ಸಾರಾಂಶ
ರಾಜ್ಯಕ್ಕೆ ಚುನಾವಣಾ ಪ್ರಚಾರಕ್ಕೆ ಬರುವ ಪ್ರಧಾನಿ ಮೋದಿ ರೈತರ ಬರ ಪರಿಹಾರ, ರೈತರ ಸಂಕಷ್ಟ ಹಾಗೂ ನೀರಿನ ವಿಷಯದ ಬಗ್ಗೆ ಚಕಾರ ಎತ್ತದೆ ಮೌನ ವಹಿಸಿರುವುದು ಸರಿಯಲ್ಲ. ರೈತರು ನೀರು ಇಲ್ಲದೆ, ಮಳೆಯೂ ಇಲ್ಲದೆ ಬೆಳೆ ನಷ್ಟದಿಂದ ತತ್ತರಿಸಿ ಹೋಗಿದ್ದಾರೆ. ಬೆಳೆ ಸಮೀಕ್ಷೆ ನಡೆಸಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಕಳುಹಿಸಿರುವ ವರದಿಯಂತೆ ಕೇಂದ್ರ ಸರ್ಕಾರ ಕೂಡಲೇ ಹಣ ಬಿಡುಗಡೆ ಮಾಡುವ ಮೂಲಕ ರೈತರ ನೋವಿಗೆ ಸ್ಪಂದಿಸಬೇಕು.
ಕನ್ನಡಪ್ರಭ ವಾರ್ತೆ ಮಂಡ್ಯ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಮ್ಮ ಪ್ರತಿಷ್ಠೆ, ತಾತ್ಸಾರ ಬದಿಗೊತ್ತಿ ರೈತರ ಖಾತೆಗೆ ಬರ ಪರಿಹಾರ ಹಣ ಜಮೆ ಮಾಡಬೇಕು ಎಂದು ರೈತ ಸಂಘದ ಮುಖಂಡ ಕಿರಂಗೂರು ಪಾಪು ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಶೀಘ್ರಬೆಳೆ ಒಣಗಿ ನಷ್ಟವಾಗಿರುವ ಬಗ್ಗೆ ವರದಿಯಂತೆ ಬರ ಪರಿಹಾರ ರೈತರ ಖಾತೆಗೆ ಜಮೆ ಮಾಡಬೇಕು. ಕೇಂದ್ರ ಸರ್ಕಾರ ಬರಪರಿಹಾರ ನೀಡಿಕೆಯಲ್ಲಿ ತಾರತಮ್ಯ ನೀತಿ ಅನುಸುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.
ಬೆಳೆ ಸಮೀಕ್ಷೆ ನಡೆಸಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಕಳುಹಿಸಿರುವ ವರದಿಯಂತೆ ಕೇಂದ್ರ ಸರ್ಕಾರ ಕೂಡಲೇ ಹಣ ಬಿಡುಗಡೆ ಮಾಡುವ ಮೂಲಕ ರೈತರ ನೋವಿಗೆ ಸ್ಪಂದಿಸಬೇಕು ಎಂದು ಪ್ರಧಾನಿ ಮೋದಿ ಅವರನ್ನು ಆಗ್ರಹಿಸಿದರು.ರಾಜ್ಯಕ್ಕೆ ಚುನಾವಣಾ ಪ್ರಚಾರಕ್ಕೆ ಬರುವ ಪ್ರಧಾನಿ ಮೋದಿ ರೈತರ ಬರ ಪರಿಹಾರ, ರೈತರ ಸಂಕಷ್ಟ ಹಾಗೂ ನೀರಿನ ವಿಷಯದ ಬಗ್ಗೆ ಚಕಾರ ಎತ್ತದೆ ಮೌನ ವಹಿಸಿರುವುದು ಸರಿಯಲ್ಲ. ರೈತರು ನೀರು ಇಲ್ಲದೆ, ಮಳೆಯೂ ಇಲ್ಲದೆ ಬೆಳೆ ನಷ್ಟದಿಂದ ತತ್ತರಿಸಿ ಹೋಗಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಸ್ತುತ ರೈತರ ಬದುಕು ಶೋಚನೀಯವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಮ್ಮ ತಮ್ಮ ಪ್ರತಿಷ್ಠೆ, ತಾತ್ಸಾರ ಬದಿಗೊತ್ತಿ ದೇಶಕ್ಕೆ ಅನ್ನ ನೀಡುವ ರೈತರ ಸಂಕಷ್ಟಕ್ಕೆ ಧಾವಿಸಬೇಕು. ಕೂಡಲೇ ಬಾಕಿ ಉಳಿದಿರುವ ಬರ ಪರಿಹಾರದ ಮೊತ್ತವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.ರೈತರು ಸಾಲ ಮಾಡಿ, ಚಿನ್ನಾಭರಣ ಹಣವಿಟ್ಟು, ಖಾಸಗಿ ಸಾಲ, ಬ್ಯಾಂಕಿನ ಸಾಲಕ್ಕೆ ಕೈವೊಡ್ಡಿ ಬೆಳೆ ಬೆಳೆದರೂ ಬೆಳೆಯೂ ಕೈಗೆ ಸಿಲುಕಿದ್ದಾರೆ. ಕೇಂದ್ರ ಬಿಡುಗಡೆ ಮಾಡಿರುವ ಅಲ್ಪಸ್ವಲ್ಪ ಬರ ಪರಿಹಾರದ ಹಣವನ್ನು ರಾಜ್ಯ ಸರ್ಕಾರ ರೈತರ ಖಾತೆ ಜಮೆ ಮಾಡಬೇಕು ಎಂದು ಪಾಪು ಆಗ್ರಹಿಸಿದ್ದಾರೆ.