ಪರಿಷತ್ ಅಭ್ಯರ್ಥಿ ಅಮರನಾಥ ಪಾಟೀಲ ಗೆಲುವು ಖಚಿತ: ಹಾಲಪ್ಪ ಆಚಾರ್

| Published : May 20 2024, 01:42 AM IST

ಪರಿಷತ್ ಅಭ್ಯರ್ಥಿ ಅಮರನಾಥ ಪಾಟೀಲ ಗೆಲುವು ಖಚಿತ: ಹಾಲಪ್ಪ ಆಚಾರ್
Share this Article
  • FB
  • TW
  • Linkdin
  • Email

ಸಾರಾಂಶ

ಈ ಕ್ಷೇತ್ರಕ್ಕೆ ಅಮರನಾಥ ಪಾಟೀಲರು ಹಳೇಬರು. ಸಾಕಷ್ಟು ಅಭಿವೃದ್ದಿ ಕಾರ್ಯಗಳಿಂದ ಚಿರಪರಿಚಿತರಾದವರು.

ಕನ್ನಡಪ್ರಭ ವಾರ್ತೆ ಯಲಬುರ್ಗಾ

ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಅಮರನಾಥ ಪಾಟೀಲ ಈ ಹಿಂದೆ ಎಚ್.ಕೆ.ಡಿ.ಬಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ, ಈಶಾನ್ಯ ಪದವೀಧರ ಕ್ಷೇತ್ರದಿಂದ ಚುನಾಯಿತರಾಗಿ ಈ ಭಾಗದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯ ಮಾಡಿದ್ದಾರೆ. ಅವರನ್ನು ಮತ್ತೊಮ್ಮೆ ಗೆಲ್ಲಿಸಿ ಪರಿಷತ್ತಿಗೆ ಕಳಿಸೋಣ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಹೇಳಿದರು.

ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಭಾನುವಾರ ಕರ್ನಾಟಕ ವಿಧಾನಪರಿಷತ್ ಚುನಾವಣೆ ಈಶಾನ್ಯ ಪದವೀಧರ ಕ್ಷೇತ್ರದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೋಂಡು ಮಾತನಾಡಿದ ಅವರು, ಈ ಕ್ಷೇತ್ರಕ್ಕೆ ಅಮರನಾಥ ಪಾಟೀಲರು ಹಳೇಬರು. ಸಾಕಷ್ಟು ಅಭಿವೃದ್ದಿ ಕಾರ್ಯಗಳಿಂದ ಚಿರಪರಿಚಿತರಾದವರು. ಹೀಗಾಗಿ ಜೂ. ೩ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಹೆಚ್ಚಿನ ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದರು.

ವಿರೋಧ ಪಕ್ಷದ ಮುಖ್ಯಸಚೇತಕ ದೊಡ್ಡನಗೌಡ ಪಾಟೀಲ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಹಗಲಿರುಳು ದುಡಿದಂತೆ ಪರಿಷತ್ ಚುನಾವಣೆಯಲ್ಲೂ ಹೆಚ್ಚಿನ ಮತಗಳನ್ನು ನಮ್ಮ ಪಕ್ಷದ ಅಭ್ಯರ್ಥಿಗೆ ಹಾಕಿಸಿ ಗೆಲ್ಲಿಸಲು ಪ್ರತಿಯೊಬ್ಬರು ಶ್ರಮವಹಿಸಬೇಕು ಎಂದು ಹೇಳಿದರು.

ಈಶಾನ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಅಮರನಾಥ ಪಾಟೀಲ ಮಾತನಾಡಿ, ತಾವು ಈ ಹಿಂದೆ ಆಶೀರ್ವಾದ ಮಾಡಿದಂತೆ ಮತ್ತೊಮ್ಮೆ ಪರಿಷತ್ತಿಗೆ ಕಳುಹಿಸಿ ಈ ಭಾಗದ ಪದವೀಧರರ ಸಮಸ್ಯೆಗಳ ಬಗ್ಗೆ ಸದನದಲ್ಲಿ ಧ್ವನಿ ಎತ್ತಿ ನ್ಯಾಯ ದೊರೆಕಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಲೋಕಸಭಾ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್‌, ಜಿಲ್ಲಾ ಬಿಜೆಪಿ ಅಧ್ಯಕ್ಷ ನವೀನ ಗುಳಗಣ್ಣವರ್, ಮಾಜಿ ಎಂಎಲ್‌ಸಿ ಅರುಣ ಶಹಾಪೂರ, ಬಳ್ಳಾರಿಯ ಕೆ.ಎಂ. ಮಹೇಶ್ವರ ಸ್ವಾಮಿ ಮಾತನಾಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ರಮೇಶ ನಾಡಗೇರ, ನರಸಿಂಗರಾವ್ ಕುಲಕರ್ಣಿ, ಚಂದ್ರಶೇಖರ ಹಲಗೇರಿ, ಗಿರೀಗೌಡ, ಬಸವಲಿಂಗಪ್ಪ ಭೂತೆ, ಬಸವರಾಜ ಗೌರಾ, ಸೋಮನಗೌಡ ಪಾಟೀಲ, ಮಲ್ಲನಗೌಡ ಕೋನನಗೌಡ್ರ, ಮಾರುತಿ ಹೊಸಮನಿ, ಸಿ.ಎಚ್. ಪೋಲಿಸಪಾಟೀಲ, ವೀರಣ್ಣ ಹುಬ್ಬಳ್ಳಿ, ಶಿವಶಂಕರರಾವ್ ದೇಸಾಯಿ, ವಿಶ್ವನಾಥ ಮರಿಬಸಪ್ಪನವರ, ಸುರೇಶಗೌಡ ಶಿವನಗೌಡ್ರ, ಬಸವರಾಜ ಗುಳಗಳಿ, ಶಿವಪ್ಪ ವಾದಿ, ಅಮರೇಶ ಹುಬ್ಬಳ್ಳಿ, ಅಯ್ಯನಗೌಡ ಕೆಂಚಮ್ಮನವರ್, ಸಂತೋಷಿಯಾ ಜೋಷಿ ಮತ್ತಿತರರು ಇದ್ದರು.