ಸಾರಾಂಶ
ಶಿರಹಟ್ಟಿ: ಮಕ್ಕಳು ಶಾಲೆಯಲ್ಲಿ ಕಡಿಮೆ ಸಮಯ ಕಳೆಯುತ್ತಾರೆ. ಪಾಲಕರೊಂದಿಗೆ ಹೆಚ್ಚು ಸಮಯ ಇರುತ್ತಾರೆ. ಹೀಗಾಗಿ ಪಾಲಕರು ಮಕ್ಕಳ ಮೇಲೆ ನಿಗಾ ಇಡಬೇಕು. ಪಾಲಕರು ನಿರ್ಲಕ್ಷ್ಯ ತೋರಿದಲ್ಲಿ ಮಕ್ಕಳ ಮೇಲೆ ಕೆಟ್ಟ ಪರಿಣಾಮವಾಗುವ ಸಾಧ್ಯತೆ ಇದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎ. ಬಳಿಗೇರ ಹೇಳಿದರು.
ಪಟ್ಟಣದ ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ ಹಾಗೂ ಕ್ರಿಸ್ಮಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಕ್ಕಳು ಕಷ್ಟಪಟ್ಟು ಓದಬೇಕು. ತಂದೆ, ತಾಯಿಯ, ಗುರುಗಳ ಮಾತು ಕೇಳಬೇಕು. ನಂಬಿಕೆ ಉಳಿಸಿಕೊಂಡು ಸಾಧನೆ ಮಾಡಬೇಕು ಎಂದು ಕರೆ ನೀಡಿದರು.ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಮತ್ತು ಸಾಮಾಜಿಕವಾಗಿ ಅವರ ಬೆಳವಣಿಗೆಗೆ ಒಳ್ಳೆಯ ವಾತಾವರಣ ನಿರ್ಮಿಸುವ ಮೂಲಕ ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ನಮ್ಮ ನಿಮ್ಮೆಲ್ಲರ ಹೊಣೆ ಇದೆ. ಅವರ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು ಎಂದು ಕಿವಿಮಾತು ಹೇಳಿದ ಅವರು, ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಡಬೇಕು. ಅವರಲ್ಲಿ ಸದ್ಗುಣಗಳನ್ನು ಬೆಳೆಸಬೇಕು ಎಂದು ತಿಳಿಸಿದರು.
ಶಿರಹಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಡಿ. ಮಾಗಡಿ, ಡಾ. ಟಿ.ಎಂ. ಮಹೇಂದ್ರಕರ, ಸ್ಥಾಯಿ ಸಮಿತಿ ಅಧ್ಯಕ್ಷ ಹೊನ್ನಪ್ಪ ಶಿರಹಟ್ಟಿ, ಪಪಂ ಸದಸ್ಯ ಸಂದೀಪ ಕಪ್ಪತ್ತನವರ, ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಎಸ್.ಎಸ್. ಸಾಮ್ರಾಟ, ಪಶು ಆಸ್ಪತ್ರೆ ವೈದ್ಯಾಧಿಕಾರಿ ಡಾ. ನಿಂಗಪ್ಪ ಓಲೇಕಾರ, ಶಿಕ್ಷಣ ಇಲಾಖೆ ಸಿಆರ್‌ಪಿ ಎನ್.ಎನ್. ಸಾವಿರಕುರಿ ಮಾತನಾಡಿದರು.ಪಪಂ ಅಧ್ಯಕ್ಷೆ ದೇವಕ್ಕ ಗುಡಿಮನಿ, ಮುತ್ತು ಮಜ್ಜಗಿ, ಸುನಿಲ್ ಬಿ., ಮಾಬುಸಾಬ ಲಕ್ಷ್ಮೇಶ್ವರ, ಎಚ್.ಆರ್. ಬೆನಹಾಳ. ಎಫ್.ಎಸ್. ಕಪ್ಪತ್ತನವರ, ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಸುಖಲತಾ ಸಾಮ್ರಾಟ ಮತ್ತಿತರರು ಉಪಸ್ಥಿತರಿದ್ದರು. ಆನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.