ಗುರುವಂದನೆ‌ ಕಾರ್ಯಕ್ರಮದಲ್ಲಿ ಮಂಜುನಾಥ್ ಹೇಳಿಕೆ

ಕನ್ನಡಪ್ರಭ ವಾರ್ತೆ ಮೊಳಕಾಲ್ಮೂರು

ಗಡಿಭಾಗದ ವಿದ್ಯಾರ್ಥಿಗಳ ಸಬಲೀಕರಣಕ್ಕೆ ಪೋಷಕರು ಹೆಚ್ಚು ಶಿಕ್ಷಣಕ್ಕೆ ಪ್ರಾಶಸ್ತ್ಯ ನೀಡುವ ಮೂಲಕ ಭವಿಷ್ಯದಲ್ಲಿ ಅವರ ಬದುಕನ್ನು ರೂಪಿಸಿಕೊಳ್ಳಲು ಸಹಕಾರಿಯಾಗಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ್ ಹೇಳಿದರು.

ತಾಲೂಕಿನ ಮೇಲಿನಕಣಿವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಎಸ್‌ಡಿಎಂಸಿ, ಹಳೇ ವಿದ್ಯಾರ್ಥಿಗಳ ಸಂಘ ಹಾಗೂ ಶಾಲಾ ವತಿಯಿಂದ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಶಾಲೆಯಲ್ಲಿ ದೀರ್ಘಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತಿಹೊಂದಿದ ಶಿಕ್ಷಕರಿಗೆ ಗುರುವಂದನೆ‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಗತ್ತಿನ ಶ್ರೇಷ್ಠ ಸಂಬಂಧಗಳಲ್ಲಿ ಗುರುಶಿಷ್ಯರ ಸಂಬಂಧ ಅಮೂಲ್ಯವಾದುದು. ಈ ನಿಟ್ಟಿನಲ್ಲಿ ಹಳೇ ವಿದ್ಯಾರ್ಥಿಗಳು ಗುರುಗಳಿಗೆ ವಂದನೆಗಳನ್ನು ತಿಳಿಸುತ್ತಿರುವುದು ಶ್ಲಾಘನೀಯ. ಗುರು ಮತ್ತು ಶಿಷ್ಯರ ನಡುವೆ ಉತ್ತಮ ಬಾಂಧವ್ಯ ಇರಬೇಕು. ಗಡಿ ಭಾಗದಲ್ಲಿ ಮಕ್ಕಳು ವಿದ್ಯಾವಂತರಾಗಬೇಕು, ಪೋಷಕರು ನಿಮ್ಮ ಮಕ್ಕಳನ್ನು ಶಾಲೆಗೆ ಕಳಿಸಿ ಅಕ್ಷರಸ್ತರನ್ನಾಗಿಸಬೇಕು. ಶಿಕ್ಷಣದಿಂದ ಭಾಗಗಳು ಅಭಿವೃದ್ಧಿ ಸಾಧ್ಯವಿದೆ ಎನ್ನುವುದನ್ನು ಅರಿತುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಶಾಲೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಸನ್ಮಾನಿಸಲಾಯಿತು.

ಈ ಸಂಧರ್ಭದಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಜಿ.ಬಿ.ಮಮತಾ, ಪ್ರಧಾನ‌ ಕಾರ್ಯದರ್ಶಿ ಎಸ್.ಪಿ.ಪ್ರದೀಪ್ ಕುಮಾರ್, ಸರ್ಕಾರಿ ನೌಕರ ಸಂಘದ ನಿರ್ದೇಶಕರಾದ ಕರಿಬಸಪ್ಪ, ನಾಗಭೂಷಣ್ ರೆಡ್ಡಿ, ನೌಕರ ಸಂಘದ ಮಾಜಿ ಅಧ್ಯಕ್ಷ ಈರಣ್ಣ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಹನುಮಂತ, ಸದಸ್ಯರಾದ ತಿಪ್ಪಯ್ಯ, ಮುಖಂಡ ಗೋವಿಂದ, ಶಾಲೆಯ ಮುಖ್ಯ ಶಿಕ್ಷಕ ಪ್ರಕಾಶ್, ಶಿಕ್ಷಕರಾದ ಮಾಲತೇಶ್, ಸೋಮಶೇಖರ್, ಶಿವಣ್ಣ ಇದ್ದರು.