ಸಾರಾಂಶ
ಕಾಪು ಮಂಡಲ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು. ಕ್ಷೇತ್ರದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಕರ್ನಾಟಕ ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಭೋಜೇಗೌಡ ಹಾಗೂ ಡಾ. ಧನಂಜಯ್ ಸರ್ಜಿ ಅವರು ಜಯಗಳಿಸಿದ್ದು, ಆ ಪ್ರಯುಕ್ತ ಕಾಪು ಮಂಡಲ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು. ಕ್ಷೇತ್ರದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದರು.ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಯೋಗೀಶ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಹಾಗೂ ಕಾಪು ಮಂಡಲ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.