ಸಾರಾಂಶ
ಪುರಾಣ ಪ್ರಸಿದ್ಧ ಮಹಾಬಲೇಶ್ವರ ಮಂದಿರಕ್ಕೆ ಗೃಹಸಚಿವ ಡಾ.ಜಿ. ಪರಮೇಶ್ವರ ಬುಧವಾರ ಭೇಟಿ ನೀಡಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದರು.
ಗೋಕರ್ಣ: ಪುರಾಣ ಪ್ರಸಿದ್ಧ ಮಹಾಬಲೇಶ್ವರ ಮಂದಿರಕ್ಕೆ ಗೃಹಸಚಿವ ಡಾ.ಜಿ. ಪರಮೇಶ್ವರ ಬುಧವಾರ ಭೇಟಿ ನೀಡಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದರು.
ಕ್ಷೀರಾಭೀಷೇಕ, ಪಂಚಾಮೃತ ರುದ್ರಾಭೀಷೇಕ ಸೇರಿದಂತೆ ವಿವಿಧ ಪೂಜೆ ನೆರವೇರಿಸಿದರು. ಮಂದಿರದ ಅರ್ಚಕ ಅಮೃತೇಶ ಹಿರೇ ಪೂಜಾ ಕೈಂಕರ್ಯ ನೆರವೇರಸಿದರು. ಮಂದಿರದ ಮೇಲುಸ್ತುವಾರಿ ಸಮಿತಿ ಸದಸ್ಯರಾದ ಸುಬ್ರಹ್ಮಣ್ಯ ಅಡಿ, ಅರ್ಚಕರಾದ ರಾಜಗೋಪಲ ಅಡಿ ಗುರೂಜಿ, ದತ್ತಾತ್ರೇಯ ಹಿರೇಗಂಗೆ, ಬಾಲಕೃಷ್ಣ ಜಂಭೆ, ಮುರಳಿ ಪ್ರಸಾದ ಮತ್ತಿತರ ಅರ್ಚಕ ವೃಂದದವರು ನಿರ್ವಹಿಸಿದರು. ನಂತರ ಮಂದಿರದಿಂದ ಪ್ರಸಾದ ನೀಡಿ ಗೌರವಿಸಲಾಯಿತು.ಇದಕ್ಕೂ ಮೊದಲು ಮಹಾಗಣಪತಿ ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಇವೆರಡು ದೇವಾಲಯದ ಭೇಟಿ ಬಳಿಕ ತಾಮ್ರಗೌರಿ ಮಂದಿರಕ್ಕೆ ತೆರಳಿ ದೇವಿ ದರ್ಶನ ಪಡೆದರು.
ಈ ವೇಳೆ ಸಚಿವ ಮಂಕಾಳ ವೈದ್ಯ, ಕುಮಟಾ ಉಪವಿಭಾಗಾಧಿಕಾರಿ ಕಲ್ಯಾಣಿ ಕಾಂಬಳೆ, ತಹಶೀಲ್ದಾರ ಶ್ರೀಕೃಷ್ಣ ಕಾಮಕರ್, ಮಂದಿರದ ಮೇಲುಸ್ತುವಾರಿ ಸಮಿತಿ ಸದಸ್ಯರಾದ ಮಹೇಶ ಹಿರೇಗಂಗೆ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಿವೇದಿತ ಆಳ್ವಾ, ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸಾಯಿ ಗಾಂವಕರ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಮೋದ ಸಿರ್ಸಕರ, ತಾಲೂಕು ಅಧ್ಯಕ್ಷ ಭುವನ ಭಾಗ್ವತ್, ಕೆ.ಪಿ.ಸಿ.ಸಿ. ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ, ಜಿಪಂ ಮಾಜಿ ಸದಸ್ಯ ಪ್ರದೀಪ ನಾಯಕ, ಸ್ಥಳೀಯ ಪ್ರಮುಖರಾದ ನಾಗರಾಜ ಹಿತ್ತಲಮಕ್ಕಿ ಅಣ್ಣಪ್ಪ ನಾಯಕ ಮೊಗಟಾ ಉಪಸ್ಥಿತರಿದ್ದರು.