ಸಾರಾಂಶ
ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಸಾರ್ವಜನಿಕರು ಪೊಲೀಸ್ ಇಲಾಖೆ ಯೊಂದಿಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಹೇಳಿದರು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ನಾಪೋಕ್ಲು ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನ ನಿಲುಗಡೆಯನ್ನು ಫೆ. 24ರಂದು ನಿಷೇಧಿಸಲಾಗಿದ್ದು ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ತಿಳಿಸಿದರು.ಎಮ್ಮೆಮಾಡು ಮಖಾಂ ಉರೂಸ್ ಪ್ರಯುಕ್ತ 24 ರಂದು ನಡೆಯಲಿರುವ ಸಾರ್ವಜನಿಕ ಸಮ್ಮೇಳನಕ್ಕೆ ಜಿಲ್ಲೆ ಮತ್ತು ಹೊರ ಜಿಲ್ಲೆ ಹಾಗೂ ಹೊರ ರಾಜ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಬರುವುದರಿಂದ ಅಲ್ಲದೇ ನಾಪೋಕ್ಲುವಿನಲ್ಲಿ ಸಂತೆ ನಡೆಯಲಿರುವುದರಿಂದ ನಾಪೋಕ್ಲು ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಸಾರ್ವಜನಿಕರಿಗೆ ತೊಂದರೆ ಆಗುವ ಸಂಭವ ಇರುತ್ತದೆ.
ಆದ್ದರಿಂದ ನಾಪೋಕ್ಲು ನಗರದಲ್ಲಿ ಸುಗಮ ಸಂಚಾರಕ್ಕಾಗಿ ಎಮ್ಮೆಮಾಡು ಮಖಾಂ ಉರೂಸ್ ಗೆ ಭಾಗವಹಿಸಲು ಬರುವವರು ಹಾಗೂ ಸಾರ್ವಜನಿಕರು ತಮ್ಮ ತಮ್ಮ ವಾಹನವನ್ನು ಕೊಟ್ಟಮುಡಿ ಜಂಕ್ಷನ್ ನಿಂದ ಎಮ್ಮೆಮಾಡು ಜಂಕ್ಷನ್ ವರೆಗೆ ರಸ್ತೆಯ ಎರಡು ಬದಿಯಲ್ಲಿ ನಿಲ್ಲಿಸದಂತೆ ಮನವಿ ಮಾಡಿದ್ದಾರೆ.ಸಾರ್ವಜನಿಕರಿಗೆ ಪಾರ್ಕಿಂಗ್ ಸ್ಥಳ:
1) ಪೊಲೀಸ್ ಮೈದಾನ2) ಕಂದಾಯ ಇಲಾಖೆಯ ಮುಂಭಾಗ
3) ಹಳೆ ಪೊಲೀಸ್ ವಸತಿ ತೆರವು ಮಾಡಿದ ಸ್ಥಳ4) ಚೆರಿಯಪರುಂಬು ಕ್ರೀಡಾಂಗಣದ ಮುಂಭಾಗ ಮೈದಾನ