ಶಾಲಾ ಜೀವನದಲ್ಲೇ ಕ್ರೀಡಾಕೂಟದಲ್ಲಿ ಭಾಗವಹಿಸಿ: ಎ.ಕೆ.ನಾಗೇಂದ್ರಪ್ಪ

| Published : Oct 09 2025, 02:00 AM IST

ಸಾರಾಂಶ

ವಿದ್ಯಾರ್ಥಿಗಳು ತಮ್ಮ ಶಾಲೆ ಜೀವನದಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸುವುದು ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಹೇಳಿದರು. ಪಟ್ಟಣದ ವಿವೇಕಾನಂದ ಲಯನ್ಸ್ ವಿದ್ಯಾ ಸಂಸ್ಥೆ ಆವರಣದಲ್ಲಿ ಬುಧವಾರ ನಡೆದ ಪ್ರೌಢಶಾಲೆಗಳ ತಾಲೂಕು ಮಟ್ಟದ ಕ್ರಿಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹೊಳೆಹೊನ್ನೂರು: ವಿದ್ಯಾರ್ಥಿಗಳು ತಮ್ಮ ಶಾಲೆ ಜೀವನದಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸುವುದು ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಹೇಳಿದರು. ಪಟ್ಟಣದ ವಿವೇಕಾನಂದ ಲಯನ್ಸ್ ವಿದ್ಯಾ ಸಂಸ್ಥೆ ಆವರಣದಲ್ಲಿ ಬುಧವಾರ ನಡೆದ ಪ್ರೌಢಶಾಲೆಗಳ ತಾಲೂಕು ಮಟ್ಟದ ಕ್ರಿಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕ್ರೀಡೆಯಿಂದ ತಳ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ ಅಂತಾರಾಷ್ಟೀಯ ಮಟ್ಟಕ್ಕೆ ತಲುಪಲು ಸಾಧ್ಯವಾಗುತ್ತದೆ. ಅದಕ್ಕಾಗಿ ನಿರಂತರ ಪರಿಶ್ರಮ ಪಡಬೇಕು. ಕ್ರೀಡಾ ಪಟುಗಳು ಕ್ರೀಡಾ ಮನೋಭಾವದಲ್ಲಿ ಭಾಗವಹಿಸಿ ತೀರ್ಪುಗಾರರ ನಿರ್ಣಯಕ್ಕೆ ಬದ್ಧರಾಗಿರಬೇಕು ಎಂದರು.

ಶಾಸಕರಾದ ಶಾರದಾ ಪೂರ್ಯನಾಯ್ಕ್ ಮಾತನಾಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಪಂಚಾಕ್ಷರಿ, ವಿವೇಕಾನಂದ ಲಯನ್ಸ್ ಸಂಸ್ಥೆ ಅಧ್ಯಕ್ಷ ಜಿ.ಆರ್.ಸೀತಾರಾಮ್, ಕಾರ್ಯದರ್ಶಿ ದ್ಯಾಮಪ್ಪ, ಖಜಾಂಚಿ ಎಚ್.ಸಿ.ರಾಜೇಶ್, ಸದಸ್ಯರಾದ ಬಿ.ಎಸ್.ನಾಗರಾಜ್, ಜಿ.ಎನ್.ಸತೀಶ್, ಜಿ.ವೈ.ನಾಗರಾಜ್‍ರಾವ್ ಗಡದೆ, ಪ್ರವೀಣ್, ಕೋಡಮಗ್ಗೆ ಪ್ರಶಾಂತ್, ಮುಖ್ಯಶಿಕ್ಷಕ ಎಚ್.ಸುರೇಶ್, ದೈಹಿಕ ಶಿಕ್ಷಣ ಶಿಕ್ಷಕ ಶಿವರಾಜ್, ಪ್ರಕಾಶ್, ವಿವಿಧ ಶಾಲೆಗಳ ಮುಖ್ಯಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಕ್ರೀಡಾ ಪಟುಗಳು ಹಾಜರಿದ್ದರು.