ಕಲಿಕೆ ಜತೆಗೆ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಿ

| Published : Jul 15 2024, 01:45 AM IST

ಕಲಿಕೆ ಜತೆಗೆ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಿ
Share this Article
  • FB
  • TW
  • Linkdin
  • Email

ಸಾರಾಂಶ

ಕಾಲೇಜು ಮಟ್ಟದಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳು ಪಠ್ಯದ ನಿರಂತರ ಕಲಿಕೆ ಜೊತೆಗೆ ಕಲೆ-ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಸಕ್ರೀಯವಾಗಿ ಪಾಲ್ಗೊಳ್ಳಬೇಕು. ಆಗ ಮಾತ್ರ ವಿದ್ಯಾರ್ಥಿ ಜೀವನ ಪರಿಪಕ್ವವಾಗಿರುತ್ತದೆ ಎಂದು ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯ ಕನ್ನಿಕಾ ಪರಮೇಶ್ವರಿ ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ತುಮಕೂರು

ನಗರದ ಬಯಲುರಂಗ ಮಂದಿರದಲ್ಲಿ ಶ್ರೀ ಸಿದ್ಧಾರ್ಥ ಇನ್ಸಿಟ್ಯೂಟ್ ಆಫ್ ಬ್ಯೂಸಿನೆಸ್ ಮ್ಯಾನೇಜ್‌ಮೆಂಟ್ ವತಿಯಿಂದ ಹಮ್ಮಿಕೊಂಡಿದ್ದ ಮ್ಯಾನೇಜ್‌ಮೆಂಟ್, ಟೆಕ್‌ನಿಕಲ್ ಮತ್ತು ಸಾಂಸ್ಕೃತಿಕ ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು/ ಪದವಿ ಹಂತದಲ್ಲಿ ಅನೇಕ ತಿರುವುಗಳಾಗುತ್ತವೆ. ದೈಹಿಕ ಪರಿಪಕ್ವತೆಯ ಜೊತೆಗೆ ಮಾನಸಿಕ ಸಮತೋಲನವೂ ಅಗತ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಾಂಸ್ಕ್ರತಿಕ ಕಾರ್ಯಕ್ರಮಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಸಾಹೇ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಬಿ.ಲಿಂಗೇಗೌಡ ಮಾತನಾಡಿ, ವಿದ್ಯಾರ್ಥಿಗಳು ಸದಾ ಕ್ರೀಯಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮನೋಧರ್ಮ ಬೆಳಸಿಕೊಳ್ಳಬೇಕು. ವಿವಿಧ ಸಂಸ್ಕೃತಿಗಳ ಸಾಂಪ್ರದಾಯಿಕ ಸಂಗೀತ, ನೃತ್ಯ ಮತ್ತು ಕಲಾ ಪ್ರದರ್ಶನಗಳು ಮನೋರಂಜನೆಯ ಜೊತೆಗೆ ನಾಡು-ನುಡಿ-ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸುತ್ತವೆ ಎಂದರು.

ವಿವಿಧ ಕಾಲೇಜುಗಳಿಂದ ಆಗಮಿಸಿದ್ದ ತಂಡಗಳು ಗುಂಪು ನೃತ್ಯ, ಫ್ಯಾಷನ್ ಶೋ, ಜೋಡಿ ನೃತ್ಯ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ನಡೆಸಿಕೊಟ್ಟರು. ಎಸ್‌ಎಸ್‌ಐಬಿಎಂನ ಪ್ರಾಂಶುಪಾಲ ಡಾ.ಮಮತ.ಜಿ ಸೇರಿಂದಂತೆ ಬೋಧಕ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.