ಸಾರಾಂಶ
ಕನ್ನಡಪ್ರಭ ವಾರ್ತೆ ಸವದತ್ತಿ
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದೊಂದಿಗೆ ಮಕ್ಕಳ ಸರ್ವತೋಮುಖ ಬೆಳವಣಿಗೆಗಾಗಿ ಕಲಿಕಾ ಸ್ನೇಹಿ ವಾತಾವರಣವನ್ನು ನಿರ್ಮಿಸಿ ಮಕ್ಕಳ ಸದೃಢತೆಯ ಬೆಳವಣಿಗೆಗೆ ಉತ್ತಮವಾದ ಪೌಷ್ಟಿಕ ಆಹಾರವನ್ನು ಕೊಡಮಾಡಲಾಗುತ್ತಿದ್ದು, ಪಾಲಕರು ತಮ್ಮ ಮಕ್ಕಳ ಭವಿಷ್ಯದತ್ತ ಗಮನ ಹರಿಸಬೇಕು ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.ಪಟ್ಟಣದ ಗುರ್ಲಹೊಸೂರಿನ ಶಾಸಕರ ಮಾದರಿ ಶಾಲೆಯಲ್ಲಿ ತಾಲೂಕು ಪಂಚಾಯತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ಯೋಜನೆ ವಾರದ 6 ದಿನ ಮೊಟ್ಟೆ, ಬಾಳೆಹಣ್ಣು, ಹಾಲು ವಿತರಣೆಯಂತಹ ಎಲ್ಲ ಯೋಜನೆಗಳು ಸರ್ಕಾರಿ ಶಾಲೆಗಳಲ್ಲಿ ನೀಡಲಾಗುತ್ತಿದ್ದು, ನಿಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಿ ಕಲಿಕೆಯನ್ನು ಪೋಷಿಸಬೇಕು ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿವದರೊಂದಿಗೆ ಮಕ್ಕಳಿಗೆ ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಸ್ಕಾಲರಶಿಪ್, ಶೂ ಮತ್ತು ಸಾಕ್ಸ್ ಮುಂತಾದ ಉಚಿತ ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದೆ ಎಂದರು.ಪಿ.ಎಂ ಪೋಷಣೆ ಯೋಜನೆಯಡಿಯಲ್ಲಿ ಪ್ರತಿದಿನ ಸರ್ಕಾರಿ ಶಾಲೆಮಕ್ಕಳಿಗೆ ಬಿಸಿಯೂಟವನ್ನು ನೀಡಲಾಗತ್ತಿದ್ದು, ಅಜೀಂ ಪ್ರೇಮ್ ಜೀ ಫೌಂಡೇಶನ್ ಸಹಯೋಗದೊಂದಿಗೆ ಕರ್ನಾಟಕ ಸರ್ಕಾರ ವಾರದ ಆರುದಿನಗಳಿಗೆ ಮೊಟ್ಟೆ ಮತ್ತು ಬಾಳೆಹಣ್ಣು ಪ್ರತಿಯೊಂದು ಮಗುವಿಗು ನೀಡುತ್ತಿದೆ ಎಂದರು.ಎ.ಪಿ.ಎಂ.ಸಿ ಅಧ್ಯಕ್ಷ ಚಂದ್ರು ಜಂಬರಿ ಹಾಗೂ ತಾಪಂ ಇಒ ಆನಂದ ಬಡಕುಂದ್ರಿ ಮಾತನಾಡಿ, ಸವದತ್ತಿ ತಾಲೂಕಿನಲ್ಲಿ ಪ್ರತಿನಿತ್ಯ ೪೦ ರಿಂದ ೪೫ ಸಾವಿರ ವಿದ್ಯಾರ್ಥಿಗಳು ಹಾಲು ಬಿಸಿಯೂಟ ಹಾಗೂ ಪೂರಕ ಪೌಷ್ಟಿಕಾಂಶದ ಫಲಾನುಭವಿಗಳಾಗಿದ್ದಾರೆ. ಮಕ್ಕಳ ಅಪೌಷ್ಟಿಕತೆ ಮತ್ತು ರಕ್ತಹಿನತೆ ನಿವಾರಿಸಲು ಪ್ರತಿದಿನ ಮೊಟ್ಟೆಯನ್ನು ಕಡ್ಡಾಯವಾಗಿ ಸೇವಿಸಲು ತಿಳಿಸಿದರು.ಮೈತ್ರಾದೇವಿ ವಸ್ತ್ರದ, ಗಿರೀಶ ಮುನವಳ್ಳಿ, ಶಂಕರ ಇಜಂತಕರ ಇತರರು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))