ಸಾರಾಂಶ
ಬಾದಾಮಿ: ತಾಲೂಕಿನ ಜಾಲಿಹಾಳ ಗ್ರಾಮದ ನೂತನ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ತಾಯಂದಿರ ಸಭೆಯಲ್ಲಿ ನಡೆಯಿತು. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನ್ಯಾಸಕ ಜಿ.ಎಚ್. ಮುಂಡೇವಾಡಿ ಮಾತನಾಡಿ, ಮಕ್ಕಳ ಕಲಿಕೆಯಲ್ಲಿ ಪಾಲಕರ ಪಾತ್ರ ಮಹತ್ತರವಾಗಿದ್ದು, ಶಾಲೆಯಿಂದ ಮಕ್ಕಳು ಸಂಜೆ ಮನೆಗೆ ಬಂದ ನಂತರ ಎಷ್ಟು ಕಲಿತಿದ್ದಾರೆ ಎಂದು ಪರಿಶೀಲನೆ ಮಾಡಬೇಕು ಎಂದರು.
ಕನ್ನಡಪ್ರಭ ವಾರ್ತೆ ಬಾದಾಮಿ
ಮಕ್ಕಳ ಕಲಿಕೆಯಲ್ಲಿ ಪಾಲಕರ ಪಾತ್ರ ಮಹತ್ತರವಾಗಿದ್ದು, ಶಾಲೆಯಿಂದ ಮಕ್ಕಳು ಸಂಜೆ ಮನೆಗೆ ಬಂದ ನಂತರ ಎಷ್ಟು ಕಲಿತಿದ್ದಾರೆ ಎಂದು ಪರಿಶೀಲನೆ ಮಾಡಬೇಕು ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನ್ಯಾಸಕ ಜಿ.ಎಚ್. ಮುಂಡೇವಾಡಿ ತಾಯಂದಿಯರಿಗೆ ಸಲಹೆ ನೀಡಿದರು.ತಾಲೂಕಿನ ಜಾಲಿಹಾಳ ಗ್ರಾಮದ ನೂತನ ಪ್ರೌಢಶಾಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಹಮ್ಮಿಕೊಂಡಿದ್ದ ತಾಯಂದಿರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ವಿಜ್ಞಾನ ಶಿಕ್ಷಕ ಎ.ಎ.ಮುಲ್ಲಾ ಅಧ್ಯಕ್ಷತೆ ವಹಿಸಿದ್ದರು. ಆರ್.ಎಸ್. ರಾಠೋಡ ಸ್ವಾಗತಿಸಿದರು. ಶಿಕ್ಷಕಿ ಎಸ್.ಎಂ.ಮಾಗಿ ಕಾರ್ಯಕ್ರಮವನ್ನು ನಿರೂಪಿಸಿದರು. ಪಿ.ಎಸ್. ಬಳಗಾನೂರ ವಂದಿಸಿದರು.