ಸಾರಾಂಶ
ಸುರಪುರ ತಾಲೂಕಿನ ಪರಸನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿ
ಸೂಕ್ತ ಕಾನೂನು ಕ್ರಮಕ್ಕೆ ಪುರಸಭೆ ಸದಸ್ಯೆ ಸೂರಮ್ಮ ಆಗ್ರಹಕನ್ನಡಪ್ರಭ ವಾರ್ತೆ ಸುರಪುರ
ತಾಲೂಕಿನ ಕೆಂಭಾವಿ ಪಟ್ಟಣ ಪುರಸಭೆಯ ವ್ಯಾಪ್ತಿಯ ಪರಸನಹಳ್ಳಿ ಗ್ರಾಮದಲ್ಲಿ ನಡೆಸುತ್ತಿರುವ ಸಿಸಿ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಕೂಡಲೇ ಕಾಮಗಾರಿ ನಿಲ್ಲಿಸಬೇಕು. ಸಂಬಂಧಟ್ಟವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪುರಸಭೆ ಸದಸ್ಯೆ ಸೂರಮ್ಮ ಮುದೆಪ್ಪ ಮಸೂತಿ ಆಗ್ರಹಿಸಿದ್ದಾರೆ.ಈ ಕುರಿತು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಅವರು, ಕೆಕೆಆರ್‌ಡಿಬಿ ಯೋಜನೆಯಲ್ಲಿ ಸುಮಾರು 50 ಲಕ್ಷ ರು. ವೆಚ್ಚದಲ್ಲಿ ಪುರಸಭೆ ವತಿಯಿಂದ ಕಾಮಗಾರಿ ನಡೆಯುತ್ತಿದ್ದು, ಇದನ್ನು ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗಿದೆ. ಆದರೆ, ರಸ್ತೆ ನಿರ್ಮಾಣದಲ್ಲಿ ಹಲವು ಲೋಪದೋಷಗಳು ಕಂಡುಬಂದಿದ್ದು, ರಸ್ತೆಗೆ ನಿಯಮಾನುಸಾರ ಸಾಮಗ್ರಿ ಬಳಸದೆ ರಸ್ತೆ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.
ಇದು ಗ್ರಾಮದ ಪ್ರಮುಖ ದೇವಸ್ಥಾನಕ್ಕೆ ಹೋಗುವ ರಹದಾರಿಯಾಗಿದ್ದು, ಕೂಡಲೆ ಈ ಬಗ್ಗೆ ತನಿಖೆ ನಡೆಸಿ ನಿಯಮಾನುಸಾರ ಕಾಮಗಾರಿ ಮಾಡದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಉತ್ತಮ ಗುಣಮಟ್ಟದ ಸಿಸಿ ರಸ್ತೆ ನಿರ್ಮಾಣ ಮಡಬೇಕೆಂದು ಅವರು ಮನವಿ ಮಾಡಿದ್ದಾರೆ.