ಹಲಗೂರು:

ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರಕುತ್ತಿದ್ದು, ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸುವಂತೆ ಬಿಇಒ ವಿ.ಈ.ಉಮಾ ಮನವಿ ಮಾಡಿದರು.

ಬಾಣಸಮುದ್ರ ಶಾಲೆಯಲ್ಲಿ ಶರಸಾಗರ-4 ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ಶಾಸಕ ನರೇಂದ್ರಸ್ವಾಮಿ ಅವರ ಕಾಳಜಿಯಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೂ ಮೂಲ ಸೌಕರ್ಯಗಳನ್ನು ಒದಗಿಸಿ ಸ್ಮಾರ್ಟ್ ತರಗತಿಗಳನ್ನು ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕಿರುತೆರೆ ನಟ ಕೀರ್ತಿ ಭಾನು, ಸಂಚಯ ಗಣೇಶ್, ಕಾಮಿಡಿ ಕಿಲಾಡಿ ಖ್ಯಾತಿಯ ಅಭಿಜಿತ್ ಗೌಡ, ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿ ಎಂ.ಕೆ.ಶ್ರೀನಿವಾಸ್, ಶಿಕ್ಷಣ ಸಂಯೋಜಕ ರವಿಕುಮಾರ್ ಮಾತನಾಡಿದರು.

ಇದೇ ವೇಳೆ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಈ ವೇಳೆ ಡಿ.ಹಲಸಹಳ್ಳಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಶ್ರೀಧರ್, ಮುಖ್ಯ ಶಿಕ್ಷಕ ಜಿ.ಎಸ್.ರವಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಬಸವರಾಜು, ರಾಮಕೃಷ್ಣ, ಕೃಷ್ಣ, ಮಲ್ಲೇಶ್, ರಾಮಚಂದ್ರ, ಶಿವಣ್ಣ, ಶಿವಮಲ್ಲಮ್ಮ, ಆನಂದ, ಲಕ್ಷ್ಮಪ್ಪ, ಶಿವಕುಮಾರ್, ಮನು, ಶಿಕ್ಷಕರಾದ ಆನಂದ, ರುಕ್ಮಿಣಿ ಭಾಗವಹಿಸಿದ್ದರು.ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿ ವಿತರಣೆ


ಶ್ರೀರಂಗಪಟ್ಟಣ:

ಅಲೆಯನ್ಸ್ ಐಕ್ಯ, ಶ್ರೀರಂಗನಾಯಕಿ ಸ್ತ್ರೀ ಸಮಾಜ ಹಾಗೂ ಕಾಮಧೇನು ಸ್ವ-ಸಾಯ ಸಂಘದಿಂದ ಪಟ್ಟಣದ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿ ವಿತರಿಸಲಾಯಿತು.

ನಂತರ ಆಲಯನ್ಸ್ ಆಫ್ ಐಕ್ಯ ಅಧ್ಯಕ್ಷ ಎನ್.ಸರಸ್ವತಿ ಮಾತನಾಡಿ, ಅಲಯನ್ಸ್ ಐಕ್ಯ ಸಂಸ್ಥೆಯೊಂದಿಗೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಲವು ಸಮಾಜ ಸೇವೆಗಳನ್ನು ಮಾಡುತ್ತಿದ್ದು, ಇದರ ಜೊತೆ ಈ ಬಾರಿ ಸರ್ಕಾರಿ ಶಾಲೆಗಳನ್ನು ಆಯ್ಕೆ ಮಾಡಿಕೊಂಡು ಮಕ್ಕಳಿಗೆ ಅಗತ್ಯ ಸಲಕರಣೆಗಳನ್ನು ವಿತರಿಸಲಾಗುತ್ತಿದೆ ಎಂದರು.

ಮಕ್ಕಳ ಕ್ರೀಡಾ ಚಟುವಟಿಕೆಗಾಗಿ ಸಾಮಾಗ್ರಿ, ಕ್ರೀಡಾಪಟುಗಳಿಗೆ ಕ್ರೀಡಾ ವಸ್ತ್ರಗಳನ್ನು ಆಯಾ ಶಾಲೆಗಳಿಗೆ ನೀಡಲಾಗುತ್ತಿದೆ. ನೋಟು ಬುಕ್ ಹಾಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಗಿದೆ ಎಂದರು.

ಈ ವೇಳೆ ಕಾಮಧೇನು ಸ್ವ-ಸಹಾಯ ಸಂಸ್ಥೆಯ ಅಧ್ಯಕ್ಷೆ ಆಶಾಲತಾ ಪುಟ್ಟೇಗೌಡ, ಶ್ರೀರಂಗ ನಾಯಕಿ ಸ್ತ್ರೀ ಸಮಾಜದ ಅಧ್ಯಕ್ಷೆ ವಿಶಾಲಾಕ್ಷಿ, ಕೌಶಲ್ಯ ಮುಖ್ಯೋಪಾಧ್ಯಾಯನಿ ಶಾಹಿದಾಬಾನು, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಜೆ. ಶ್ರೀನಿವಾಸ್, ಪ್ರಿಯದರ್ಶಿನಿ, ಗೋಪಾಲ್ ಗೌಡ ಸೇರಿದಂತೆ ಇತರರು ಇದ್ದರು.