ಸಂವಿಧಾನ ಜಾಗೃತಿಯ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ: ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ

| Published : Feb 08 2024, 01:34 AM IST

ಸಂವಿಧಾನ ಜಾಗೃತಿಯ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ: ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯಾದ್ಯಂತ ಜ.26ರಿಂದ ಆರಂಭಗೊಂಡ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಕೊಪ್ಪಳ ಜಿಲ್ಲೆಯಲ್ಲಿ ಈಗಾಗಲೇ ಆರಂಭಗೊಂಡಿದೆ. ಇಲ್ಲಿಯರೆಗೆ ಜಿಲ್ಲೆಯ 64 ಗ್ರಾಪಂಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ಸಂಚರಿಸಿದೆ.

ಕೊಪ್ಪಳ: ಸಂವಿಧಾನದ ಜಾಗೃತಿಗಾಗಿ ರಸಪ್ರಶ್ನೆ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಆನ್‌ಲೈನ್ ಮೂಲಕ ಭಾಗವಹಿಸಲು ಅವಕಾಶವಿದೆ ಎಂದು ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ ಹೇಳಿದರು.ಸಂವಿಧಾನದ ಜಾಗೃತಿ ಜಾಥಾ ಕಾರ್ಯಕ್ರಮ ಕುರಿತು ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ರಾಜ್ಯಾದ್ಯಂತ ಜ.26ರಿಂದ ಆರಂಭಗೊಂಡ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಕೊಪ್ಪಳ ಜಿಲ್ಲೆಯಲ್ಲಿ ಈಗಾಗಲೇ ಆರಂಭಗೊಂಡಿದೆ. ಇಲ್ಲಿಯರೆಗೆ ಜಿಲ್ಲೆಯ 64 ಗ್ರಾಪಂಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ಸಂಚರಿಸಿದೆ. ಸಂವಿಧಾನ ಜಾಗೃತಿ ಜಾಥಕ್ಕೆ ಎಲ್ಲ ಗ್ರಾಪಂಗಳಲ್ಲಿ ಅದ್ಧೂರಿ ಸ್ವಾಗತದ ಮೂಲಕ ಸಂವಿಧಾನ ಪೀಠಿಕೆ ಓದುವುದು, ಸೈಕಲ್ ಜಾಥಾ, ಬೈಕ್ ರ್‍ಯಾಲಿಯಲ್ಲಿ ಹಾಗೂ ಇತರ ಕಾರ್ಯಕ್ರಮಗಳ ಮೂಲಕ ಸಂವಿಧಾನದ ಬಗ್ಗೆ ಅರಿವನ್ನು ಜನಸಾಮಾನ್ಯರಿಗೆ ತಲುಪಿಸಲಾಗುತ್ತಿದೆ ಎಂದರು.ಸಂವಿಧಾನ, ಪೀಠಿಕೆ, ಅದರ ಮೌಲ್ಯಗಳು ಹಾಗೂ ಮುಖ್ಯವಾಗಿ ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮ ಮುಖ್ಯ ಉದ್ದೇಶವಾಗಿದೆ. ಈ ಕುರಿತು ಹೆಚ್ಚಿನ ಅರಿವು ಮೂಡಿಸಲು ಹೊಸ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಸಂವಿಧಾನದ ಬಗ್ಗೆ ಇರುವ ಜ್ಞಾನ ಮತ್ತು ಆಸಕ್ತಿ ಪಡೆಯಲು ಹಾಗೂ ಹೆಚ್ಚಿಸಲು ಗೂಗಲ್ ಫಾರ್ಮ್ನಲ್ಲಿ ಕ್ವಿಜ್ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಯಲ್ಲಿ ಸಂವಿಧಾನದ ಕುರಿತ ಬಹು ಆಯ್ಕೆಯ 15 ಪ್ರಶ್ನೆಗಳನ್ನು ನೀಡಲಾಗುವುದು. ಎಲ್ಲ ಸಾರ್ವಜನಿಕರು ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜು ಇದ್ದರು.