ಶಾಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಪೋಷಕರು, ಸ್ಥಳೀಯರು ಕೂಡ ಕೈಜೋಡಿಸಬೇಕು ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ ಪಿ ಶಶಿಧರ್ ಕರೆ ನೀಡಿದರು. ಅವರು ಕುಶಾಲನಗರ ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಪೋಷಕರ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕುಶಾಲನಗರ : ಶಾಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಪೋಷಕರು, ಸ್ಥಳೀಯರು ಕೂಡ ಕೈಜೋಡಿಸಬೇಕು ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ ಪಿ ಶಶಿಧರ್ ಕರೆ ನೀಡಿದರು. ಅವರು ಕುಶಾಲನಗರ ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಪೋಷಕರ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಾಲೆಯ ಉಪ ಪ್ರಾಂಶುಪಾಲರಾದ ನಾಗರತ್ನ ಎಸ್ ಜಿ ಅವರು ಮಾತನಾಡಿ ವಿದ್ಯಾರ್ಥಿಗಳು ಶಾಲೆಯಲ್ಲಿ ಶಿಕ್ಷಕರ ಮಾರ್ಗದರ್ಶನದೊಂದಿಗೆ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವುದು ಈ ನಡುವೆ ಪೋಷಕರು ತಮ್ಮ ಮಕ್ಕಳ ಏಳಿಗೆಯ ಬಗ್ಗೆ ಸದಾ ಜಾಗೃತವಾಗಿರಬೇಕು ಎಂದರು. ಸಮಾಜದಲ್ಲಿ ವಿದ್ಯಾರ್ಥಿಗಳು ತಮ್ಮ ಪಾತ್ರವನ್ನು ಸಮರ್ಪಕವಾಗಿ ನಿರ್ವಹಿಸುವಂತಾಗಬೇಕು ಶೈಕ್ಷಣಿಕ ಅವಧಿಯಲ್ಲಿ ತಮ್ಮ ಗುರಿ ಸಾಧಿಸುವ ನಿಟ್ಟಿನಲ್ಲಿ ಪೋಷಕರ ಮತ್ತು ಗುರುಗಳ ಕನಸನ್ನು ನನಸು ಮಾಡಬೇಕಾಗಿದೆ ಎಂದರು.ಈ ಸಂದರ್ಭದಲ್ಲಿ ಶಿಕ್ಷಕರುಗಳು ಮಕ್ಕಳ ಪೋಷಕರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು.
ಈ ಸಂದರ್ಭ ಪೋಷಕರು ಮಾತನಾಡಿ ಶಾಲೆಯಲ್ಲಿ ಉತ್ತಮ ಶಿಕ್ಷಣ ನೀಡುತ್ತಿರುವ ಶಿಕ್ಷಕ ವರ್ಗದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಖಾಸಗಿ ಶಾಲೆಗಳಿಗೆ ಪೈಪೋಟಿ ನಡೆಸುವ ರೀತಿಯಲ್ಲಿ ಸಕಲ ಮೂಲಭೂತ ಸೌಕರ್ಯದೊಂದಿಗೆ ಶಿಕ್ಷಣ ನೀಡುತ್ತಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದರು.ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರುಗಳು ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಇದ್ದರು.
