ಸಾರಾಂಶ
ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದರಲ್ಲಿ ವಿಫಲವಾಗುತ್ತಿರುವುದು ಕಳವಳದ ಸಂಗತಿ ಎಂದು ನಗರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಎನ್, ಜೆ ಲತಾ ಹೇಳಿದರು. ಅರಸೀಕೆರೆ ಆದಿಚುಂಚನಗಿರಿ ಪ್ರಾಥಮಿಕ ಆಂಗ್ಲ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟದ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅರಸೀಕೆರೆ: ಅಂಕಪಟ್ಟಿಯಲ್ಲಿ ತಮ್ಮ ಮಕ್ಕಳು ಹೆಚ್ಚು ಅಂಕ ಪಡೆಯಬೇಕೆಂದು ಬಯಸುವ ಪೋಷಕರು ತಮ್ಮ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದರಲ್ಲಿ ವಿಫಲವಾಗುತ್ತಿರುವುದು ಕಳವಳದ ಸಂಗತಿ ಎಂದು ನಗರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಎನ್, ಜೆ ಲತಾ ವಿಷಾದ ವ್ಯಕ್ತಪಡಿಸಿದರು.
ನಗರದ ಆದಿಚುಂಚನಗಿರಿ ಪ್ರಾಥಮಿಕ ಆಂಗ್ಲ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟದ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಮಕ್ಕಳ ವಿದ್ಯಾಭ್ಯಾಸದ ಜತೆಗೆ ಕ್ರೀಡಾಕೂಟ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಕ್ಕಳು ಆಸಕ್ತಿ ಬೆಳೆಸಿಕೊಳ್ಳುವಂತೆ ಪ್ರೇರೇಪಿಸಿ ಭವಿಷ್ಯದಲ್ಲಿ ಅವರು ಈ ಕ್ಷೇತ್ರದಲ್ಲಿ ಸಾಧನೆ ಮಾಡದಿದ್ದರೂ ದೈನಂದಿನ ಒತ್ತಡದಿಂದ ನಿವಾರಣೆ ಕಂಡುಕೊಳ್ಳಲು ಸಹಕಾರಿಯಾಗಲಿದೆ ಎಂದು ಪೋಷಕರಿಗೆ ಸಲಹೆ ನೀಡಿದರು.ವಿದೇಶಿಗರು ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಈಜು ಸೇರಿದಂತೆ ಆಟೋ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಮನಸ್ಥಿತಿಯನ್ನು ಬೆಳೆಸುತ್ತಾರೆ. ಹಾಗಾಗಿ ವಿದೇಶಿಗರು ಕ್ರೀಡಾ ಕ್ಷೇತ್ರದಲ್ಲಿ ಗಮನಹರಿಸಿ ಸಾಧನೆ ಮಾಡುತ್ತಿದ್ದಾರೆ. ಅದೇ ರೀತಿಯ ವಾತಾವರಣವನ್ನು ನಗರದ ಆದಿಚುಂಚನಗಿರಿ ಶಾಲೆಯಲ್ಲಿ ಕಾಣುತ್ತಿರುವುದಕ್ಕೆ ಸಂತಸವಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಲೆಯ ಮುಖ್ಯ ಶಿಕ್ಷಕಿ ಜ್ಞಾನೇಶ್ವರಿ ಮಾತಾನಾಡಿ, ಪಠ್ಯಪುಸ್ತಕದ ಶಿಕ್ಷಣದ ಕಲಿಕೆಗೆ ಮಕ್ಕಳಿಗೆ ನೀಡುವ ಆದ್ಯತೆಯಂತೆ ಕಲೆ ಸಾಹಿತ್ಯ ಆಟೋಟಗಳ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ, ವಿಜ್ಞಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಆಸಕ್ತಿ ಬಾಲ್ಯದಿಂದಲೇ ಮಕ್ಕಳಲ್ಲಿ ಬೆಳೆಸುವ ಜವಾಬ್ದಾರಿ ಅಧ್ಯಾಪಕ ವೃಂದ, ಪೋಷಕರ ಜವಾಬ್ದಾರಿಯಾಗಿದೆ. ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದರೆ ಪ್ರತಿಯೊಂದು ಮಗುವು ಸಮಾಜಕ್ಕೆ ಆಸ್ತಿಯಾಗಿ ರೂಪುಗೊಳ್ಳುತ್ತದೆ ಎಂದು ಕಿವಿಮಾತು ಹೇಳಿದರು.ನೇತ್ರತಜ್ಞ ಡಾ. ಬಿ.ವಿ. ಪ್ರವೀಣ್ ಚಂದ್ರ ಮಾತನಾಡಿದರು. ಸಮಾರಂಭದಲ್ಲಿ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ನಗರದ ಆದಿಚುಂಚನಗಿರಿ ಪ್ರಾಥಮಿಕ ಆಂಗ್ಲ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟದ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಗರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಎನ್, ಜೆ ಲತಾ ಮಾತನಾಡಿದರು.