ಸಾರಾಂಶ
ವಿಜ್ಞಾನದ ವಿಷಯದಲ್ಲಿ ಹೆಚ್ಚು ಆಸಕ್ತಿ ವಹಿಸಿದರೆ ಭವಿಷ್ಯದಲ್ಲಿ ವಿಜ್ಞಾನಿಗಳಾಗಿ ಹೊರ ಹೊಮ್ಮಬಹುದು. ಸರ್ಕಾರಿ ಶಾಲೆಗಳ ಮಕ್ಕಳು ಹೆಚ್ಚಿನ ವ್ಯಾಸಂಗಕ್ಕಾಗಿ ಮುಂದಿನ ತರಗತಿಗಳಿಗೆ ಹೋದಾಗ ವಿಜ್ಞಾನದ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಬೇಕು
ಕನ್ನಡಪ್ರಭ ವಾರ್ತೆ ಮಾಲೂರು
ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಿಜ್ಞಾನದ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸಿ ಪಾಲ್ಗೂಳುವ ಮೂಲಕ ಭವಿಷ್ಯದಲ್ಲಿ ದೇಶದಲ್ಲಿ ವಿಜ್ಞಾನಿಗಳಾಗಿ ಹೊರಹೊಮ್ಮುವಂತೆ ಏರೋನಾಟಿಕಲ್ ಡೆವಲಪ್ಮೆಂಟ್ ಎಸ್ಟಾಬ್ಲಿಷ್ಮೆಂಟ್ ಎಸ್.ಸಿ ಮತ್ತು ಎಸ್.ಟಿ ಉದ್ಯೋಗಿಗಳ ಮತ್ತು ಅಧಿಕಾರಿಗಳ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಪಿ.ಎಸ್.ವೆಂಕಟೇಶ್ ಕರೆ ನೀಡಿದರು.ಏರೋನಾಟಿಕಲ್ ಡೆವಲಪ್ಮೆಂಟ್ ಎಸ್ಟಾಬ್ಲಿಷ್ಮೆಂಟ್ ಎಸ್.ಸಿ ಮತ್ತು ಎಸ್.ಟಿ ಉದ್ಯೋಗಿಗಳ ಮತ್ತು ಅಧಿಕಾರಿಗಳ ವೆಲ್ಫೇರ್ ಅಸೋಸಿಯೇಷನ್ ಬೆಂಗಳೂರು ವತಿಯಿಂದ ಚಿಕ್ಕಕುಂತೂರು ಗ್ರಾಪಂ ವ್ಯಾಪ್ತಿಯ ಭುವನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಂಪ್ಯೂಟರ್ ವಿತರಿಸಿ ಮಾತನಾಡಿದರು.ವಿಜ್ಞಾನದ ವಿಷಯದಲ್ಲಿ ಹೆಚ್ಚು ಆಸಕ್ತಿ ವಹಿಸಿ ಚಟುವಟಿಕೆಗಳನ್ನು ಮಾಡುವುದರಿಂದ ಮುಂದಿನ ಭವಿಷ್ಯದಲ್ಲಿ ವಿಜ್ಞಾನಿಗಳಾಗಿ ಹೊರ ಹೊಮ್ಮಬಹುದು. ಸರ್ಕಾರಿ ಶಾಲೆಗಳ ಮಕ್ಕಳು ಹೆಚ್ಚಿನ ವ್ಯಾಸಂಗಕ್ಕಾಗಿ ಮುಂದಿನ ತರಗತಿಗಳಿಗೆ ಹೋದಾಗ ವಿಜ್ಞಾನದ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಸರ್ಕಾರಿ ಸವಲತ್ತುಗಳು ಹಾಗೂ ದಾನಿಗಳು ನೀಡುವ ಸೌಲತ್ತುಗಳನ್ನು ಬಳಸಿಕೊಂಡು ಶೈಕ್ಷಣಿಕವಾಗಿ ಪ್ರಗತಿ ಸಾಧಿಸುವಂತೆ ಹೇಳಿದರು.
ಈ ಸಂದರ್ಭದಲ್ಲಿ ಏರೋನಾಟಿಕಲ್ ಡೆವಲಪ್ಮೆಂಟ್ ಎಸ್ಟಾಬ್ಲಿಷ್ಮೆಂಟ್ ಎಸ್.ಸಿ ಮತ್ತು ಎಸ್.ಟಿ ಉದ್ಯೋಗಿಗಳ ಮತ್ತು ಅಧಿಕಾರಿಗಳ ವೆಲ್ಫೇರ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಬಿ ನಾಯಕ್, ಕಾರ್ಯಕಾರಿ ಸಮಿತಿ ಸದಸ್ಯ ವೆಂಕಟೇಶ್, ವಿಜ್ಞಾಳಿಗಳಾದ ತಿರುಮಾರನ್, ರೇವತಿ, ಶಾಂತಶೀಲ, ಪೆನ್ಸಿಲ್ ರಾವ್, ಭುವನಹಳ್ಳಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ಭಾಗ್ಯಮ್ಮ ಸಹ ಶಿಕ್ಷಕಿ ಮಂಜುಳಾ ಸಿಬ್ಬಂದಿ ಹಾಜರಿದ್ದರು.