ಸಾರಾಂಶ
ಮಂಗಳ ಕಲಾ ಸಾಹಿತ್ಯ ವೇದಿಕೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿಗಳ ಆಶ್ರಯದಲ್ಲಿ ಪರ್ಕಳದ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಭಾನುವಾರ ಶ್ರೀ ವಿಘ್ನಶ್ವರ ಸಭಾಭವನದಲ್ಲಿ ಶಾಲಾ ಮಕ್ಕಳಿಗೆ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಯಿತು.
ಕನ್ನಡಪ್ರಭ ವಾರ್ತೆ ಪರ್ಕಳ
ಇಲ್ಲಿನ ಮಂಗಳ ಕಲಾ ಸಾಹಿತ್ಯ ವೇದಿಕೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿಗಳ ಆಶ್ರಯದಲ್ಲಿ ಪರ್ಕಳದ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಭಾನುವಾರ ಶ್ರೀ ವಿಘ್ನಶ್ವರ ಸಭಾಭವನದಲ್ಲಿ ಶಾಲಾ ಮಕ್ಕಳಿಗೆ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಯಿತು.ಸ್ಪರ್ಧೆಯನ್ನು ಗಣೇಶೋತ್ಸವ ಸಮಿತಿಯ ಸಂಚಾಲಕ ದಿಲೀಪ್ ರಾಜ್ ಹೆಗ್ಡೆ ಉದ್ಘಾಟಿಸಿ, ಮಕ್ಕಳಿಗೆ ಶುಭ ಹಾರೈಸಿದರು. ವೇದಿಕೆ ಅಧ್ಯಕ್ಷ ನಟರಾಜ್ ಪರ್ಕಳ, ಗೌರವಾಧ್ಯಕ್ಷ ಕೆ. ಪ್ರಕಾಶ್ ಶೆಣೈ ಪರ್ಕಳ, ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ದುರ್ಗದಾಸ್ ಹೆಗ್ಡೆ, ಪ್ರಮುಖರಾದ ಸಚ್ಚಿದಾನಂದ ನಾಯಕ್, ಸುರೇಶ ಶಾನ್‌ಭಾಗ್, ಮಹಿಳಾ ಘಟಕ ಅಧ್ಯಕ್ಷೆ ರಮ್ಯ ನಾಯಕ್, ಸದಸ್ಯೆ ಲತಾ ಸುರೇಶ್ ಉಪಸ್ಥಿತರಿದ್ದರು.ವೇದಿಕೆಯ ಪದಾಧಿಕಾರಿಗಳಾದ ಸಂದೀಪ್ ನಾಯ್ಕ್ ಕಬ್ಯಾಡಿ, ಗಣೇಶ್ ಸಣ್ಣಕ್ಕಿಬೆಟ್ಟು, ಅಶೋಕ್ ಸಣ್ಣಕ್ಕಿಬೆಟ್ಟು, ಸುಧೀರ್ ನಾಯಕ್ ನಗರ ಬೆಟ್ಟು, ಸುಧಾಕರ್ ನಾಯಕ್ ಕಬ್ಯಾಡಿ, ಕೃಷ್ಣ ನಾಯಕ್ ಸಣ್ಣಕ್ಕಿಬೆಟ್ಟು, ಅನಂತರಾಮ ನಾಯಕ್ ಸಣ್ಣಕ್ಕಿಬೆಟ್ಟು, ಗುರುಪ್ರಸಾದ್ ಪ್ರಭು ಕಬ್ಯಾಡಿ, ಗಣೇಶ್ ಕುಲಾಲ್ ಕೆಳ ಪರ್ಕಳ, ಸಂತೋಷ್ ಕುಮಾರ್ ಸಣ್ಣಕ್ಕಿಬೆಟ್ಟು, ರಾಘವೇಂದ್ರ ನಾಯಕ್ ಸಣ್ಣಕ್ಕಿಬೆಟ್ಟು, ರಾಜೇಶ್ ನಾಯಕ್ ಸಣ್ಣಕ್ಕಿಬೆಟ್ಟು ಇವರು ಉಪಸ್ಥಿತರಿದ್ದರು.ವೇದಿಕೆಯ ಕಾರ್ಯದರ್ಶಿ ಶ್ರೀನಿವಾಸ್ ನಾಯಕ್ ಚಕ್ರತೀರ್ಥ ಕಾರ್ಯಕ್ರಮ ನಿರೂಪಿಸಿದರು.ಸ್ಪರ್ಧೆಯಲ್ಲಿ 150ಕ್ಕೂ ಅಧಿಕ ಮಕ್ಕಳು ಭಾಗವಹಿಸಿದ್ದರು. ಸ್ಪರ್ಧೆಯ ತೀರ್ಪುಗಾರರಾಗಿ ವ್ಯಂಗ್ಯ ಚಿತ್ರಕಾರ ಗೋಪಿ ಹಿರೇಬೆಟ್ಟು ಹಾಗೂ ಗಣಪತಿ ವಿಗ್ರಹ ತಯಾರಕ ದೇವರಾಜ್ ನಾಯಕ್ ಸಣ್ಣಕ್ಕಿಬೆಟ್ಟು ಭಾಗವಹಿಸಿದ್ದರು.