ಸಾರಾಂಶ
ವಿದ್ಯಾರ್ಥಿಗಳ ಸಂಸತ್ ಅಣುಕು ಪ್ರದರ್ಶನ ಮಾಡಿರುವುದು ಅತ್ಯಂತ ಪ್ರೇರಣಾದಾಯಕವಾಗಿದೆ. ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳ ಮೂಲಕ ದೇಶದ ಭವಿಷ್ಯ ನಿರ್ಮಾಣಕ್ಕೆ ಸಿದ್ಧರಾಗುತ್ತಿದ್ದಾರೆ. ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಮತ್ತು ಯುವ ಜನಾಂಗದಲ್ಲಿ ಸಾಮಾಜಿಕ ಮತ್ತು ರಾಜಕೀಯ ಜವಾಬ್ದಾರಿಯ ಅರಿವು ಹೆಚ್ಚಿಸುತ್ತವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಕನ್ನಡಪ್ರಭ ವಾರ್ತೆ ಮುಧೋಳ
ವಿದ್ಯಾರ್ಥಿಗಳ ಸಂಸತ್ ಅಣುಕು ಪ್ರದರ್ಶನ ಮಾಡಿರುವುದು ಅತ್ಯಂತ ಪ್ರೇರಣಾದಾಯಕವಾಗಿದೆ. ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳ ಮೂಲಕ ದೇಶದ ಭವಿಷ್ಯ ನಿರ್ಮಾಣಕ್ಕೆ ಸಿದ್ಧರಾಗುತ್ತಿದ್ದಾರೆ. ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಮತ್ತು ಯುವ ಜನಾಂಗದಲ್ಲಿ ಸಾಮಾಜಿಕ ಮತ್ತು ರಾಜಕೀಯ ಜವಾಬ್ದಾರಿಯ ಅರಿವು ಹೆಚ್ಚಿಸುತ್ತವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.ಮುಧೋಳ ತಾಲೂಕಿನ ಯಡಹಳ್ಳಿ ಗ್ರಾಮದ ಶ್ರೀ ಶಿವಲಿಂಗಪ್ಪ ಬಸಪ್ಪ ಹೊರಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಶನಿವಾರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಯುವ ಸಂಸತ್ ಅಣುಕು ಸ್ಪರ್ಧೆ ಉದ್ಘಾಟಿಸಿಮಾತನಾಡಿದ ಅವರು, ವಿದ್ಯಾರ್ಥಿಗಳ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿದ್ದ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ವಿವಿಧ ಖಾತೆಗಳ ಸಚಿವರ ಸಂಭಾಷಣೆಯ ಅಣುಕು ಪ್ರದರ್ಶನವನ್ನು ವಿದ್ಯಾರ್ಥಿಗಳು ಅತ್ಯಂತ ಅಚ್ಚುಕಟ್ಟಾಗಿ ಪ್ರದರ್ಶಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಯುವ ಸಂಸತ್ ಸ್ಪರ್ಧೆಯ ಮೂಲಕ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳು ಮತ್ತು ರಾಜಕೀಯ ಜಾಗೃತಿ ಬೆಳೆಸುವ ಉದ್ದೇಶವನ್ನು ಈ ಕಾರ್ಯಕ್ರಮದಿಂದ ತಿಳಿದುಕೊಳ್ಳಲು ಸಹಕಾರಿ ಆಗಲಿದೆ ಎಂದರು.ಯಡಹಳ್ಳಿ ಅಡವಿ ಮಠದ ಚಂದ್ರಶೇಖರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ, ಲೋಕಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕಿವಡಿ, ಸೇರಿದಂತೆ ಎಸ್ಡಿಎಂಸಿ ಸದಸ್ಯರು, ಗ್ರಾಮದ ಗಣ್ಯರು, ಸ್ಥಳೀಯರು ಮತ್ತು ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.