ್ಟಿರುವ ವೆಸ್ಟ್ ಕೊಸ್ಟ್ ಕಾಗದ ಕಾರ್ಖಾನೆಯ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಂದ್ರ ಜೈನರನ್ನು ರೋಟರಿ ಶಿಕ್ಷಣ ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು. ರೋಟರಿ ಕ್ಲಬ್‌ನ ಪ್ರಮುಖರಾದ ಎಸ್.ಸೋಮಕುಮಾರ ನಿರೂಪಿಸಿದ ಕಾರ್ಯಕ್ರಮಕ್ಕೆ ಡಾ.ಮೋಹನ ಪಾಟೀಲ ಸ್ವಾಗತಿಸಿದರು. ಮಿಥುನ ನಾಯಕ ವಂದಿಸಿದರು.