ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೋಷಕರ ಸಹಕಾರ ಮುಖ್ಯ

| Published : Jul 27 2024, 12:52 AM IST

ಸಾರಾಂಶ

parent, children, education, important, progress

-ಸರ್ಕಾರಿ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡೆದ ಪೋಷಕರ ಸಭೆಯಲ್ಲಿ ಬಿಇಓ ಸಿಎಂ ತಿಪ್ಪೇಸ್ವಾಮಿ

-----

ಕನ್ನಡಪ್ರಭ ವಾರ್ತೆ ಹಿರಿಯೂರು

ಮಕ್ಕಳ ಶೈಕ್ಷಣಿಕ ಸಾಧನೆಗೆ ಪೋಷಕರ ಸಹಕಾರ ಅತ್ಯಗತ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿಎಂ ತಿಪ್ಪೇಸ್ವಾಮಿ ಹೇಳಿದರು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೋಷಕರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ವಿದ್ಯಾರ್ಥಿಗಳ ಸಮಗ್ರ ಕಲಿಕೆಯ ಕೆಲಸವನ್ನು ಕೇವಲ ಶಿಕ್ಷಕರು ಮಾತ್ರ ಪೂರ್ಣ ಪ್ರಮಾಣದಲ್ಲಿ ಮಾಡಲು ಸಾಧ್ಯವಾಗುವುದಿಲ್ಲ. ಶಿಕ್ಷಕರಷ್ಟೇ ಮಕ್ಕಳ ಕಲಿಕೆಯಲ್ಲಿ ಪೋಷಕರ ಪಾತ್ರವೂ ಮುಖ್ಯ. ವಿದ್ಯಾರ್ಥಿಯ ಓದುವ ಸಾಮರ್ಥ್ಯವನ್ನು ಗುರುತಿಸಿ, ಅದನ್ನು ಹೆಚ್ಚಿಸುವ ಜವಾಬ್ದಾರಿಯನ್ನು ಶಿಕ್ಷಕರ ಜೊತೆಗೆ ಪೋಷಕರು ಹೊರಬೇಕಾಗುತ್ತದೆ. ಮಕ್ಕಳನ್ನು ಶಾಲೆಗೆ ಸೇರಿಸಿದರೆ ನಮ್ಮ ಜವಾಬ್ದಾರಿ ಮುಗಿಯಿತು ಎಂದು ಯಾವ ಪೋಷಕರು ಭಾವಿಸಬಾರದು. ತಾಲೂಕಿನ ಎಲ್ಲಾ ಪ್ರೌಢಶಾಲೆಗಳಲ್ಲೂ ಈ ದಿನ ಏಕಕಾಲಕ್ಕೆ ಪೋಷಕರ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, 10ನೇ ತರಗತಿಯ 3700 ವಿದ್ಯಾರ್ಥಿಗಳ ಪೋಷಕರಿಗೆ ಆಯಾ ಶಾಲೆಗಳಲ್ಲಿ ನಡೆವ ಸಭೆಯಲ್ಲಿ ಭಾಗವಹಿಸಲು ಆಹ್ವಾನ ನೀಡಲಾಗಿತ್ತು. ಸಭೆಯಲ್ಲಿ ಪೋಷಕರ ಸಮ್ಮುಖದಲ್ಲಿ ವಿದ್ಯಾರ್ಥಿಗಳ ಕಲಿಕೆ ಪ್ರದರ್ಶನ, ಬೇರೆ ಬೇರೆ ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ಮಾಡಿರುವ ಸಾಧನೆಗಳು ಮತ್ತು ಶೈಕ್ಷಣಿಕವಾಗಿ ವಿದ್ಯಾರ್ಥಿಗಳ ಪ್ರಗತಿಯ ಬಗ್ಗೆ ಪೋಷಕರಿಗೆ ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳೊಂದಿಗೆ ಮತ್ತು ಪ್ರಗತಿ ಪತ್ರದೊಂದಿಗೆ ಶಿಕ್ಷಕರು ಪ್ರತಿಯೊಬ್ಬ ಪೋಷಕರಿಗೂ ಅಗತ್ಯ ಸಲಹೆಗಳನ್ನು ನೀಡಲಾಗಿದೆ. ಉತ್ತಮ ಫಲಿತಾಂಶ ಮತ್ತು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶೈಕ್ಷಣಿಕ ಪ್ರಗತಿಗಾಗಿ ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪೋಷಕರು ಸಹ ಮಕ್ಕಳ ಓದುವ ಆಸಕ್ತಿ ಹೆಚ್ಚಿಸುವಲ್ಲಿ ಸಹಕಾರ ನೀಡಬೇಕು ಎಂದರು. ಎಸ್ ಡಿಎಂಸಿ ಅಧ್ಯಕ್ಷ ಹನುಮಂತಪ್ಪ, ಉಪ ಪ್ರಾಂಶುಪಾಲ ರಾಮಚಂದ್ರಪ್ಪ ಹಾಗೂ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಪೋಷಕರು ಹಾಜರಿದ್ದರು.-----

ಫೋಟೊ: ಚಿತ್ರ 1,2

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೋಷಕರ ಸಭೆಯನ್ನು ಉದ್ದೇಶಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿಎಂ ತಿಪ್ಪೇಸ್ವಾಮಿ ಮಾತನಾಡಿದರು.